ನೌಕಾಪಡೆಯ ಸೂಕ್ಷ್ಮ ಮಾಹಿತಿ ಹಂಚಿಕೊಳ್ಳುತ್ತಿದ್ದ ಮತ್ತೋರ್ವನನ್ನು ಎನ್‌ಐಎ ಪೊಲೀಸರು (NIA Police) ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಅಭಿಲಾಷ್ ಪಿ.ಎ ಬಂಧಿತ ಆರೋಪಿ. ಪಾಕ್ ಐಎಸ್‌ಐ-ಸಂಬಂಧಿತ ವಿಶಾಖಪಟ್ಟಣಂ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕಾರವಾರದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು.

ಇಂದು ಮತ್ತೊಬ್ಬನನ್ನು ಬಂಧಿಸುವ ಮೂಲಕ ಒಟ್ಟು ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆ ಆಗಿದೆ. ಈ ಕುರಿತು ಎನ್ಐಎ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನಿನ್ನೆ ವೆಥನ್ ಲಕ್ಷ್ಮಣ್ ತಾಂಡೇಲ್ ಮತ್ತು ಅಕ್ಷಯ್ ರವಿ ನಾಯ್ಕ್ ಎಂಬುವವರನ್ನು ಅಧಿಕಾರಿಗಳು ಬಂಧಿಸಿದ್ದರು. ಬಂಧಿತರಾಗಿರುವ ಎಲ್ಲಾ ಮೂವರು ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನದ ಗುಪ್ತಚರ ಆಪರೇಟಿವ್‌ಗಳೊಂದಿಗೆ (ಪಿಐಒ) ಸಂಪರ್ಕದಲ್ಲಿದ್ದರು. ಕಾರವಾರ ನೌಕಾನೆಲೆ ಮತ್ತು ಕೊಚ್ಚಿ ನೌಕಾನೆಲೆಯಲ್ಲಿ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು.

ಎನ್‌ಐಎ ತನಿಖೆ ಪ್ರಕಾರ, ಮಾಹಿತಿಯ ವಿನಿಮಯವಾಗಿ ಪಿಐಒಗಳಿಂದ ಹಣವನ್ನು ಪಡೆಯುತ್ತಿದ್ದರು. ಐಪಿಸಿಯ ಸೆಕ್ಷನ್ 120 ಬಿ ಮತ್ತು 121 ಎ, ಯುಎ (ಪಿ) ಕಾಯ್ದೆ ಸೆಕ್ಷನ್ 17 ಮತ್ತು 18 ಮತ್ತು ಸೆಕ್ಷನ್ 3 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆದಿದೆ.

ಆಂಧ್ರಪ್ರದೇಶದ ಕೌಂಟರ್ ಗುಪ್ತಚರ ದಾಖಲಿಸಿದ ಪ್ರಕರಣದಲ್ಲಿ ಎನ್‌ಐಎ ಇದುವರೆಗೆ ಇಬ್ಬರು ಪಾಕಿಸ್ತಾನಿ ಆಪರೇಟಿವ್‌ ಸೇರಿದಂತೆ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಭಾರತೀಯ ನೌಕಾಪಡೆ ಸೂಕ್ಷ್ಮ ಪ್ರಮುಖ ಮಾಹಿತಿ ಸೋರಿಕೆಗೆ ಸಂಬಂಧಿಸಿದ ಬೇಹುಗಾರಿಕೆ ದಂಧೆ ನಡೆಸಿದ ಆರೋಪ ಮಾಡಲಾಗಿದೆ. ಪಾಕಿಸ್ತಾನಿ ಪ್ರಜೆ ಮೀರ್ ಬಾಲಾಜ್ ಖಾನ್ ಮತ್ತು ಬಂಧಿತ ಆರೋಪಿ ಆಕಾಶ್ ಸೋಲಂಕಿ ಭಾಗಿಯಾಗಿರುವ ಬಗ್ಗೆ ಎನ್‌ಐಎ ತನಿಖೆಯಿಂದ ಬಯಲಾಗಿದೆ.

ಜೂನ್ 2023ರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಪಿಐಒ ಅಲ್ವೆನ್, ಮನಮೋಹನ್ ಸುರೇಂದ್ರ ಪಾಂಡ ಮತ್ತು ಅಮಾನ್ ಸಲೀಂ ಶೇಖ್ ಎಂದು ಗುರುತಿಸಲಾಗಿದ್ದು, ಪಾಕ್ ಮೂಲದ ಮತ್ತು ಇತರ ದೇಶವಿರೋಧಿ ಬೇಹುಗಾರಿಕೆ ಪಿತೂರಿಯನ್ನು ಬಯಲಿಗೆಳೆಯಲು ಎನ್‌ಐಎ ತನಿಖೆ ಮುಂದುವರೆಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!