
ರಾಜ್ಯದ ಹಲವು ಜಿಲೆಗಳಲ್ಲಿ ರಣ ಬಿಸಿಲು ಶುರುವಾಗಿದ್ದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ.
ಮಳೆಯಿಂದಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ.
ಕೆಲ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಮಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಲಾಂಡ್ ಮಾಡಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದ ಎರಡು ವಿಮಾನಗಳು ವಾಪಾಸ್ ಬೆಂಗಳೂರಿಗೆ ಬಂದಿದೆ. ಮಂಗಳೂರಿನ ಬಜ್ಪೆ ಕಿನ್ನಪದವು ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಮಂಗಳೂರಿನ ವಿವಿಧೆಡೆ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ
