
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಕಾರ್ಯಕ್ರಮದ ಸ್ಥಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದೆ.
ಮುಂಬೈನ ಖಾರ್‌ನಲ್ಲಿರುವ ಹೋಟೆಲ್‌ನಲ್ಲಿ ನಡೆದ ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯನ್ನು ಅಪಹಾಸ್ಯ ಮಾಡಲಾಗಿದೆ.
ಮಾತ್ರವಲ್ಲದೇ ಅವರನ್ನು “ದೇಶದ್ರೋಹಿ” (ಗದ್ದರ್) ಎಂದು ಉಲ್ಲೇಖಿಸಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ.
ಕುನಾಲ್ ಕಮ್ರಾ ಅವರ ಹೇಳಿಕೆಗಳಿಂದ ಶಿವಸೇನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ “ದಿ ಯುನಿಕಾಂಟಿನೆಂಟಲ್ ಮುಂಬೈ” ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಕುನಾಲ್ ಕಮ್ರಾ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಶಿವಸೇನಾ ಕಾರ್ಯಕರ್ತರು ಕಾರ್ಯಕ್ರಮದ ಪ್ರದೇಶದಲ್ಲಿ ಕುರ್ಚಿಗಳನ್ನು ಎಸೆಯುತ್ತಿರುವುದು ಕಾಣಿಸಿಕೊಂಡಿದೆ. ಕೆಲವು ಸ್ಟ್ಯಾಂಡ್-ಅಪ್ ಕಾಮಿಡಿಯನ್‌ಗಳು ಹಣಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಾರೆ ಎಂದು ಟೀಕಿಸಿದ್ದಾರೆ.






