ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಭಾರತದ ಪ್ರಮುಖ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಟಾಪ್-10 ಸ್ಥಾನದಿಂದ ಹೊರಗುಳಿದಿದ್ದಾರೆ

ಹುರುನ್ ಗ್ಲೋಬಲ್ ರಿಚ್ ಲಿಸ್ಟ್ 2025ರ ಪ್ರಕಾರ ಅಂಬಾನಿ ಅವರು ಈ ವರ್ಷ 11ನೇ ಸ್ಥಾನಕ್ಕೆ ತಲುಪಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದ್ರೆ ಮುಕೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯ ಈ ಬಾರಿ ಸ್ವಲ್ಪ ಕಡಿಮೆಯಾಗಿದೆ. ಆದರೂ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಪ್ರಾಬಲ್ಯ ಕಾಯ್ದುಕೊಂಡಿದ್ದಾರೆ.

ಈ ವರ್ಷದ ಹುರುನ್ ಗ್ಲೋಬಲ್ ರಿಚ್ ಲಿಸ್ಟ್‌ನಲ್ಲಿ ಅಮೆರಿಕ ಮತ್ತು ಚೀನಾದ ಉದ್ಯಮಿಗಳು ಟಾಪ್-10 ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಲಾನ್ ಮಸ್ಕ್ (ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಮುಖ್ಯಸ್ಥ), ಜೆಫ್ ಬೆಜೋಸ್ (ಅಮೆಜಾನ್ ಸಂಸ್ಥಾಪಕ), ಮತ್ತು ಮಾರ್ಕ್ ಝುಕರ್‌ಬರ್ಗ್ (ಮೆಟಾ ಸಿಇಒ) ಅವರಂತ ದಿಗ್ಗಜರು ಮೊದಲ ಕೆಲವು ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಮುಕೇಶ್ ಅಂಬಾನಿ ಟಾಪ್ 10 ರಿಂದ ಹೊರಗುಳಿದರೂ, ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಅವರು ಉನ್ನತ ಸ್ಥಾನವನ್ನು ಉಳಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!