ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಹೊಸ ಕಾಯ್ದೆಯಡಿ ಕೇಂದ್ರ ಸರ್ಕಾರಕ್ಕೆ ಸೂಪ‌ರ್ ಪವ‌ರ್ ; ತುರ್ತು ಸಂದರ್ಭಗಳಲ್ಲಿ ಎಲ್ಲಾ ಟೆಲಿಕಾಂ ನೆಟ್ವರ್ಕ್‌ ಗಳ ನಿಯಂತ್ರಣ

Posted by Vidyamaana on 2024-06-22 20:54:49 |

Share: | | | | |


ಹೊಸ ಕಾಯ್ದೆಯಡಿ ಕೇಂದ್ರ ಸರ್ಕಾರಕ್ಕೆ ಸೂಪ‌ರ್ ಪವ‌ರ್ ; ತುರ್ತು ಸಂದರ್ಭಗಳಲ್ಲಿ ಎಲ್ಲಾ ಟೆಲಿಕಾಂ ನೆಟ್ವರ್ಕ್‌ ಗಳ ನಿಯಂತ್ರಣ

ನವದೆಹಲಿ : ಜೂನ್ 26ರಿಂದ, ದೂರಸಂಪರ್ಕ ಕಾಯ್ದೆ 2023ರ ಅನುಷ್ಠಾನದ ನಂತ್ರ ತುರ್ತು ಸಂದರ್ಭಗಳಲ್ಲಿ ಯಾವುದೇ ದೂರಸಂಪರ್ಕ ಸೇವೆಗಳು ಅಥವಾ ನೆಟ್ವರ್ಕ್ಗಳನ್ನ ನಿಯಂತ್ರಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿರುತ್ತದೆ. ಕೇಂದ್ರವು ಕಾಯ್ದೆಯನ್ನು ಭಾಗಶಃ ಅಧಿಸೂಚಿಸಿದೆ, ನಿರ್ದಿಷ್ಟ ನಿಬಂಧನೆಗಳನ್ನು ಈ ದಿನಾಂಕದಿಂದ ಜಾರಿಗೆ ತಂದಿದೆ.

ಗೆಜೆಟ್ ಅಧಿಸೂಚನೆಯಲ್ಲಿ, ಕೇಂದ್ರ ಸರ್ಕಾರವು ಜೂನ್ 2024 ರ 26 ನೇ ದಿನವನ್ನು ಈ ಮೂಲಕ ನೇಮಿಸುತ್ತದೆ, ಈ ಕಾಯ್ದೆಯ ಸೆಕ್ಷನ್ 1, 2, 10 ರಿಂದ 30, 42 ರಿಂದ 44, 46, 47, 50 ರಿಂದ 58, 61 ಮತ್ತು 62 ರ ನಿಬಂಧನೆಗಳು ಜಾರಿಗೆ ಬರುತ್ತವೆ

ಇದರರ್ಥ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಅಥವಾ ಅಪರಾಧಗಳ ತಡೆಗಟ್ಟುವಿಕೆಗೆ ಸಂಬಂಧಿಸಿದ ಕಾರಣಗಳಿಗಾಗಿ ಸರ್ಕಾರವು ಟೆಲಿಕಾಂ ಸೇವೆಗಳ ನಿಯಂತ್ರಣವನ್ನ ತೆಗೆದುಕೊಳ್ಳಬಹುದು.

ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ತಸ್ಲೀಮ್ ನಾಪತ್ತೆ- ಹೊಳೆಯಲ್ಲಿ ಹುಡುಕಾಟ

Posted by Vidyamaana on 2023-10-15 19:52:29 |

Share: | | | | |


ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ತಸ್ಲೀಮ್ ನಾಪತ್ತೆ- ಹೊಳೆಯಲ್ಲಿ ಹುಡುಕಾಟ

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಗೆಳೆಯರ ಜೊತೆಗೂಡಿ ಅ . 15ರಂದು ಸಂಜೆ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಹುಡುಕಾಟ ನಡೆಸುತ್ತಿದ್ದಾರೆ.

