ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಸುದ್ದಿಗಳು News

Posted by vidyamaana on 2024-06-30 19:51:42 |

Share: | | | | |


ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.

 Share: | | | | |


ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

Posted by Vidyamaana on 2024-02-29 04:26:07 |

Share: | | | | |


ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಧಾನಸಭಾ ಕಲಾಪದಲ್ಲೂ ಭಾಗವಹಿಸಲು ಸಾಧ್ಯವಾಗದೆ ಅವರು ಇಂದು ಜಯನಗರದ ಅಫೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ಅವರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದರು ಈ ವೇಳೆ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ತಕ್ಷಣ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ರಾಜ್ಯಸಭಾ ಚುನಾವಣೆ ಮುಕ್ತಾಯದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದ್ದ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದೆ. ಇದಕ್ಕೂ ಮುನ್ನ ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್‌ನಿಂದ ಬಳಲುತ್ತಿದ್ದರು. ಇನ್ನು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ: ಫಲಿಸಿತು ಶತಕೋಟಿ ಭಾರತೀಯರ ಪ್ರಾರ್ಥನೆ ಸಿಹಿ ಹಂಚಿ ಸಂಭ್ರಮ

Posted by Vidyamaana on 2023-11-28 21:10:08 |

Share: | | | | |


ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ: ಫಲಿಸಿತು ಶತಕೋಟಿ ಭಾರತೀಯರ ಪ್ರಾರ್ಥನೆ ಸಿಹಿ ಹಂಚಿ ಸಂಭ್ರಮ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್​ಯಾರ್​ ಸುರಂಗದೊಳಗೆ ಸಿಲುಕಿ, ಕಳೆದ 17 ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಹೊಸ ಬದುಕಿಗಾಗಿ ಆಸೆಗಣ್ಣುಗಳಿಂದ ಎದುರು ನೋಡುತ್ತಿದ್ದ ಎಲ್ಲ 41 ಕಾರ್ಮಿಕರನ್ನು ಸುರಕ್ಷಿತವಾಗಿ ಸುರಂಗದಿಂದ ಇಂದು ಹೊರಕರೆತರಲಾಗಿದೆ.17 ದಿನಗಳ ನಿರಂತರ ಶ್ರಮ ಮತ್ತು ಅಸಂಖ್ಯಾತ ಜನಗಳ ಪ್ರಾರ್ಥನೆಗೆ ಫಲ ಸಿಕ್ಕಿದ್ದು, ಬಹುದೊಡ್ಡ ರಕ್ಷಣಾ ಕಾರ್ಯಾಚರಣೆ ದೊಡ್ಡ ಯಶಸ್ಸು ಸಾಧಿಸಿದೆ. ನಿಜಕ್ಕೂ ಇದೊಂದು ಬಿಗ್​ ಅಂಡ್​ ಸ್ವೀಟ್​ ನ್ಯೂಸ್​ ಎಂದೇ ಹೇಳಬಹುದಾಗಿದೆ.ಸುಮಾರು 50 ಮೀಟರ್​ಗೂ ಅಧಿಕ ದೂರದಲ್ಲಿ ಸುರಂಗದ ಒಳಗಡೆ ಸಿಲುಕಿದ್ದ ಎಲ್ಲ 41 ಕಾರ್ಮಿಕರನ್ನು ಒಬ್ಬೊಬ್ಬರಾಗಿ ಪೈಪ್​ ಮೂಲಕ ಗಾಲಿ ಸ್ಟ್ರೆಚರ್​ ಸಹಾಯದಿಂದ ರಕ್ಷಣಾ ತಂಡಗಳು ಹೊರಗೆಳೆದು ರಕ್ಷಣೆ ಮಾಡಿದವು. ಹೊರಗೆ ಬಂದರ ಕಾರ್ಮಿಕರಿಗೆ ತಕ್ಷಣ ಪ್ರಾಥಮಿಕ ಚಿಕಿತ್ಸೆ ಅಡಿಯಲ್ಲಿ ದೇಹ ಪರೀಕ್ಷೆ ಮಾಡಿ ತಕ್ಷಣ ಆಂಬ್ಯುಲೆನ್ಸ್​ಗಳ ಸಹಾಯದಿಂದ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಎಲ್ಲ ಕಾರ್ಮಿಕರು ಆರೋಗ್ಯಯುತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಪ್ರತೀ ಹಂತದಲ್ಲೂ ನಾಲ್ಕು ನಾಲ್ಕು ಕಾರ್ಮಿಕರನ್ನು ಹೊರಗೆ ಕರೆತರಲಾಯಿತು. ಕಾರ್ಮಿಕರ ರಕ್ಷಣೆಗೆ ಶತಕೋಟಿ ಭಾರತೀಯರು ಪ್ರಾರ್ಥಿಸಿದ್ದರು. ಎಲ್ಲರ ಪ್ರಾರ್ಥನೆ ಇಂದು ಫಲಿಸಿದ್ದು, ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರ್ಮಿಕರು ಹೊರಗೆ ಬರುತ್ತಿದ್ದಂತೆ ಸುತ್ತಲೂ ಜೈಕಾರಗಳು ಮೊಳಗಿದವು ಮತ್ತು ಸ್ಥಳದಲ್ಲಿ ನೆರೆದಿದ್ದ ಜನರು ಸಿಹಿ ಹಂಚಿ ಸಂಭ್ರಮಿಸಿದರು.ಸುರಂಗ ಮಾರ್ಗ ನಿರ್ಮಾಣದ ಉದ್ದೇಶವೇನು?

