
ನಿಂತಿದ್ದ ಬಸ್‌ಗೆ ಮಹಾಕುಂಭ ಮೇಳದಿಂದ ಹಿಂದಿತುಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 10 ಜನರಿಗೆ ಗಾಯಗಳಾಗಿರುವಂತಹ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಬುಧವಾರ ಮುಂಜಾನೆ ಈ ಘಟನೆ ನಡೆದಿದೆ.ಮಿನಿ ಟ್ರಾವೆಲರ್‌ನ ಚಾಲಕ ನಿದ್ರೆಗೆ ಜಾರಿದ ಕಾರಣ ವಾಹನ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ. ಮಾತ್ರವಲ್ಲದೇ ಕಾರನ್ನು ಅತಿ ವೇಗವಾಗಿ ಚಲಾಯಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಬಸ್ ಮುಂದಕ್ಕೆ ತಳ್ಳಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪೊಲೀಸರ ಪ್ರಕಾರ ಭಕ್ತರು ಮಹಾರಾಷ್ಟ್ರ ಮತ್ತು ಕರ್ನಾಟಕದವರಾಗಿದ್ದು, ಪ್ರಯಾಗರಾಜ್‌ನ ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿ ಹಿಂತಿರುಗುತ್ತಿದ್ದರು. ಮೃತಪಟ್ಟ ಮಹಿಳೆಯನ್ನು ಕರ್ನಾಟಕದ ಬರಗಾಂವ್ ಜಿಲ್ಲೆಯ ಧರಕ್ ಸೈನಿ (55) ಎಂದು ಗುರುತಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಅವರೆಲ್ಲರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
