
ಪುತ್ತೂರು: ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ (53 ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ತಂದೆ, ತಾಯಿ ಹಾಗೆ ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕ್ಲರ್ಕ್ ಆಗಿರುವ ಪತ್ನಿ ಅನಿತಾ ಹಾಗೂ ಪುತ್ರರಾದ ಅಂಚಿತ್ ಮತ್ತು ನಿಶ್ಚಲ್ ಸೇರಿದಂತೆ ಅಪಾರ ಕುಟುಂಬಸ್ಥರು ಬಂಧು ಬಳಗವನ್ನು ಅಗಲಿದ್ದಾರೆ.
