ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

Posted by Vidyamaana on 2024-02-07 14:56:48 |

Share: | | | | |


ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.


ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದರು. ‘ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಿದು. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹಿಂಜಾವೇ ಕಾರ್ಯಕರ್ತರಿಗೆ ಭವ್ಯ ಸ್ವಾಗತ

Posted by Vidyamaana on 2023-05-29 16:59:13 |

Share: | | | | |


ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹಿಂಜಾವೇ ಕಾರ್ಯಕರ್ತರಿಗೆ ಭವ್ಯ ಸ್ವಾಗತ

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಹಿಂದೂ ಜಾಗರಣ ವೇದಿಕೆ ಪುರುಷರಕಟ್ಟೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸುವ ಮೂಲಕ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯಿದರು


ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಹಿನ್ನೆಲೆ ಹಿಂದೂ ಜಾಗರಣ ವೇದಿಕೆ ಪುರುಷರಕಟ್ಟೆ ಕಾರ್ಯಕರ್ತರು ಪುರುಷರಕಟ್ಟೆ ಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಯಕರ್ತರನ್ನು ಹಲವಾರು ಪ್ರಮುಖರು ಭೇಟಿಯಾಗಿ ಧೈರ್ಯ ತುಂಬಿದ್ದು, ಈ ರೀತಿ ದೌರ್ಜನ್ಯವೆಸಗಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು

ಕೊಂಬೆಟ್ಟು: ವಿದ್ಯುತ್ ಸುರಕ್ಷತಾ ಸಪ್ತಾಹ

Posted by Vidyamaana on 2023-07-08 16:42:46 |

Share: | | | | |


ಕೊಂಬೆಟ್ಟು: ವಿದ್ಯುತ್ ಸುರಕ್ಷತಾ ಸಪ್ತಾಹ

ಪುತ್ತೂರು: ಮೆಸ್ಕಾಂನ ಪುತ್ತೂರು ಉಪವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ವಿದ್ಯುತ್ ಸುರಕ್ಷತಾ ಸಪ್ತಾಹ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನಲ್ಲಿ ಜರಗಿತು.ಪುತ್ತೂರು ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎ. ಮಾತನಾಡಿ, ವಿದ್ಯುತ್ ಬಳಕೆ ಮತ್ತು ಎಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಸಹಾಯಕ ಇಂಜಿನಿಯರ್ ರಾಜೇಶ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೆಸ್ಕಾಂ ಪವರ್ ಮ್ಯಾನ್ ಗಳಾದ ಶಂಕರ ತಳ್ಳಿ, ಹೇಮಂತ್ ಮತ್ತು ಸಂತೋಷ್ ಜಾದವ್ ಉಪಸ್ಥಿತರಿದ್ದರು.

ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಕಿತ್ತೋಯ್ದ ಆರೋಪಿಗಳು

Posted by Vidyamaana on 2024-06-24 06:31:55 |

Share: | | | | |


ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಕಿತ್ತೋಯ್ದ ಆರೋಪಿಗಳು

ಮಡಿಕೇರಿ: ಕೋಟೆಬೆಟ್ಟ (Kotebetta) ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ (Tourists) ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ನಡೆದಿದೆ.ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು.

ರಾಜ್ಯದ ಜನತೆ ಗಮನಕ್ಕೆ: ಇಂದು ಗೃಹಜ್ಯೋತಿ ನೋಂದಣಿ ಗೆ ಕೊನೇ ದಿನ

Posted by Vidyamaana on 2023-07-25 06:36:06 |

Share: | | | | |


ರಾಜ್ಯದ ಜನತೆ ಗಮನಕ್ಕೆ: ಇಂದು ಗೃಹಜ್ಯೋತಿ ನೋಂದಣಿ ಗೆ ಕೊನೇ ದಿನ

ಬೆಂಗಳೂರು :ರಾಜ್ಯ ಸರ್ಕಾರದ ( Karnataka Government ) ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು ಗೃಹಜ್ಯೋತಿ ಯೋಜನೆಯ ( Gruha Jyoti Scheme ) ಕೂಡ. ಈ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ( Free Electricity ) ಪ್ರಯೋಜನ ಪಡೆಯಲು ನೋಂದಾಯಿಸಿಕೊಳ್ಳಲು ಇಂದು ಕೊನೆಯ ದಿನವಾಗಿದೆ.ಇಂದು ನೋಂದಾಯಿಸಿಕೊಂಡವರಿಗೆ ಮಾತ್ರವೇ ಆಗಸ್ಟ್ ತಿಂಗಳ ಬಿಲ್ ಮೊತ್ತ 00 ಬರಲಿದೆ.