ಸಹಾರಾ ಸಮೂಹ ದ ಸಂಸ್ಥಾಪಕ ಸುಬ್ರತಾ ರಾಯ್ ವಿಧಿವಶ

Posted by Vidyamaana on 2023-11-15 05:47:04 |

Share: | | | | |


ಸಹಾರಾ ಸಮೂಹ ದ ಸಂಸ್ಥಾಪಕ ಸುಬ್ರತಾ ರಾಯ್ ವಿಧಿವಶ

ನವದೆಹಲಿ: ಸಹಾರಾ ಸಮೂಹದ ( Sahara Group ) ಸ್ಥಾಪಕ ಸುಬ್ರತಾ ರಾಯ್ ( Subrata Roy ) ದೀರ್ಘಕಾಲದ ಅನಾರೋಗ್ಯದ ನಂತರ ಮುಂಬೈನಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಭಾನುವಾರ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಕೆಡಿಎಎಚ್) ದಾಖಲಿಸಲಾಗಿತ್ತು.ಆದರೇ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿರೋದಾಗಿ ತಿಳಿದು ಬಂದಿದೆ.


ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವಂತ ಸಹಾರಾ ಇಂಡಿಯಾ ಪರಿವಾರ್ ( Sahara India Pariwar ), ನಮ್ಮ ಗೌರವಾನ್ವಿತ ಸಹರಾಶ್ರೀ ಸುಬ್ರತಾ ರಾಯ್ ಸಹಾರಾ ಅವರ ನಿಧನದ ಬಗ್ಗೆ ಸಹಾರಾ ಇಂಡಿಯಾ ಪರಿವಾರ್ ತೀವ್ರ ದುಃಖದಿಂದ ತಿಳಿಸುತ್ತಿದೆ. ಸ್ಪೂರ್ತಿದಾಯಕ ನಾಯಕ ಮತ್ತು ದೂರದೃಷ್ಟಿಯ ಸಹರಾಶ್ರೀ ಜಿ ಅವರು ಮೆಟಾಸ್ಟಾಟಿಕ್ ಕ್ಯಾನ್ಸರ್, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಉಂಟಾಗುವ ತೊಡಕುಗಳೊಂದಿಗೆ ದೀರ್ಘಕಾಲದ ಹೋರಾಟದ ನಂತರ ಹೃದಯ ಸ್ತಂಭನದಿಂದಾಗಿ 2023 ರ ನವೆಂಬರ್ 14 ರಂದು ರಾತ್ರಿ 10.30 ಕ್ಕೆ ನಿಧನರಾದರು ಎಂದು ತಿಳಿಸಿದೆ.ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದ ಸುಬ್ರತಾ ರಾಯ್ ಹಣಕಾಸು, ರಿಯಲ್ ಎಸ್ಟೇಟ್, ಮಾಧ್ಯಮ ಮತ್ತು ಆತಿಥ್ಯ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ವ್ಯಾಪಿಸಿದ ವಿಶಾಲ ಸಾಮ್ರಾಜ್ಯವನ್ನು ಸ್ಥಾಪಿಸಿದರು.


ಸುಬ್ರತಾ ರಾಯ್ ಗೋರಖ್ಪುರದ ಸರ್ಕಾರಿ ತಾಂತ್ರಿಕ ಸಂಸ್ಥೆಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದರು. ನಂತರ ಅವರು 1976ರಲ್ಲಿ ಸಹಾರಾ ಫೈನಾನ್ಸ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಮೊದಲು ಗೋರಖ್ಪುರದಲ್ಲಿ ವ್ಯವಹಾರಕ್ಕೆ ಕಾಲಿಟ್ಟರು.


1978 ರ ಹೊತ್ತಿಗೆ, ಅವರು ಅದನ್ನು ಸಹಾರಾ ಇಂಡಿಯಾ ಪರಿವಾರ್ ಆಗಿ ಪರಿವರ್ತಿಸಿದರು. ಇದು ಭಾರತದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಸಹಾರಾ ಸಮೂಹವು 1992ರಲ್ಲಿ ರಾಷ್ಟ್ರೀಯ ಸಹಾರಾ ಎಂಬ ಹಿಂದಿ ಭಾಷೆಯ ಪತ್ರಿಕೆಯನ್ನು ಪ್ರಾರಂಭಿಸಿತು ಮತ್ತು ನಂತರ ಸಹಾರಾ ಟಿವಿಯೊಂದಿಗೆ ದೂರದರ್ಶನ ಕ್ಷೇತ್ರವನ್ನು ಪ್ರವೇಶಿಸಿತು.

ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ!

Posted by Vidyamaana on 2023-02-21 04:05:24 |

Share: | | | | |


ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ!

