
ಪುತ್ತೂರು; ಪುತ್ತೂರು ಸುಳ್ಯ ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳ ಸಹಕಾರಿ ಬಂಧುಗಳ ಅಭಿನಂದನಾ ಸಮಿತಿ ವತಿಯಿಂದ ಮಾರ್ಚ್ ೧ರ ಶನಿವಾರ
ಕೊಂಬೆಟ್ಟು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎನ್‌ಸಿಆರ್ ರಾಷ್ಟಿçÃಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಎಂ.ಎನ್.ರಾಜೇAದ್ರ ಕುಮಾರ್ ಮತ್ತು ದಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿಮಾನದ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ನಡೆಯಲಿರುವ ಈ ಅಭಿನಂದನಾ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ರಾಜ್ಯ ಸರ್ಕಾರದ ಮಾನವಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶ್ಯಾಮ್ ಭಟ್ ಅಭಿನಂದಿಸಲಿದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಶುಭಾಶಂಸನೆ ಮಾಡಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಮಾಸ್ ಸಂಸ್ಥೆಯ ಅಧ್ಯಕ್ಷ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ಸಹಕಾರಿಗಳೇ `ನಿಮ್ಮ-ನಮ್ಮ’ ಕಾರ್ಯಕ್ರಮ
ಸಹಕಾರಿ ಸಮಸ್ಯೆಗಳನ್ನು ಪರಿಹರಿಸಿ ಸಹಕಾರ ಸಂಘಗಳ ಅಭ್ಯುದಯಕ್ಕೆ ಕಾರಣೀಭೂತರಾದ ಡಾ.ಎಂ.ಎನ್.ರಾಜೇAದ್ರ ಕುಮಾರ್ ಅವರು ತಮ್ಮೊಟ್ಟಿಗೆ ಎಲ್ಲರನ್ನೂ ಬೆಳೆಸುವ ಕರ್ತೃತ್ವ ಶಕ್ತಿಯಾಗಿದ್ದಾರೆ. ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಪ್ರತಿಯೊಂದು ವಿಚಾರಗಳಿಗೂ ಸ್ಪಂಧಿಸುವ ವ್ಯಕ್ತಿಯಾಗಿದ್ದಾರೆ. ಈ ಇಬ್ಬರೂ ಸಹಕಾರಿ ಕ್ಷೇತ್ರದ ಅದ್ಭುತ ಸಾಧಕರಾಗಿದ್ದಾರೆ. ಈ ಕ್ಷೇತ್ರವನ್ನು ಬೆಳೆಸುವಲ್ಲಿ ಶ್ರಮಪಡುತ್ತಿದ್ದಾರೆ. ಅವರನ್ನು ಅಭಿನಂದಿಸುವ ಮೂಲಕ ನೈತಿಕ ಹುರುಪುಕೊಡುವ ಕೆಲಸ ನಾವು ಮಾಡಬೇಕಾಗಿದೆ. ಈ ನಿಮ್ಮ-ನಮ್ಮ ಕಾರ್ಯಕ್ರಮದಲ್ಲಿ ಸಹಕಾರಿಗಳೇ ಎಲ್ಲರೂ ಭಾಗಿಯಾಗಿ ಕಾರ್ಯಕ್ರಮ ಯಶಸ್ಸುಗೊಳಿಸಿ- ಎಸ್.ಬಿ ಜಯರಾಮ ರೈ ಬಳಜ್ಜ ಸಭಿನಂದನಾ ಸಮಿತಿ ಅಧ್ಯಕ್ಷರು.
