
ಕಳೆದ ಕೆಲ ತಿಂಗಳ ಹಿಂದೆಯಷ್ಟೇ ರೆಸಾರ್ಟ್ ವೊಂದರಲ್ಲಿ ಯುವತಿಯರು ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಕಾಫಿನಾಡು ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ವ್ಯಕ್ತಿಯೋರ್ವ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಮಡಿಕೇರಿಯ ಕುಶಾಲನಗರದ ಮೂಲದ ನಿಶಾಂತ್ ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ವೊಂದಕ್ಕೆ ಬಂದಿದ್ದರು. ಈ ವೇಳೆ ಸ್ವೀಮಿಂಗ್ ಮಾಡಲೆಂದು ನೀರಿಗೆ ಹಾರಿದ್ದಾರೆ.
ನೀರಿಗೆ ಹಾರಿ ಕೆಲ ಕ್ಷಣ ಮೇಲೆ ಏಳದೆ, ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಸ್ನೇಹಿತರು ನೀರಿಗೆ ಹಾರಿ ಆತನನ್ನು ಮೇಲಕ್ಕೆ ಎತ್ತಿದ್ದಾರೆ. ಆದರೆ ಅಷ್ಟರಲ್ಲಿ ಆತನ ಸಾವನ್ನಪ್ಪಿದ್ದ.. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನು ನಿಶಾಂತ್ ಸ್ವಿಮ್ಮಿಂಗ್ ಪೂಲ್ ಗೆ ಹಾರಿ ಸಾವನ್ನಪ್ಪಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.