ಗೃಹಜ್ಯೋತಿ ಯೋಜನೆಗೆ ನೋಂದಣಿ ( Gruha Jyoti Registration ) ಆರಂಭಗೊಂಡ ನಂತ್ರ, ರಾಜ್ಯದಲ್ಲಿ ಈವರೆಗೆ ಇರುವಂತ ಫಲಾನುಭವಿಗಳಲ್ಲಿ ಶೇ.60ರಷ್ಟು ಗ್ರಾಹಕರು ಮಾತ್ರವೇ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಶೇ.40ರಷ್ಟು ವಿದ್ಯುತ್ ಗ್ರಾಹಕರು ನೋಂದಣಿ ಮಾಡುವುದು ಬಾಕಿ ಉಳಿದಿದೆ ಎನ್ನಲಾಗುತ್ತಿದೆ.


ವಿದ್ಯುತ್ ಸರಬರಾಜು ಕಂಪನಿ ನೀಡಿರುವ ಮಾಹಿತಿ ಪ್ರಕಾರ 1.92 ಕೋಟಿ ಗೃಹ ಬಳಕೆದಾರರಿದ್ದು, ಇವರಲ್ಲಿ ಶೇ.90ಕ್ಕೂ ಅಧಿಕ ಜನರು ಮಾಸಿಕ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದಾರಂತೆ. ಇವರಲ್ಲಿ 1.18 ರಿಂದ 1.20 ಕೋಟಿ ಮಂದಿ ಮಾತ್ರವೇ ನೋಂದಣಿ ಮಾಡಿಕೊಂಡಿದ್ದು, ಉಳಿದವರು ಇನ್ನೂ ನೋಂದಣಿ ಮಾಡಿಕೊಳ್ಳಬೇಕಿದೆ.ಇಂದೇ ನೋಂದಣಿಗೆ ಕೊನೆಯ ದಿನ


ಅಂದಹಾಗೇ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಮೊದಲ ತಿಂಗಳಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಜುಲೈ.25ರ ಇಂದೇ ನೋಂದಣಿಗೆ ಕೊನೆಯ ದಿನವಾಗಿದೆ.


ಇಂದು ಯಾರೆಲ್ಲಾ ಗೃಹ ಜ್ಯೋತಿಗೆ ನೋಂದಣಿ ಮಾಡಿಕೊಳ್ಳಲಿದ್ದಾರೋ ಅವರಿಗೆಲ್ಲ ಆಗಸ್ಟ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಬರಲಿದೆ. ಒಂದು ವೇಳೆ ನೋಂದಾಯಿಸಿಕೊಳ್ಳದಿದ್ದರೇ ಆಗಸ್ಟ್ ನಂತ್ರದ ತಿಂಗಳಿನ ಬಿಲ್ ಶೂನ್ಯ ಬರಲಿದೆ.


ಗೃಹಜ್ಯೋತಿ ಯೋಜನೆಗೆ ಅಂತಿಮ ಗಡುವು ನಿಗದಿ ಪಡಿಸಿಲ್ಲ. ಸೆಪ್ಟೆಂಬರ್ ನಲ್ಲಿ ಇದರ ಲಾಭ ಪಡಿಯಲು ಅವಕಾಶ ಇದೆ. ಆದ್ರೇ ಆಗಸ್ಟ್ ತಿಂಗಳಿನಲ್ಲಿ ಉಚಿತ 200 ಯೂನಿಟ್ ವಿದ್ಯುತ್ ಪ್ರಯೋಜನ ಪಡೆಯಲು ಇಂದು ನೋಂದಣಿ ಮಾಡಿಸಬೇಕಿದೆ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ದೃಢ : FSL ತನಿಖೆ ವೇಳೆ ಬಹಿರಂಗ

Posted by Vidyamaana on 2024-03-02 09:29:59 |

Share: | | | | |


ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ದೃಢ : FSL ತನಿಖೆ ವೇಳೆ ಬಹಿರಂಗ

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ್ದು ದೃಢ ಎಂದು FSL ವರದಿಯಲ್ಲಿ ಬಹಿರಂಗವಾಗಿದೆ.ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ದಾಖಲಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದ್ದರು.ನಾಸೀರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಮಾಹಿತಿ ಇದೀಗ ಬಹಿರಂಗವಾಗಿದೆ ಎಂದು ಹೇಳಲಾಗುತ್ತಿದೆ.


FSL ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋ ಎಡಿಟ್ ಮಾಡಿಲ್ಲ. FSL ವರದಿ ಅನ್ವಯ ಪೊಲೀಸರು ಈಗ ತನಿಖೆಯನ್ನು ಚುರುಕುಗೊಳಿಸುತ್ತಿದ್ದು, ವಶಕ್ಕೆ ಪಡೆದಿದ್ದ ಅನುಮಾನಾಸ್ಪದ ವ್ಯಕ್ತಿಗಳ ವಾಯ್ಸ್ ಗಳನ್ನು ರವಾನೆ ಮಾಡಲಾಗಿತ್ತು.ಪೊಲೀಸರ ತನಿಖೆಯ ವೇಳೆ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು.ಅನುಮಾನಿತರ ಪೈಕಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.ಎಫ್ ಎಸ್ ಎಲ್ ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಬಂಧನ ಮಾಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.



Leave a Comment: