ಬೆಳ್ತಂಗಡಿ :ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್‌ ಆಫೀಸರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್‌ (35) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್‌ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಾಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್‌ ಆಫೀಸರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಉತ್ತಮ ಸಂಬಳವು ಇತ್ತು, ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಯುವಶಕ್ತಿ ಫ್ರೆಂಡ್ಸ್‌ ಇದರ ಸದಸ್ಯರಾಗಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸ್‌ ತನಿಖೆಯಿಂದ ತಿಳಿದು ಬರಬೇಕಾಗಿದೆ.ಈ ಸಂಭಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ತಂದೆ, ತಾಯಿ,ಪತ್ನಿ, ಓರ್ವ ಸಹೋದರ, ಸಹೋದರಿ, ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!