ಕೇಂದ್ರದ ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾದ ಸುರಂಗವು ಉತ್ತರಾಖಂಡದ ಸಿಲ್ಕ್ಯಾರಾ ಮತ್ತು ದಂಡಲ್ಗಾಂವ್ ನಡುವೆ ಉತ್ತರಕಾಶಿ ಮತ್ತು ಯಮುನೋತ್ರಿಯನ್ನು ಸಂಪರ್ಕಿಸಲು ಉದ್ದೇಶಿಸಿರುವ ರಸ್ತೆಯಲ್ಲಿದೆ. ಇದರ ಕಾಮಗಾರಿ ಭರದಿಂದ ಸಾಗಿತ್ತು. ಆದರೆ, ಮಣ್ಣು ಕುಸಿತದಿಂದಾಗಿ ನ.12 ರಂದು 41 ಕಾರ್ಮಿಕರು ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ.

ಬೆಂಗಳೂರು: ಮನೆಯಲ್ಲಿದ್ದ ಮಹಿಳೆ ಬೆತ್ತಲೆ ಶವವಾಗಿ ಪತ್ತೆ

Posted by Vidyamaana on 2024-04-20 20:38:39 |

Share: | | | | |


ಬೆಂಗಳೂರು: ಮನೆಯಲ್ಲಿದ್ದ ಮಹಿಳೆ ಬೆತ್ತಲೆ ಶವವಾಗಿ ಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಘಟನೆ ನಡೆದಿದೆ.ಕೊಲೆಯಾದ ಮಹಿಳೆಯನ್ನು ಶೋಭಾ ಎಂದು ಗುರುತಿಸಲಾಗಿದೆ.

ಶೋಭಾ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿ ಕೊಟ್ಟಿದದ್ದ ಶೋಭಾ,ಭದ್ರಪ್ಪ ಲೇಔಟ್ ಮನೆಯಲ್ಲಿ ಕುಟುಂಬ ಸಮೇತ ವಾಸವಿದ್ದರು. ಮನೆಯಲ್ಲಿ ಆಗಾಗ್ಗೆ ಒಬ್ಬರೇ ಇರುತ್ತಿದ್ದರು

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

Posted by Vidyamaana on 2023-11-21 21:02:55 |

Share: | | | | |


ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವಂದಿತಾ ಶರ್ಮಾ ಅವರ ಅವಧಿ ನ.30ಕ್ಕೆ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 1986ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದೆ.ದಿನಾಂಕ 30-11-2023ರಂದು ಸಿಎಸ್ ವಂದಿತಾ ಶರ್ಮಾ ಅವರು ನಿವೃತ್ತರಾಗಲಿದ್ದಾರೆ. ಅವರ ಸ್ಥಾನಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಪಿಯುಸಿ ಪರೀಕ್ಷೆ ಸಮಾನ ಅಂಕ ಪಡೆದ ಬೆಳ್ತಂಗಡಿಯ ಅವಳಿ ಸಹೋದರಿಯರು!

Posted by Vidyamaana on 2023-04-21 17:24:51 |

Share: | | | | |


ಪಿಯುಸಿ ಪರೀಕ್ಷೆ ಸಮಾನ ಅಂಕ ಪಡೆದ ಬೆಳ್ತಂಗಡಿಯ ಅವಳಿ ಸಹೋದರಿಯರು!

ಬೆಳ್ತಂಗಡಿ : ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%)ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ.ಉಮೇಶ್ ಗೌಡ ಪಿ ಹೆಚ್ ‌ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%)ಅಂಕ ಪಡೆದಿದ್ದಾರೆ. ಎಸ್ ಡಿಎಂ ಕಾಲೇಜು ಉಜಿರೆಯ ವಿದ್ಯಾರ್ಥಿಗಳು.ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಕಾಲೇಜು ಆಡಳಿತ ಮಂಡಳಿ ಪ್ರಾಧ್ಯಾಪಕರು ಇಬ್ಬರ ಸಾಧನೆಗೆ ಅಪಾರ ಮೆಚ್ಚುಗೆ ಸೂಚಿಸಿದ್ದಾರೆ.

