
ಚಿ ಕ್ಕಮಗಳೂರು ಜಿಲ್ಲೆಯ ದಾಸರಹಳ್ಳಿ ಗ್ರಾಮದ ಬಳಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಪೂರ್ಣಿಮಾ, ಮಧು ಎಂದು ಗುರುತಿಸಲಾಗಿದೆ. ಪ್ರೇಮಿಗಳು ಬೆಂಗಳೂರಿನಿಂದ ಯೆಲ್ಲೋ ಬೋರ್ಡ್ ನಂಬರ್ ಪ್ಲೇಟ್ ಕಾರಿನಲ್ಲಿ ಚಿಕ್ಕಮಗಳೂರಿಗೆ KA 03 AD 4628 ನೋಂದಣಿಯ ಕಾರಿನಲ್ಲಿ ಆಗಮಿಸಿದ್ದಾರೆ.
ಕಾಫಿ ತೋಟದ ರಸ್ತೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಪೂರ್ಣಿಮ ಕತ್ತು ಹಿಸುಕಿದ ಕೊಂದಿರುವ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕಾಫಿ ತೋಟದಲ್ಲಿದ್ದ ಮರವೊಂದಕ್ಕೆ ಮಧು ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ನಡೆಸುತ್ತಿದ್ದಾರೆ.
