
ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಪ್ರೀತಿಸಿ ಆಕೆಯ ಪೋಷಕರ ವಿರೋಧವನ್ನೂ ಲೆಕ್ಕಿಸದೇ ಸಪ್ತಪದಿ ತುಳಿದು ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ಅಂಟಿಕೊಂಡಿರುವ ಮೈಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 24 ವರ್ಷದ ನಾಗಾರ್ಜುನ ಹಾಗೂ 22 ವರ್ಷದ ಪಸೀಹಾ ಭಾನುವಾರ ರಾತ್ರಿ ಮದುವೆಯಾಗಿದ್ದು ಸೋಮವಾರ ತಮಗೆ ರಕ್ಷಣೆ ನೀಡಬೇಕೆಂದು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದಾಗ ಪ್ರೇಮ ಪ್ರಕರಣ ಬೆಳಕಿಗೆ ಬಂದಿದೆ. ಇಬ್ಬರೂ ಅಕ್ಕಪಕ್ಕದ ಮನೆಯವರಾಗಿದ್ದಾರೆ. ಮೈಲಪ್ಪನಹಳ್ಳಿ ಗ್ರಾಮದಲ್ಲಿ ಹಿಂದೂ ಯುವಕ, ಮುಸ್ಲಿಂ ಯುವತಿ ಪರಸ್ಪರ ಪ್ರೀತಿಸಿ ವಿವಾಹ ಆಗಿರುವುದು ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಸಿದೆ. ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದಾರೆ






