
ಬಾಲಕಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.
ಸುಲ್ಕೇರಿ ಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಯೊಬ್ಬರಿಗೆ ತನ್ನ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ ಸಿಕ್ಕಿದ್ದು, ಅವರು ಬಾಲಕಿ ಯನ್ನು ವಿಚಾರಣೆ ನಡೆಸಿ ದಾಗ ದೊಡ್ಡಮ್ಮನ ಮಗನು ದೇವರ ಗುಡ್ಡೆಯ ಮನೆಯಲ್ಲಿ ಹಾಗೂ ಮೂರು ಸಲ ಕುತ್ಲೂರಿನ ಅಜ್ಜನ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ತಿಳಿಸಿದ್ದಳು.
ಬಳಿಕ ಬಾಲಕಿಗೆ ತಾಯಿಗೆ ತಿಳಿಸಲಾಗಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.26ರಂದು ದೂರು ದಾಖಲಿಸಲಾಗಿದೆ.
ಮಾಣಿಲ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ವಿಟ್ಲ: ಮಾಣಿಲದ ವ್ಯಕ್ತಿಯೊಬ್ಬ 16 ವರ್ಷದ ಬಾಲಕಿ ಜತೆ ಅಸಭ್ಯ ವಾಗಿ ವರ್ತಿಸಿದ್ದು, ವಿಟ್ಲ ಠಾಣೆಯಲ್ಲಿ ದಲಿತ ದೌರ್ಜನ್ಯ ಹಾಗೂ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಮಹೇಶ್ ಭಟ್ ತಲೆಮರೆಸಿಕೊಂಡಿದ್ದಾನೆ.






