
ಪುತ್ತೂರು :ನಗರದ ಹೊರವಲಯದ ಹೆಬ್ಬಾರಬೈಲು ಪ್ರದೇಶದಲ್ಲಿ ಭಾನುವಾರ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ.
ಒಣಗಿದ ಹುಲ್ಲಿಗೆ ಹೊತ್ತಿಕೊಂಡ ಬೆಂಕಿ ಕ್ಷಣಾರ್ಥದಲ್ಲಿ ಅರ್ಧ ಎಕರೆ ಪ್ರದೇಶವನ್ನು ವ್ಯಾಪಿಸಿತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಪುತ್ತೂರು ಅಗ್ನಿಶಾಮಕ ದಳದ ಠಾಣಾಧಿಕಾರಿ ಶಂಕರ್, ಪ್ರಮುಖ್ ರುಕ್ಮಯ್ಯ ಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಅಗ್ನಿಶಾಮಕ ಸಿಬ್ಬಂದಿ ಕಾಂತರಾಜು, ಜಾಫರ್, ಶಿವಾನಂದ, ಮಂಜುನಾಥ್ ಗುಡ್ಡಣ್ಣನವರ್ ಪಾಲ್ಗೊಂಡಿದ್ದರು.
