
ತಪ್ಪಿಸಿಕೊಂಡಿದ್ದ ನಟೋರಿಯಸ್ ರೌಡಿ ಗರುಡ ಗ್ಯಾಂಗ್ ನ ಇಸಾಕ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಈ ಹಿಂದೆ ಇಸಾಕ್ ನನ್ನು ಮಣಿಪಾಲ್ ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹಾಸನದ ಚನ್ನರಾಯಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಹಿಡಿದು ವಿಚಾರಣೆಗೆಂದು ಉಡುಪಿಗೆ ಕರೆತರುತ್ತಿದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ.
ಈ ವೇಳೆ ಮೂವರು ಪೊಲೀಸರಿಗೆ ಗಾಯಗಳಾಗಿವೆ.
ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಗಾಯಾಳು ಪೊಲೀಸರನ್ನು ಕೆಎಂಸಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
