ಪುತ್ತೂರು :- ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿಯರವನ್ನು ಇಡಿ ಅಧಿಕಾರಿಗಳು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ದರ್ಬೆ ಜಂಕ್ಷನ್ ನಲ್ಲಿ ಫೆ 04 ರಂದು ಪ್ರತಿಭಟನೆ ನಡೆಯಿತು.
  ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು ರವರು, ಫ್ಯಾಸಿಸ್ಟ್ ಬಿಜೆಪಿ ಸರ್ಕಾರವು ತಮ್ಮ ವಿರುಧ್ದ ಯಾರೆಲ್ಲಾ ಮಾತನಾಡುತ್ತಾರೋ ಅವರನ್ನು ಇಂದು ಗುರಿಯಾಗಿಸುತ್ತಾ ಬಂದಿದೆ, ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ವಿವಿಧ ತನಿಖಾ ಸಂಸ್ಥೆಗಳನ್ನು ಉಪಯೋಗಿಸಿ ಸುಳ್ಳು ಕೇಸುಗಳನ್ನು ದಾಖಲಿಸಿ ಬಂಧಿಸಲಾಗುತ್ತಿದೆ, ಇದರ ಮುಂದುವರೆದ ಭಾಗವಾಗಿದೆ ಇಂದು ಅಕ್ರಮವಾಗಿ ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಯವರನ್ನು ಇಡಿ ಅಧಿಕಾರಿಗಳು ಬಂಧಿಸಿರುವಂತದ್ದು, ಆದರೆ ಈ ಮೋದಿ ಅಮಿತ್ ಷಾ ತಿಳಿದುಕೊಳ್ಳಬೇಕು ಬಂಧನದಿಂದ ಈ ನ್ಯಾಯಯುತವಾದ ನಮ್ಮ ಹೋರಾಟವನ್ನು ಹತ್ತಿಕ್ಕಬಹುದು ಎಂದುಕೊಂಡಿದ್ದರೆ ಅದು ನಿಮ್ಮ ಮೂರ್ಖತನ, ನೀವು ಚಿವುಟಿದಷ್ಟು ನಾವು ಬೆಳೆಯುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ಹಮೀದ್ ಸಾಲ್ಮರರವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು, ಕಬಕ ಬ್ಲಾಕ್ ಅಧ್ಯಕ್ಷರಾದ ಸಿದ್ದೀಕ್ ಉರಿಮಜಲು, ವಿಟ್ಲ ಬ್ಲಾಕ್ ಅಧ್ಯಕ್ಷರಾದ ಕಮರುದ್ದೀನ್ ಪುಣಚ ಹಾಗೂ ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು. ಕುಂಬ್ರ ಬ್ಲಾಕ್ ಅಧ್ಯಕ್ಷರಾದ ರಿಯಾಝ್ ಬಳಕ್ಕ ಸ್ವಾಗತಿಸಿ, ನಗರ ಸಮಿತಿ ಅಧ್ಯಕ್ಷರಾದ ಯಹ್ಯಾ ಕೂರ್ನಡ್ಕ ವಂದಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!