
ಸುಳ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಇಲ್ಲಿನ ಸ್ಥಳೀಯರು ನಗರ ಠಾಣೆಯ ಪೊಲೀಸರಿಗೆ ಗುರುವಾರ ಸಂಜೆ ಒಪ್ಪಿಸಿದ್ದಾರೆ.
ಆರೋಪಿಯನ್ನು ನಾವೂರ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಯಾನೆ ಮೋನು ಎಂದು ಗುರುತಿಸಲಾಗಿದೆ
ರಿಕ್ಷಾ ಚಾಲಕನಾಗಿರುವ ಆತ ಪುತ್ತೂರಿನಿಂದ ಬಿ.ಸಿ.ರೋಡ್ ವರೆಗೆ ಬಸ್‌ನಲ್ಲಿ ಪ್ರಯಾಣಿಸಿದ್ದ. ಈ ವೇಳೆ ಯುವತಿ ಕುಳಿತಿದ್ದ ಸೀಟಿನಲ್ಲಿ ಕುಳಿತು ಕಿರುಕುಳ ನೀಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ ಸ್ಥಳೀಯರು ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸುವ ಮುನ್ನ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗೊತ್ತಾಗಿದೆ






