
ಕಳೆದ ಒಂದು ವಾರದಿಂದ ಕರಾವಳಿ ಭಾಗ ಸೇರಿ ರಾಜ್ಯದ ಹಲವು ಕಡೆ ತಾಪಮಾನದಲ್ಲಿ ಭಾರಿ ಏರಿಕೆಯಾಗುತ್ತಿದೆ
ಇದರ ನಡುವೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮಳೆಯಾಗಲಿದೆ.
ಕರಾವಳಿ ಭಾಗ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಮಾರ್ಚ್ 12 ರಿಂದ 14 ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಹಗಲು ಮಳೆಯ ಸಾಧ್ಯತೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾದ್ಯತೆ ಇದೆ ಹೇಳಲಾಗಿದೆ.
