ಶಿವರಾತ್ರಿಯ ನಿಮಿತ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕೊಯಮತ್ತೂರಿನ ಇಶಾ ಫೌಂಡೇಶನ್ ನ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗಿದ್ದು , ಆಧ್ಯಾತ್ಮಿಕ ಲೋಕದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ. ಈ ನಡುವೆ ತಮ್ಮ ಬಾಲ್ಯದ ನೆನಪನ್ನು ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಪೋಸ್ಟ್ ಮೂಲಕ ಬಿಚ್ಚಿಟ್ಟಿದ್ದಾರೆ.

ಕೊಯಮತ್ತೂರಿನ ಇಶಾ‌ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ.ಸದ್ಗುರು ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಈ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಅನಿಸಿತು. ನನ್ನ ಹೆಸರಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ.

ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಮೊದಲು ಹೆಣ್ಮಕ್ಕಳಿಗೆ ಕೆಂಪಮ್ಮ ಅಂತ ಹೆಸರಿಡುತ್ತಾರೆ. ಗಂಡು ಮಕ್ಕಳಿಗೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಅದು ಪದ್ದತಿ. ಶಿವಾಲ್ದಪ್ಪನಿಗೆ ನನ್ನ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ನನಗೆ ಮೊದಲು ಕೆಂಪರಾಜ್ ಅಂತ ಹೆಸರಿಟ್ಟು, ಆನಂತರ ಶಿವಾಲ್ದಪ್ಪನಿಗಾಗಿ ಶಿವಕುಮಾರ್ ಅಂತ ಹೆಸರಿಟ್ಟರು ಎಂದು ಹೇಳಿದರು.

ಸದ್ಗುರು ಅವರ ಮಾತುಗಳಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯದ ಸಂಯೋಜನೆ ಇರುತ್ತದೆ. ಬದುಕಿನ ಒಳಹುಗಳ‌ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್ ಗಳು ಮನಸ್ಸಿಗೆ ಹಿತ ನೀಡಿದವು. ಜೀವನವೆಂದರೆ ಅನಂತ ಯಾತ್ರೆ.ಪ್ರತಿ ಕ್ಷಣವೂ ಒಂದು ಅಧ್ಯಾಯ, ಪ್ರತಿ ನಗುವೂ ಮತ್ತು ಆಲೋಚನೆಯೂ ನಮ್ಮ ಆಂತರಿಕ ಬೆಳಕಿಗೆ ಪೂರಕ. ನಿಜವಾದ ಸಂಪತ್ತು ಅಂದರೆ, ಆಂತರಿಕ ಶಾಂತಿ, ಆತ್ಮ-ಸಾಕ್ಷಾತ್ಕಾರ ಮತ್ತು ಆ ಭಾವನೆ, ಬದುಕಿನ ಪ್ರತಿಯೊಂದು ಕ್ಷಣದಲ್ಲಿ ಜೀವಂತವಾಗಿರುವ ಸತ್ಯ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

ಸಭಾಪತಿಗಳು ಹೊಸ ಅಧ್ಯಾಯ ಬರೆದಿದ್ದಾರೆ

ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸುವ ಮೂಲಕ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಸೇರಿ ಹೊಸ ಅಧ್ಯಾಯ ಆರಂಭಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಮಗೆ ಅವಕಾಶ ಸಿಕ್ಕಾಗ ಅದನ್ನು ಹೇಗೆ ಬಳಸಿಕೊಳ್ಳಬೇಕು ಎಂದು ನಾವುಗಳು ನಮ್ಮ ಸ್ಪೀಕರ್ ಯು.ಟಿ ಖಾದರ್ ಹಾಗೂ ಸಭಾಪತಿ ಹೊರಟ್ಟಿ ಅವರನ್ನು ನೋಡಿ ಕಲಿಯಬೇಕು. ಇವರಿಬ್ಬರೂ ಅನೇಕ ಬದಲಾವಣೆ ತಂದಿದ್ದು, ಸುವರ್ಣಸೌಧಕ್ಕೂ ಹೊಸ ರೂಪ ನೀಡುವ ಪ್ರಯತ್ನ ಮಾಡಿದ್ದಾರೆ. ಸರ್ಕಾರದ ಪರವಾಗಿ ಇಬ್ಬರಿಗೂ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಇದನ್ನು ಹೀಗೆ ಮುಂದುವರಿಸಿಕೊಂಡು ಹೋಗಬೇಕು ಎಂದರು.

