
ಐ ಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಎಂಟ್ರಿ ಪಡೆದಿದೆ
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ 4 ವಿಕೆಟ್ ಗಳ ಅಂತರದಲ್ಲಿ ಮಣಿಸಿ ವಿಜಯಮಾಲೆಯನ್ನು ಧರಿಸಿದೆ.
ಭಾರತದ ಪರ ವಿರಾಟ್ ಕೊಹ್ಲಿ 98 ಎಸೆತಗಳಲ್ಲಿ 5 ಬೌಂಡರಿ ಸಹಿತ 84 ರನ್ ಕಲೆಹಾಕಿ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದರು.
265 ರನ್ ಗಳ ಗುರಿಯ ಬೆನ್ನಟ್ಟಿದ ಭಾರತ ತಂಡ ಜಯಭೇರಿ ಬಾರಿಸಿತು. ಮಾಜಿ ನಾಯಕ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ತಾಳ್ಮೆಯ ಆಟವಾಡಿ ಅಂತಿಮ ಓವರ್ ಗಳಲ್ಲಿ ಕೆಎಲ್ ರಾಹುಲ್ ಅಬ್ಬರಿಸಿದರು .
