
ಹಾಸನ : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆಪಲ್ಟಿಯಾಗಿ, ಕ್ಲೀನರ್ ವೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಮಂಗಳೂರಿನ ಬಣತಾಡಿ ಗ್ರಾಮದ ದಿ. ರಹೀಮ್ ರವರ ಮಗ ಉಮ್ಮರ್ ಸಲ್ಮನ್ ಫಾರಿಶ್ (18) ಎಂದು ಗುರುತಿಸಲಾಗಿದೆ.ಕಲ್ಲಡ್ಕ ಮೂಲದ ಫಾಹಾದ್ ಎಂಬವರು ಚಾಲಕರಗಿದ್ದ ಪ್ರೈವುಡ್ ತುಂಬಿದ್ದ ಲಾರಿ ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎನ್ನಲಾಗಿದೆ.ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಪಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ
ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