ಪುತ್ತೂರು: ವಿಧಾನಸಭಾ ಚುನಾವಣೆಯ ಗುಂಗು ಹೆಚ್ಚುತ್ತಿದ್ದಂತೆ, ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆಯೂ ಬಹುತೇಕ ಸ್ಪಷ್ಟವಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಮಾರ್ಚ್ 24ರಂದೇ ಚುನಾವಣಾ ದಿನಾಂಕ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಚುನಾವಣೆಗಾಗಿ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಆಕಾಂಕ್ಷಿ ಅಭ್ಯರ್ಥಿಗಳಂತೂ ಭರ್ಜರಿಯಾಗಿಯೇ ತಯಾರಾಗುತ್ತಿದ್ದಾರೆ. ಇದರ ನಡುವೆ ರಾಜಕೀಯ ಊಹಾಪೋಹಗಳು, ಅಭ್ಯರ್ಥಿಗಳ ಕುರಿತಾದ ಅಂತೆ-ಕಂತೆಗಳ ಸುದ್ದಿಗಳು ಎಗ್ಗಿಲ್ಲದೆ ಹರಿದಾಡುತ್ತಿದೆ. ಇದಕ್ಕೆಲ್ಲಾ ಮಾರ್ಚ್ 24ರ ಹೊತ್ತಿಗೆ ತೆರೆ ಬೀಳಲಿದೆ.

ಒಂದು ವೇಳೆ ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟವಾದರೆ, ಮುಂದೆ ಅಂತಿಮ ಸಿದ್ಧತೆಗಳಿಗಷ್ಟೇ ಸಮಯ ಮೀಸಲು. ಪ್ರಚಾರದ ಅಂತಿಮ ದಿನ, ನಾಮಪತ್ರ ಸಲ್ಲಿಕೆಯಿಂದ ಹಿಡಿದು, ಚುನಾವಣಾ ಫಲಿತಾಂಶದವರೆಗಿನ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟ ಮಾಡಲಿದೆ. ರಾಜಕೀಯ ಕುರಿತಾಗಿ ಈಗ ಮೂಡಿರುವ ಎಲ್ಲಾ ಪ್ರಶ್ನೆಗಳಿಗೆ, ಕುತೂಹಲಗಳಿಗೆ ಮಾರ್ಚ್ 24ರಂದೇ ತೆರೆಬೀಳುವ ಸಾಧ್ಯಾತೆ ದಟ್ಟವಾಗಿದೆ.

ಕ್ಷೇತ್ರ ಗೆಲ್ಲುವುದಕ್ಕಿಂತ ಅಭ್ಯರ್ಥಿ ಆಯ್ಕೆಯೇ ಜಟಿಲ

Posted by Vidyamaana on 2023-04-10 19:31:37 |

Share: | | | | |


ಕ್ಷೇತ್ರ ಗೆಲ್ಲುವುದಕ್ಕಿಂತ ಅಭ್ಯರ್ಥಿ ಆಯ್ಕೆಯೇ ಜಟಿಲ

ಪುತ್ತೂರು: ಯಾವುದೂ ಅಂದುಕೊಂಡಂತೆ ನಡೆಯುತ್ತಿಲ್ಲ. ಆದ್ದರಿಂದ ಬಿಜೆಪಿ, ಕಾಂಗ್ರೆಸ್ ಪಕ್ಷದೊಳಗಡೆ ಟಿಕೇಟ್ ಪೈಪೋಟಿ ಮುಂದುವರಿದಿದೆ. ವರಿಷ್ಠರಿಗೆ ಕ್ಷೇತ್ರ ಗೆಲ್ಲುವ ಲೆಕ್ಕಾಚಾರವಾದರೆ, ಅಭ್ಯರ್ಥಿಗಳಿಗೆ ಟಿಕೇಟ್ ಪಡೆದುಕೊಳ್ಳುವುದೇ ಪ್ರತಿಷ್ಠೆ ಎಂಬಂತಾಗಿದೆ.

ಪ್ರತಿಸಲ ಚುನಾವಣೆ ಬಂದಾಗಲೂ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವೋ ಗೊಂದಲ. ಆದರೆ ಈ ಬಾರಿ ಆ ಗೊಂದಲ ಬಿಜೆಪಿಗೆ ಶಿಫ್ಟ್!

ಸದ್ಯದ ಬೆಳವಣಿಗೆಗಳನ್ನು ಕಂಡಾಗ, ಬಿಜೆಪಿಯ ಅಭ್ಯರ್ಥಿ ಪಟ್ಟಿಯನ್ನು ಗಮನಿಸಿಕೊಂಡು, ಕಾಂಗ್ರೆಸ್ ಮುಂದೆ ಹೆಜ್ಜೆ ಇಡುವಂತೆ ಕಾಣುತ್ತಿದೆ. ಇದು ಪುತ್ತೂರು ಕ್ಷೇತ್ರಕ್ಕೆ ಹೆಚ್ಚು ಸಮೀಪವರ್ತಿಯಾದ ಹೇಳಿಕೆಯೂ ಹೌದು.

