
ಸುರತ್ಕಲ್:ಉದ್ಯಮಿ ಮುಲ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ ಪತಿ ಪ್ರಕರಣದ 5ನೇ ಆರೋಪಿ ಶುಐಬ್, ಪ್ರಕರಣ ಎರಡನೇ ಆರೋಪಿ ಅಬ್ದುಲ್ ಸತ್ತಾರ್, ಮೂರನೇ ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, 4ನೇ ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫಾ ಹಾಗೂ 6ನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್‌ಗೆ ಉಚ್ಛನ್ಯಾಯಾಲಯ ಜ.23ರಂದು ಜಾಮೀನು ಮಂಜೂರು ಮಾಡಿತ್ತು.
ರೆಹಮತ್‌ಳ ಪತಿ ಪ್ರಕರಣದ 5ನೇ ಆರೋಪಿ ಶುಐಬ್, ಮೂರನೇ ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, 4ನೇ ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫಾ ಹಾಗೂ 6ನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್‌ಗೆ ಉಚ್ಛನ್ಯಾಯಾಲಯ ಜ.23ರಂದು ಜಾಮೀನು ಮಂಜೂರು ಮಾಡಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ಉಳಿದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಇಂದು ಎ1 ಆರೋಪಿ ರೆಹಮತ್ ಗೆ ಜಾಮೀನು ಮಂಜೂರು ಮಾಡುವ ಮೂಲಕ ಪ್ರಕರಣ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ನೀಡಿದಂತಾಗಿದೆ.
