
ಪುತ್ತೂರು : ನಗರಸಭೆಯು ರೂ.25 ಲಕ್ಷ ವೆಚ್ಚದಲ್ಲಿ ನಡೆಸುತ್ತಿರುವ ಚರಂಡಿ ಕಾಮಗಾರಿಯ ಶಿಲಾನ್ಯಾಸವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಫೆ.26ರಂದು ನಡೆಯಿತು.
ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ನಗರಸಭೆ ಅಭಿವೃದ್ಧಿ ಕಾರ್ಯದಲ್ಲಿ ದೇಗುಲದ ಸಮಿತಿಯೊಂದಿಗೆ ಉತ್ತಮ ರೀತಿಯಲ್ಲಿ ಸಹಕರಿಸುತ್ತಿದೆ. ಇಂದು ಶಿಲಾನ್ಯಾಸಗೊಂಡ ಕಾಮಗಾರಿ ಜಾತ್ರೆಯೊಳಗೆ ಮುಗಿಸುವ ಭರವಸೆ ನೀಡಿದ್ದಾರೆ ಎಂದರು.
ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಸದಸ್ಯ ಕೆ.ಜೀವಂಧರ್ ಜೈನ್, ನಗರಸಭೆ ಉಪಾಧ್ಯಕ್ಷ ಬಾಲಚಂದ್ರ, ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಇಂದಿರಾ ಆಚಾರ್ಯ, ಮನೋಹರ್ ಕಲ್ಲಾರೆ, ವಿದ್ಯಾ ಗೌರಿ, ಪ್ರೇಮಲತಾ ಜಿ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಭಾಶ್ ರೈ ಬೆಳ್ಳಿಪ್ಪಾಡಿ, ಈಶ್ವರ ಬೇಡೆಕರ್, ವಿನಯ ಸುವರ್ಣ ಉಪಸ್ಥಿತರಿದ್ದರು
