ಬೆಂಗಳೂರಿನ ಉಲ್ಲಾಳದ ಉಪಕಾರ್ ಲೇಔಟ್‌ನಲ್ಲಿ ಮಾರ್ಚ್ 3ರಂದು ಹಗಲು ದರೋಡೆ ನಡೆದಿದೆ. ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರಲ್ಲೊಬ್ಬರ ಸರ ಕಸಿದು ಪರಾರಿಯಾಗಿದ್ದಾರೆ. ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸರ ಕದಿಯುವಾಗ ಮಹಿಳೆ ಬಿದ್ದಿದ್ದು, ಇದರಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಮಹಿಳೆಯರ ಸುರಕ್ಷತೆಗೆ ಧಕ್ಕೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

https://twitter.com/sirajnoorani/status/1897182075977130494?ref_src=twsrc%5Etfw%7Ctwcamp%5Etweetembed%7Ctwterm%5E1897182075977130494%7Ctwgr%5Ea169731892c026bea41bfb2dfa5021395503bfb7%7Ctwcon%5Es1_c10&ref_url=https%3A%2F%2Fapi-news.dailyhunt.in%2F

Leave a Reply

Your email address will not be published. Required fields are marked *

Join WhatsApp Group
error: Content is protected !!