ಒಬ್ಬ ಓದುಗ, ನಾಯಕನಾಗುತ್ತಾನೆ ಎಂದು ನಮ್ಮ ಗುರುಗಳು ಹೇಳುತ್ತಿದ್ದರು. ಹೀಗಾಗಿ ಪುಸ್ತಕ ಓದುವ ಹವ್ಯಾಸಕ್ಕೆ ಪುಷ್ಟಿ ನೀಡುವ ಕೆಲಸ ನಡೆಯುತ್ತಿದೆ. ಪ್ರತಿ ವರ್ಷ ಇದನ್ನು ಮುಂದುವರಿಸಿಕೊಂಡು ಹೋಗಲು ಸರ್ಕಾರ ಆದೇಶ ಮಾಡಲಿದೆ ಎಂದು ಸಿಎಂ ಹೇಳಿದ್ದಾರೆ. ಇಲ್ಲಿ ಪುಸ್ತಕ ಹಾಗೂ ಮಸ್ತಕದ ಜಾತ್ರೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ. ಪುಸ್ತಕಗಳ ಮೂಲಕ ಆಚಾರ ವಿಚಾರ ಪ್ರಚಾರ ಮಾಡಲು ನೆರವಾಗುತ್ತದೆ ಎಂದು ತಿಳಿಸಿದರು.

ನಾನು ಜೀವನದಲ್ಲಿ ಪುಸ್ತಕ ಹಿಡಿದು ಓದಿದವನಲ್ಲ, ಶಾಲೆಯಲ್ಲಿ ಹೇಗೋ ಅಲ್ಪಸ್ವಲ್ಪ ಓದಿ ಪಾಸ್ ಆದೆ. ಡಿಗ್ರಿಯಲ್ಲಿರುವಾಗ ಓದಲೇ ಇಲ್ಲ. ನಾನು ಮಂತ್ರಿಯಾದ ನಂತರ ಮುಕ್ತ ವಿವಿಯಲ್ಲಿ ಪದವಿ ಪಡೆದೆ. ನಾನು ಮೊದಲ ಬಾರಿಗೆ ವಿಧಾನ ಸಭೆಗೆ ಬಂದಾಗ, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ನಾಣಯ್ಯ ಅವರಂತಹ ಘಟಾನುಘಟಿಗಳು ಮಾತನಾಡುವಾಗ ನಾನು ಹೆಚ್ಚು ಓದಬೇಕಿತ್ತು ಎಂದು ಅನ್ನಿಸಿತ್ತು ಎಂದು ಹೇಳಿದರು.

ನಾನು ಓದಬೇಕು ಎಂದು ಪುಸ್ತಕ ಖರೀದಿ ಮಾಡುತ್ತೇನೆ. ಆದರೆ ಒಂದು ಪುಟ ಓದುವುದರೊಳಗೆ ಸುಸ್ತಾಗುತ್ತೇನೆ. ನಮ್ಮ ಮುಖ್ಯಮಂತ್ರಿಗಳು ದಿನ ಬೆಳಗ್ಗೆ ಪತ್ರಿಕೆ ಹಾಗೂ ಹೆಚ್ಚು ಪುಸ್ತಕ ಓದುತ್ತಾರೆ ಎಂದು ಕೇಳಿದ್ದೇನೆ. ಪುಸ್ತಕಗಳು ಜ್ಞಾನದ ಭಂಡಾರ. ಈಗ ಮೊಬೈಲ್ ಫೋನ್ ಗಳು ಬಂದಿದ್ದು, ಎಲ್ಲಾ ಮಾಹಿತಿಗಳು ಅಂಗೈಯಲ್ಲಿ ಲಭ್ಯವಿದೆ. ಅಷ್ಟರ ಮಟ್ಟಿಗೆ ತಂತ್ರಜ್ಞಾನ ಮುಂದುವರಿದಿದೆ. ಆದರೂ ಪುಸ್ತಕಗಳನ್ನು ಓದುವ ಹವ್ಯಾಸ ಇಟ್ಟುಕೊಳ್ಳಬೇಕು.

Leave a Reply

Your email address will not be published. Required fields are marked *

Join WhatsApp Group
error: Content is protected !!