ರಾಮನಗರ, ಫೆಬ್ರವರಿ 16: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಕಾರೊಂದು ಮತ್ತೊಂದು ಕಾರಿನ ಮೇಲೆ ಹತ್ತಿದೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುತ್ತಿದ್ದಾಗ ಘಟನೆ ಸಂಭವಿಸಿದೆ.

ಬ್ಯಾರಿಕೇಡ್ ಗಮನಿಸದೆ ಹಠಾತ್ತಾಗಿ ಕಾರು ಚಾಲಕ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿ ಗುದ್ದಿದ ರಭಸಕ್ಕೆ ಇನ್ನೊಂದು ಕಾರಿನ ಮೇಲೇರಿ ಹೋಗಿದೆ. ಅದೃಷ್ಟವಶಾತ್ 2 ಕಾರುಗಳಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!