ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ (Basanagouda Patil Yatnal)ಬಿಜೆಪಿ ಗೇಟ್‌ಪಾಸ್ ನೀಡಿದೆ. ಮುಂದಿನ 6 ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್‌ರನ್ನ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಉಚ್ಛಾಟನೆ ಮಾಡಿ ನಿನ್ನೆ ಆದೇಶ ಹೊರಡಿಸಿತ್ತು.

ಮೂಲಕ ಫೈರ್‌ಬ್ರ್ಯಾಂಡ್‌ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿತ್ತು. ಅತ್ತ ಅವರನ್ನು ಉಚ್ಚಾಟನೆ ಮಾಡುತ್ತಿದ್ದಂತೆ ಇತ್ತ ಯತ್ನಾಳ್ರನ್ನು ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಅಪಘಾತದಲ್ಲಿ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ.

ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ್ ತಟಗಾರ ಮೃತ ಪದಾಧಿಕಾರಿ. ಸಂತೋಪ್ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ

ಯತ್ನಾಳ್ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು. ಆದರೆ ಜನರ‌ ಮನಸ್ಸಿನಿಂದ ಉಚ್ಛಾಟನೆ ಮಾಡುವುದಕ್ಕೆ ಆಗಲ್ಲ. ವೇಟ್ ಆಯಂಡ್ ಸಿ. ಬಿಜೆಪಿಗೆ ಭಾವಪೂರ್ವ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮೃತ ಸಂತೋಷ್ ತಟಗಾರ ಪೋಸ್ಟ್ ಹಂಚಿಕೊಂಡಿದ್ದರು

Leave a Reply

Your email address will not be published. Required fields are marked *

Join WhatsApp Group
error: Content is protected !!