ಪುತ್ತೂರು :- ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಇಫ್ತಾರ್ ಕಾರ್ಯಕ್ರಮದೊಂದಿಗೆ  ಮಾ.15 ರಂದು ಪುತ್ತೂರಿನ ಪ್ರೆಸ್ಟೀಜಿ ಪೆವಿಲಿಯನ್  ಸಭಾಂಗಣದಲ್ಲಿ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಶ್ರಫ್ ಬಾವು ರವರ ಅಧ್ಯಕ್ಷತೆಯಲ್ಲಿ ನಡೆಯಿತು.
     ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುವುದೆಂದು ತೀರ್ಮಾನಿಸಲಾಯಿತು.
     ಈ ಸಭೆಗೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು  ಆಗಮಿಸಿ ಸಮಾರೋಪ ಮಾತುಗಳನ್ನಾಡಿದರು. ಎಸ್ಡಿಪಿಐ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ಕಾರ್ಯದರ್ಶಿ ಅಶ್ರಫ್  ತಲಪಾಡಿ, ಜಿಲ್ಲಾ ಸಮಿತಿ ಸದಸ್ಯರಾದ ಹಾಜಿ ಇಬ್ರಾಹಿಂ ಸಾಗರ್, ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಸಾಲ್ಮರ ಹಾಗೂ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಸದಸ್ಯರುಗಳು ಎಲ್ಲಾ ನಗರ ಸಮಿತಿ ಬ್ಲಾಕ್ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಉಸ್ಮಾನ್ ಏಕೆ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ರಹಿಮಾನ್ ಪುತ್ತೂರು ಧನ್ಯವಾದಗೈದರು.

Leave a Reply

Your email address will not be published. Required fields are marked *

Join WhatsApp Group
error: Content is protected !!