ಮಂಗಳೂರು: ವಕ್ಪ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿರುವುದು ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಂಡಿರುವುದು ಸ್ವಾಗತಾರ್ಹ,

ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ.  ಏಕೆಂದರೆ ಇದು ದೇಶದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ, ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ತಕ್ಷಣ ಕೇಂದ್ರ ಸರಕಾರ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಲು ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವಂತೆ ದಕ್ಷಿಣಕನ್ನಡ ಜಿಲ್ಲಾ ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷರಾದ ಸಿರಾಜ್ ಬಜ್ಪೆ ಹಾಗೂ ಪ್ರಧಾನ ಕಾರ್ಯದರ್ಶಿ ಯಾದ ಎಸ್. ಅಬೂಬಕ್ಕರ್ ಸಜೀಪ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.





Leave a Reply

Your email address will not be published. Required fields are marked *

Join WhatsApp Group
error: Content is protected !!