
ಮೋಸ ಹೋಗುವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಈ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಮಹಾಕುಂಭಮೇಳಕ್ಕೆ ಕರೆದೊಯ್ಯುವ ಭರವಸೆ ನೀಡಿ ಇಲ್ಲೊಬ್ಬ ಆಸಾಮಿ ಅನೇಕರಿಗೆ ವಂಚಿಸಿದ್ದಾನೆ.
ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ ಮಾಡಿದ ಆರೋಪಿಯನ್ನು ಬಂಧಿಸಿದ್ದಾರೆ.
ರಾಘವೇಂದ್ರ ರಾವ್ ಎಂಬಾತ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ವಂಚಿಸಿದ್ದಾನೆ ಎಂದು ಗೊತ್ತಾಗಿದೆ.
ಮಹಾಕುಂಭಮೇಳಕ್ಕೆ ಕರೆದೊಯ್ದು ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿ, ಯಾತ್ರಾರ್ಥಿಗಳನ್ನು ಆಕರ್ಷಿಸಿ ರಾಘವೇಂದ್ರ ವಂಚನೆ ಮಾಡಿದ್ದಾನೆ.ಪಾಂಚಜನ್ಯ ಟೂರ್ಸ್ ಆಯಂಡ್ ಟ್ರಾವೆಲ್ಸ್ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್ಬುಕ್ನಲ್ಲಿ ಜಾಹೀರಾತು ನೀಡಿದ್ದಾನೆ. ಹಣಪಡೆದ ನಂತರ ಎಲ್ಲರಿಗೂ ಉಂಡೆನಾಮ ಹಾಕಿದ್ದಾನೆ.
ಏಳು ದಿನಗಳ ಪ್ಯಾಕೇಜ್ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ. ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ ಎರಡು ರೀತಿ ವಂಚನೆ ಎಸಗಿದ್ದಾನೆ.
ರಾಘವೇಂದ್ರ ರಾವ್ ಬೆಟ್ಟಿಂಗ್ ಆಯಪ್ನಲ್ಲಿ ಹಣ ಹಾಕಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಗೋವಿಂದರಾಜನಗರ ಠಾಣೆ ಪೊಲೀಸರು ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