ನಿಡ್ಪಳ್ಳಿ:ಬಿಜೆಪಿ-ಕಾಂಗ್ರೆಸ್-ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ

Posted by Vidyamaana on 2023-07-11 23:06:46 |

Share: | | | | |


ನಿಡ್ಪಳ್ಳಿ:ಬಿಜೆಪಿ-ಕಾಂಗ್ರೆಸ್-ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ

ಪುತ್ತೂರು: ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ದಿನ ನಿಗದಿಯಾಗಿದ್ದು, ಕಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ನಿಡ್ಪಳ್ಳಿ ಗ್ರಾ.ಪಂ.ನ 1ನೇ ವಾರ್ಡ್ ಸದಸ್ಯರಾಗಿದ್ದ, ಬಿಜೆಪಿ ಬೆಂಬಲಿತ ಸದಸ್ಯ ಮುರಳೀಕೃಷ್ಣ ಭಟ್ ಅವರ ಮರಣದ ಬಳಿಕ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.

ಈ ಬಾರಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸತೀಶ್ ಶೆಟ್ಟಿ ಹಾಗೂ ಹರೀಶ್ ಕಣಕ್ಕೆ ಧುಮುಕ್ಕಿದ್ದಾರೆ. ಈ ಬಾರಿ ಪುತ್ತಿಲ ಪರಿವಾರವೂ ಸತ್ವ ಪರೀಕ್ಷೆಗೆ ಮುಂದಾಗಿದ್ದು, ಜಗನ್ನಾಥ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.


ಹೀಗಿದೆ ಲೆಕ್ಕಾಚಾರ:

ಹಿಂದಿನ ಬಾರಿಯ ಚುನಾವಣೆಯಲ್ಲಿ ಮುರಳೀಕೃಷ್ಣ ಭಟ್ ಅವರು 29 ಮತಗಳಿಂದ ಗೆಲುವು ಸಾಧಿಸಿದ್ದರು. ಆಗ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ನೇರಾ ನೇರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಈ ಬಾರಿ ಪರಿಸ್ಥಿತಿ ಹಾಗಿಲ್ಲ. ಪುತ್ತಿಲ ಪರಿವಾರವೂ ಕಣದಲ್ಲಿ ಇರುವುದರಿಂದ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿಗೆ ಮತ್ತೊಮ್ಮೆ ಅಗ್ನಿ ಪರೀಕ್ಷೆಯಿದು. ಬಿಜೆಪಿ ಮತಗಳು ಹೋಳಾಗುವ ಕಾರಣದಿಂದ ಕಾಂಗ್ರೆಸ್ ಪರಿಸ್ಥಿತಿಯ ಪ್ರಯೋಜನ‌ ಪಡೆದುಕೊಳ್ಳುತ್ತದೆಯೇ? ಅಥವಾ ಮುರಳೀಕೃಷ್ಣ ಭಟ್ ಅವರ ಅನುಕಂಪದ ಮತಗಳು ಬಿಜೆಪಿ ಗೆಲುವಿಗೆ ಕಾರಣವಾಗಲಿದೆಯೇ? ಹೊಸ ಅಲೆ ಸೃಷ್ಟಿಸಿರುವ ಅರುಣ್ ಕುಮಾರ್ ಪುತ್ತಿಲ ಅವರು ಹೊಸದಾಗಿ ಇನ್ನಿಂಗ್ಸ್ ಶುಭಾರಂಭ ಮಾಡುವ ಸಾಧ್ಯತೆ ಇದೆಯೇ? ಹೀಗೆ ಅನೇಕ ಲೆಕ್ಕಾಚಾರಗಳು ಕಣದಲ್ಲಿ ಕೇಳಿಬರುತ್ತಿದೆ.


ಪಕ್ಷದ ಪರವಾಗಿ ನಿಂತ ಪ್ರಮುಖರು:

ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರದ ಬೆಂಬಲಿತ ಸದಸ್ಯರು ನಾಮಪತ್ರ ಸಲ್ಲಿಸುವಾಗ ಪಕ್ಷದ ಪ್ರಮುಖರು ಜೊತೆಯಲ್ಲಿದ್ದದ್ದು ಕಣದ ಗಂಭೀರತೆಗೆ ಸಾಕ್ಷಿಯಾಗಿತ್ತು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಶಾಸಕ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆಶಾ ತಿಮ್ಮಪ್ಪ ಹಾಗೂ ಕಾಂಗ್ರೆಸಿನಿಂದ ಜಿಲ್ಲಾ ಪ್ರಚಾರ ಸಮಿತಿಯ ಜಂಟಿ ಸಂಯೋಜಕ ಕೃಷ್ಣಪ್ರಸಾದ್ ಆಳ್ವ ಮತ್ತು ಪ್ರಮುಖರು, ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ, ಪ್ರಸನ್ನ ಕುಮಾರ್ ಮಾರ್ತಾ, ಉಮೇಶ್ ಗೌಡ ವೀರಮಂಗಲ ಮೊದಲಾದವರು ಉಪಸ್ಥಿತರಿದ್ದರು.



Leave a Comment: