
ಸ್ಕೂಟರ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಮಂಜೇಶ್ವರ ಉದ್ಯಾವರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಪ್ಪಳ ಕನ್ನಾಡಿಪಾರೆಯ ಮುಹಮ್ಮದ್ ಅನ್ವಾಸ್ (23) ಮೃತಪಟ್ಟ ಸವಾರ. ಸಹ ಸವಾರ ಅಂಗಡಿಮೊಗರಿನ ಫಸಲ್ ರಹಮಾನ್ ಗಾಯಗೊಂಡಿದ್ದಾರೆ.
ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲೆಕ್ಟ್ರಿಕ್ ಸ್ಕೂಟರ್ ನಲ್ಲಿ ತಲಪಾಡಿ ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಆನ್ವಾಸ್ ಮೃತಪಟ್ಟರು. ಅನ್ವಾಸ್ ಉಪ್ಪಳದಲ್ಲಿ ಮೊಬೈಲ್ ಮಳಿಗೆಯಲ್ಲಿ ಕೆಲಸ ನಿರ್ವಹಿಸು ತ್ತಿದ್ದರು.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
