80 ಜನರಿದ್ದ ಡೆಲ್ಟಾ ಏರ್‌ಲೈನ್ಸ್ ವಿಮಾನ ಕೆನಡಾದ ಟೊರೊಂಟೊ ಪಿಯರ್ಸನ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದ್ದು, ತಲೆಕೆಳಗಾಗಿ ಉರುಳಿದೆ.

80 ಜನರನ್ನು ಹೊತ್ತೊಯ್ಯುತ್ತಿದ್ದ ಡೆಲ್ಟಾ ಏರ್‌ಲೈನ್ಸ್ ವಿಮಾನವು ಕೆನಡಾದ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದ್ದು, ವಿಮಾನ ತಲೆಕೆಳಗಾಗಿ ಉರುಳಿ ಬಿದ್ದಿದೆ.

ಅದರಲ್ಲಿ 76 ಪ್ರಯಾಣಿಕರು ಮತ್ತು 4 ಸಿಬ್ಬಂದಿ ಇದ್ದರು.

ಡೆಲ್ಟಾ ಏರ್‌ಲೈನ್ಸ್ ವಿಮಾನ 4819, ಮಿನ್ನಿಯಾಪೋಲಿಸ್‌ನ ಸೇಂಟ್ ಪಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಒಂಟಾರಿಯೊದ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ವಿಮಾನದಲ್ಲಿದ್ದ ಎಲ್ಲಾ 80 ಜನರನ್ನು ಸ್ಥಳಾಂತರಿಸಲಾಯಿತು. ಆದರೆ, ಒಂದು ಮಗು ಸೇರಿದಂತೆ ಕನಿಷ್ಠ 15 ಜನರು ಅಪಘಾತದಲ್ಲಿ ಗಾಯಗೊಂಡರು ಮತ್ತು ಇಬ್ಬರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!