
ರಾಜ್ಯಾದ್ಯಂತ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ ಹೊಂದಿಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳಿಗೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ ಸ್ಪಷ್ಟ ಆದೇಶ ನೀಡಿದೆ
ಸುಪ್ರೀಂಕೋರ್ಟ್ 2024ರ ಡಿಸೆಂಬರ್ 17ರ ಆದೇಶದಲ್ಲಿ ಅನಧಿಕೃತವಾಗಿ ಕಟ್ಟಡ ಮತ್ತು ನಕ್ಷೆ ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಆದೇಶ ನೀಡಿದೆ.
ಅದರಂತೆ ಬೆಂಗಳೂರಿನ ಬೆಸ್ಕಾಂ, ಮಂಗಳೂರು, ಹುಬ್ಬಳ್ಳಿ, ಚಾಮುಂಡೇಶ್ವರಿ(ಮೈಸೂರು) ಕಲಬುರಗಿ, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸರಬರಾಜು ಸಹಕಾರ ಸೊಸೈಟಿ ಸೇರಿದಂತೆ ಆರು ಎಸ್ಕಾಂಗಳು ಒಸಿ ಪ್ರಮಾಣ ಪತ್ರ ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಆದೇಶಿಸಲಾಗಿದೆ.
