
ಹಲವು ತಿಂಗಳುಗಳಿಂದ ಬಾಹ್ಯಾಕಾಶದಲ್ಲಿ ಸಿಲುಕಿರುವ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳುವ ಕಾಲ ಸನ್ನಿಹಿತವಾಗಿದೆ
ಗಗನಯಾತ್ರಿಗಳನ್ನು ವಾಪಸ್ ಕರೆತರಲು ನಾಸಾ ಮತ್ತು ಎಲೋನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ ಶುಕ್ರವಾರ, ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಕ್ರೂ-10 ಮಿಷನ್‌ಗೆ ಚಾಲನೆ ನೀಡಿದೆ.
ಇದರ ಭಾಗವಾಗಿ ಕ್ರೂ-10 ಮಿಷನ್‌ನಲ್ಲಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಫಾಲ್ಕನ್ 9 ರಾಕೆಟ್ ಶುಕ್ರವಾರ ET 7:03 ಕ್ಕೆ ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಯಿತು.
ಒಂಬತ್ತು ತಿಂಗಳಿನಿಂದ ಸಿಕ್ಕಿಹಾಕಿಕೊಂಡಿರುವ ಅಮೆರಿಕದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆತರಲು ಬಹುನಿರೀಕ್ಷಿತ ಕ್ರೂ-10 ಮಿಷನ್ ಅನ್ನು ಪ್ರಾರಂಭಿಸಲಾಗಿದ್ದು , ನಾಲ್ಕು ಗಗನಯಾತ್ರಿಗಳು ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್ ಏರಿ ಇಂಟರ್‌ನ್ಯಾಷನಲ್ ಸ್ಪೇಸ್ ಸ್ಟೇಷನ್‌ಗೆ ತೆರಳಿದ್ದಾರೆ.
ನಾಸಾ ಗಗನಯಾತ್ರಿಗಳಾದ ಆನ್ ಮೆಕ್‌ಕ್ಲೇನ್ ಮತ್ತು ನಿಕೋಲ್ ಅಯರ್ಸ್, ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಶನ್ ಏಜೆನ್ಸಿ (JAXA) ಗಗನಯಾತ್ರಿ ಟಕುಯಾ ಒನಿಶಿ ಮತ್ತು ರೋಸ್ಕೋಸ್ಮೋಸ್ ಗಗನಯಾತ್ರಿ ಕಿರಿಲ್ ಪೆಸ್ಕೋವ್ ಕ್ರೂ-10 ಮಿಷನ್‌ನ ಭಾಗವಾಗಿದ್ದಾರೆ.
ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೂಲಕ ಗಗನಯಾತ್ರಿಗಳನ್ನು ಭೂಮಿಯಿಂದ ಐಎಸ್‌ಎಸ್‌ಗೆ ರವಾನೆ ಮಾಡಲಾಗಿದ್ದು, ವಿಜ್ಞಾನಿಗಳು ಮಾರ್ಚ್ 19 ರಂದು ಭೂಮಿಯ ಕಡೆಗೆ ತಮ್ಮ ಪ್ರಯಾಣವನ್ನು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ನಾಸಾ ಮಾಹಿತಿ ಹಂಚಿಕೊಂಡಿದೆ






