
ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರವಿವಾರ ಅನಿರೀಕ್ಷಿತವಾಗಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರ ಕಾರ್ಕಳದ ನಿವಾಸಕ್ಕೆ ಭೇಟಿ ನೀಡಿದರು.
ರಾಜಕೀಯಕ್ಕೆ ಕರೆತರಲು ಹಲವು ಬಾರಿ ಪ್ರಯತ್ನವೂ ನಡೆದಿತ್ತು. ಈಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆ ನಡುವೆ ಮತ್ತೆ ರಾಜ್ಯ ರಾಜಕಾರಣಕ್ಕೆ ಕರೆತರುವ ಉದ್ದೇಶದಿಂದ ಈ ಭೇಟಿ ನಡೆಸಿ, ಸಮಾಲೋಚನೆ ನಡೆಸಿದರು. ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಈ ಸಂದರ್ಭದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಿ, ಸಮ್ಮಾನಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಮಿಥುನ್ ರೈ ಮತ್ತಿತರರು ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟಿನ ವಿಶ್ವಸ್ಥ ಸುನಿಲ್ ಕುಮಾರ್ ಬಜಗೋಳಿ ಉಪಸ್ಥಿತರಿದ್ದರು.