ಸೋಮವಾರ ಸಂಜೆಯ ಹೊತ್ತಿಗೆ ಬಿಜೆಪಿ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಆದರೆ ವರಿಷ್ಠರ ನಡುವೆಯೇ ಸ್ಪಷ್ಟ ನಿರ್ಧಾರ ಕೈಗೊಳ್ಳುವುದು ಸಾಧ್ಯವಾಗದ ಹಿನ್ನೆಲೆಯಲ್ಲಿ ಪಟ್ಟಿ ಫೈನಲ್ ಆಗಿಲ್ಲ. ಆದರೆ ಅಂತಿಮ ಪಟ್ಟಿಯಲ್ಲಿ ಪುತ್ತೂರು ಬಿಜೆಪಿ ಅಭ್ಯರ್ಥಿಗಳಾಗಿ ಅರುಣ್ ಕುಮಾರ್ ಪುತ್ತಿಲ ಹಾಗೂ ಕಿಶೋರ್ ಕುಮಾರ್ ಬೊಟ್ಯಾಡಿ ಅವರ ಹೆಸರು ಇದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಇದನ್ನು ಆಧರಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆಯೇ ಎನ್ನುವುದೇ ಕುತೂಹಲ.

ಕಾಂಗ್ರೆಸಿನಲ್ಲಿ ಅಭ್ಯರ್ಥಿಗಳ ಸಂಖ್ಯೆ 14 ಇದ್ದರೂ, ಅಂತಿಮ ಪಟ್ಟಿಯಲ್ಲಿ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ಕುಮಾರ್ ರೈ ಅವರ ಹೆಸರು ಇದೆ. ಇವರಿಬ್ಬರ ಪೈಕಿ ಒಬ್ಬರ ಹೆಸರು ಅಂತಿಮಗೊಳ್ಳುವುದು ಬಹುತೇಕ ಪಕ್ಕಾ ಎನ್ನುವುದೇ ಸದ್ಯದ ಮಾಹಿತಿ.

ಬಿಜೆಪಿಗೆ ಎದುರಾದ ವಿಘ್ನ:

ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಇರುವುದರಿಂದ, ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮ ಮಾಡಲು ಹಿಂದೇಟು ಹಾಕುತ್ತಿವೆಯೇ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಪುತ್ತೂರಿನ ಮಟ್ಟಿಗೆ ಹೇಳುವುದಾದರೆ, ಇತ್ತೀಚೆಗಷ್ಟೇ ವೈರಲ್ ಆಗಿರುವ ಫೊಟೋ, ಅಭ್ಯರ್ಥಿ ಅಂತಿಮಕ್ಕೆ ಬಿಸಿ ತುಪ್ಪದಂತಾಗಿದೆ ಎಂದೇ ಹೇಳಬಹುದು. ಅಭಿವೃದ್ದಿಯ ಹರಿಕಾರ ಎಂದೇ ಬಣ್ಣಿಸಿದರೂ, ಕೊನೆ ಕ್ಷಣದಲ್ಲಿ ಎದುರಾದ ವಿಘ್ನವೊಂದು ಹಾಲಿ ಶಾಸಕರ ರಾಜಕೀಯ ಜೀವನಕ್ಕೆ ಹೊಸ ತಿರುವು ನೀಡುವ ಸಾಧ್ಯತೆ ದಟ್ಟವಾಗಿದೆ.

ಬಿಜೆಪಿ ಟಿಕೇಟ್ ಸಂಜೀವ ಮಠಂದೂರು ಕೈತಪ್ಪುವುದು ಬಹುತೇಕ ಸ್ಪಷ್ಟ. ಆದ್ದರಿಂದ ಆ ಸ್ಥಾನಕ್ಕೆ ಅರುಣ್ ಕುಮಾರ್ ಪುತ್ತಿಲ ಹಾಗೂ ಕಿಶೋರ್ ಕುಮಾರ್ ಬೊಟ್ಯಾಡಿ ಹೆಸರು ಪಟ್ಟಿಯಲ್ಲಿ ಕಾಣಸಿಕ್ಕಿದೆ ಎನ್ನುತ್ತವೆ ಮೂಲಗಳು. ಇವರಿಬ್ಬರಲ್ಲಿ ಅಂತಿಮ ಯಾರು ಎನ್ನುವುದೇ ಯಕ್ಷಪ್ರಶ್ನೆ.

