
ಸಿಎಂ ಸಿದ್ದರಾಮಯ್ಯ ತೀವ್ರ ಮಂಡಿ ನೋವಿನಿಂದ ಬಳಲುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡು ಪ್ರಮುಖ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗಿಯಾಗ್ತಿದ್ದಾರೆ
ಬುಧವಾರ ಆದಿ ಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀ ಗಳು ಸಿಎಂ ನಿವಾಸ ಕಾವೇರಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ .
ಕೆಲಕಾಲ ಸಿಎಂ ಜತೆ ಕಾಲಕಳೆದ ಶ್ರೀಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಸಿಎಂ ಯೋಗಕ್ಷೇಮ ವಿಚಾರಿಸಿದ ಶ್ರೀಗಳು ರಾಜಕೀಯ ಹೊರತಾಗಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಕೆಲಹೊತ್ತು ಸೌಹಾರ್ದಯುತ ಚರ್ಚೆ ನಡೆಸಿದ್ದು, ಶೀಘ್ರ ಆರೋಗ್ಯ ಸುಧಾರಣೆ ಕಂಡು ಗುಣಮುಖರಾಗುವಂತೆ ಹಾರೈಸಿದ್ದಾರೆ.
