
ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ.
ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ನೆಪದಲ್ಲಿ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿಯನ್ನು ಬಲೆಗೆ ಬೀಳಿಸಿಕೊಂಡ ನಿಶಾ, ಆತನೊಂದಿಗೆ ಆತ್ಮೀಯತೆ ಬೆಳೆಸಿಕೊಂಡು ಪ್ರೀತಿಸುವ ನಾಟಕವಾಡಿದ್ದಾಳೆ.
ಬಳಿಕ ಮದುವೆಯಾಗುವಂತೆ ಹಿಂದೆ ಬಿದ್ದಿದ್ದು, ಹಲವು ಕಡೆಗಳಲ್ಲಿ ಸುತ್ತಾಡಿದ್ದಾರೆ. ಕೆಲವು ಲಾಡ್ಜ್‌ಗಳಿಗೆಲ್ಲಾ ಆತನನ್ನು ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾಳೆ.
ತದನಂತರ ದೊಡ್ಡಬಳ್ಳಾಪುರ ಬಳಿಯ ಲಾಡ್ಜ್ ವೊಂದಕ್ಕೆ ಕರೆದೊಯ್ದು, ಅಣ್ಣಪ್ಪಸ್ವಾಮಿಯ ಬೆತ್ತಲೆ ವಿಡಿಯೋ ಮುಂದಿಟ್ಟುಕೊಂಡು ರೂ. 20 ಲಕ್ಷ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾಳೆ. ಹಣ ಕೊಡದಿದ್ದರೆ ರೇಪ್ ಕೇಸ್ ಹಾಕಿ, ಬೆತ್ತಲೆ ವಿಡಿಯೋವನ್ನ ಸೋಷಿಯಲ್ ಮಿಡಿಯಾದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ.
ಇದರಿಂದ ಭಯಭೀತನಾದ ಅಣ್ಣಪ್ಪಸ್ವಾಮಿ ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ಸಂಬಂಧ ಹನಿಟ್ರ್ಯಾಪ್ ಮಾಡಿದ್ದ, ತುಮಕೂರಿನ ಕ್ಯಾತಸಂದ್ರ ಮೂಲದ ನಿಶಾ ಹಾಗೂ ಆಕೆಯ ಸ್ನೇಹಿತೆ ಜ್ಯೋತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ, ಇದರಲ್ಲಿ ಭಾಗಿಯಾಗಿದ್ದ ಗುಬ್ಬಿ ಮೂಲದ ಬಸವರಾಜು ಹಾಗೂ ಭರತ್‌ಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.
ಹಿಂದೆ ಬಿಜೆಪಿಯಿಂದ ಪಟ್ಟಣ ಪಂಚಾಯತಿ ಅಧ್ಯಕ್ಷನಾಗಿದ್ದ ಅಣ್ಣಪ್ಪಸ್ವಾಮಿ, ಗುಬ್ಬಿ ತಾಲೂಕಿನಲ್ಲಿ ನಡೆದ ಸಾವಿರಾರು ಎಕರೆ ಸರ್ಕಾರಿ ಜಮೀನು ಗೋಲ್ಮಾಲ್ ಕೇಸಿನಲ್ಲಿ ಎ2 ಆರೋಪಿಯಾಗಿದ್ದಾರೆ. ಅಧ್ಯಕ್ಷನಾಗಿದ್ದ ವೇಳೆ 3 ತಿಂಗಳು ತಲೆಮರಿಸಿಕೊಂಡಿದ್ದನು. ಇದೀಗ ಪ್ರಕರಣ ಸಂಬಂಧ ಗುಬ್ಬಿ ಪೊಲೀಸರಿಂದ ತನಿಖೆ ಮುಂದುವರೆದಿದೆ.