ಕಾಂಗ್ರೆಸ್ ಲೆಕ್ಕಾಚಾರ:

ಪುತ್ತೂರಿನಲ್ಲಿ ಕಾಂಗ್ರೆಸ್ ನಡೆ ಇನ್ನೂ ನಿರ್ಧಾರವಾದಂತಿಲ್ಲ. ಬಿಜೆಪಿಯ ಅಭ್ಯರ್ಥಿಯನ್ನು ಆಧರಿಸಿ, ಕಾಂಗ್ರೆಸ್ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆಯೂ ಇದೆ. ಸಂಜೀವ ಮಠಂದೂರು ಅಭ್ಯರ್ಥಿಯಾದರೆ ಶಕುಂತಳಾ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿಸುವ ಸಾಧ್ಯತೆ ಇದೆ. ಕಾರಣ, ಮಹಿಳಾ ಹೋರಾಟಗಾರ್ತಿಯಾದ ಶಕುಂತಳಾ ಶೆಟ್ಟಿ, ಫೊಟೋ ವೈರಲ್ ಪ್ರಕರಣವನ್ನು ಸಮರ್ಥವಾಗಿ ಪಕ್ಷಕ್ಕೆ ಲಾಭವಾಗುವಂತೆ ತಿರುಗಿಸಬಲ್ಲರು. ಉಳಿದಂತೆ ಪುತ್ತಿಲ ಅಥವಾ ಬೊಟ್ಯಾಡಿ ಅಭ್ಯರ್ಥಿಯಾದರೆ, ಯಂಗ್ ಕ್ಯಾಂಡಿಡೇಟ್ ಅಶೋಕ್ ಕುಮಾರ್ ರೈ ಅಭ್ಯರ್ಥಿಯಾಗಲೂ ಬಹುದು.

ಕಣಕ್ಕೆ ಕಂಕಣ ಯಾವಾಗ?!:

ಒಟ್ಟಿನಲ್ಲಿ ಅಭ್ಯರ್ಥಿ ಆಯ್ಕೆಯ ಕಸರತ್ತು ಮುಗಿಯದೇ, ಚುನಾವಣಾ ಕಣ ರಂಗು ತುಂಬಿಕೊಳ್ಳುತ್ತಿಲ್ಲ. ಕೆಲ ದಿನಗಳ ಹಿಂದಿನವರೆಗೆ ನಡೆಯುತ್ತಿದ್ದ ಪ್ರಚಾರ ಕಾರ್ಯಗಳು, ಇದೀಗ ಮೆಲ್ಲನೆ ವೇಗ ಕುಂಠಿತಗೊಳ್ಳುವಂತೆ ಮಾಡಿದೆ. ಹಾಗೇ ನೋಡಿದರೆ, ಚುನಾವಣೆಯ ದಿನ ದೌಡಾಯಿಸುತ್ತಾ ಬರುತ್ತಿದೆ, ಬೆರಳೆಣಿಕೆಯ ದಿನಗಳಷ್ಟೇ ಬಾಕಿ. ಅಭ್ಯರ್ಥಿಯ ಗೊಂದಲದಲ್ಲೇ ಇರುವ ಕಾರ್ಯಕರ್ತರು, ಮುಖಂಡರು ಪ್ರಚಾರದೆಡೆಗೆ ಗಮನ ನೀಡುವುದು ಯಾವಾಗ? ರಂಗು ತುಂಬಿಕೊಳ್ಳುವುದು ಯಾವಾಗ? ಪಕ್ಷದ ಪರವಾಗಿ ಕಂಕಣ ಕಟ್ಟಿಕೊಳ್ಳುವವರು ಯಾರು?

ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

Posted by Vidyamaana on 2023-11-01 17:54:59 |

Share: | | | | |


ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

ಪುತ್ತೂರು : ಪ್ರಾಥಮಿಕ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸರ್ವೆ ಸಮೀಪ ನಡೆದಿದೆ.ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಮೃತ ಬಾಲಕ.ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.


ಸುಪ್ರೀತ್ ರವರು ಮುಂಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಮತ್ತು ಕುಂಞ ಮೇಸ್ತ್ರಿ ಅವರ ಪುತ್ರ.

ಈತ ಶಾಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ



Leave a Comment: