ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಸುದ್ದಿಗಳು News

Posted by vidyamaana on 2024-06-30 19:31:43 |

Share: | | | | |


ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ

ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

 Share: | | | | |


ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸೇರಿದಂತೆ 16 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ

Posted by Vidyamaana on 2023-05-31 03:52:36 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸೇರಿದಂತೆ 16 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ

ಮಂಗಳೂರು : ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ಸಂಪಾಜೆ : ಸರಕಾರಿ ಬಸ್-ಕಾರು ಭೀಕರ ಅಪಘಾತ; ಆರು ಮಂದಿ ದುರ್ಮರಣ; ಇಬ್ಬರು ಗಂಭೀರ

Posted by Vidyamaana on 2023-04-14 10:28:38 |

Share: | | | | |


ಸಂಪಾಜೆ : ಸರಕಾರಿ ಬಸ್-ಕಾರು ಭೀಕರ ಅಪಘಾತ; ಆರು ಮಂದಿ ದುರ್ಮರಣ; ಇಬ್ಬರು ಗಂಭೀರ

ಸುಳ್ಯ: ಸಂಪಾಜೆಯಲ್ಲಿ ಸರಕಾರಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಎ.14ರ ಶುಕ್ರವಾರ ನಡೆದಿದೆ.

ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಮೂರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ಮಗು ಹಾಗೂ ಒಬ್ಬ ಪುರುಷ ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಮಂಡ್ಯ ಮೂಲದ ಕಾರು ಇದು ಎನ್ನಲಾಗಿದ್ದು, ಗಂಭೀರ ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟ ಮೃತದೇಹಗಳನ್ನು  ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತರ ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

ಹರೀಶ್ ಪೂಂಜಾ ಇನ್ನೂ ಬಚ್ಚಾ ಹಿಂದಿನ ಮುಖ್ಯಮಂತ್ರಿಗೆ ಕಲೆಕ್ಷನ್ ಮಾಸ್ಟರ್ ಅನ್ನಲಿ - ಸಿಎಂ ಸಿದ್ದರಾಮಯ್ಯ

Posted by Vidyamaana on 2023-10-28 15:33:11 |

Share: | | | | |


ಹರೀಶ್ ಪೂಂಜಾ ಇನ್ನೂ ಬಚ್ಚಾ ಹಿಂದಿನ ಮುಖ್ಯಮಂತ್ರಿಗೆ ಕಲೆಕ್ಷನ್ ಮಾಸ್ಟರ್ ಅನ್ನಲಿ - ಸಿಎಂ ಸಿದ್ದರಾಮಯ್ಯ

ಮಂಗಳೂರು : ಸಿಎಂ ಸಿದ್ದರಾಮಯ್ಯರ ಬಗ್ಗೆ ಹರೀಶ್ ಪೂಂಜಾ ಫೇಸ್‌ಬುಕ್‌ ಪೇಜ್ ನಲ್ಲಿ ಕಲೆಕ್ಷನ್ ಮಾಸ್ಟರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿಗೆ ಆಗಮಿಸಿದ್ದ ಸಿ.ಎಂ ಸಿದ್ದರಾಮಯ್ಯ ಹರೀಶ್ ಪೂಂಜಾ ಅವರನ್ನು ಬಚ್ಚಾ ಎಂದು ಕರೆದಿದ್ದಾರೆ‌.ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ, ನಾನು 83ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು. ಆವತ್ತು ಯಾರು ನನ್ನ ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ ಹಿಂದಿನ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದಿದ್ದಾರೆ

ಶಾಲೆಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಡಿ.ಕೆ ಶಿವಕುಮಾರ್

Posted by Vidyamaana on 2023-12-01 12:44:28 |

Share: | | | | |


ಶಾಲೆಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಡಿ.ಕೆ ಶಿವಕುಮಾರ್

ಬೆಂಗಳೂರು: ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನೀವ್ ಬೇಬಿ ಸಿಟ್ಟಿಂಗ್ಗೆ ಇ-ಮೇಲ್ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ.


ಬಳಿಕ ಪ್ರತಿಕ್ರಿಯಿಸಿ, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ, ಟಿವಿಯಲ್ಲಿ ವಿಷಯ ತಿಳಿದು ಗಾಬರಿ ಆದೆ. ಇದೊಂದು ಹುಸಿ ಕರೆ ಅಂತ ಮೇಲ್ನೋಟಕ್ಕೆ ಗೊತ್ತಾಗ್ತಿದೆ. 8-10 ಬಾರಿ ಹೀಗೆ ಹುಸಿ ಕರೆ ಮಾಡ್ತಾರೆ ಯಾವಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು ಯಾವುದನ್ನೂ ಕಡೆಗಣಿಸೋಕೆ ಆಗಲ್ಲ ಎಂದು ಹೇಳಿದ್ದಾರೆ.

ಪುತ್ತೂರು : ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ : ಪುತ್ತಿಲ ಪರಿವಾರದಿಂದ ಸಹಾಯಹಸ್ತ

Posted by Vidyamaana on 2024-02-09 17:29:46 |

Share: | | | | |


ಪುತ್ತೂರು : ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ : ಪುತ್ತಿಲ ಪರಿವಾರದಿಂದ ಸಹಾಯಹಸ್ತ

ಪುತ್ತೂರು : ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಉಂಟಾದ ಕುಟುಂಬಕ್ಕೆ ಪುತ್ತಿಲ ಪರಿವಾರ ಸಹಾಯಹಸ್ತ ನೀಡಿದೆ.


ಪಡೀಲು ನಾರಾಯಣ ನಾಯ್ಕ್ ಮತ್ತು ಶಿವಪ್ರಸಾದ್ ನಾಯ್ಕ್ ಎಂಬವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟವಾಗಿದೆ.ಅವಘಡ ನಡೆದ ದಿನದಂದೆ ಅರುಣ್ ಕುಮಾರ್ ಪುತ್ತಿಲ ಹಾಗೂ ತಂಡ ಭೇಟಿ ನೀಡಿ ಸಾಂತ್ವನ ಹೇಳಿದ್ದರು.

ಫೆ.9 ರಂದು ಅವರ ಮನೆಗೆ ಭೇಟಿ ನೀಡಿ ಸಹಾಯಹಸ್ತ ನೀಡಿದರು.ಪುತ್ತಿಲ ಪರಿವಾರದ ನಗರ ಅಧ್ಯಕ್ಷ ಅನಿಲ್ ತೆಂಕಿಲ,ಚಂದ್ರಹಾಸ ಶೆಟ್ಟಿ ಆನೆಮಜಲು,ಸತೀಶ್ ಭಂಡಾರಿ,ಪ್ರವೀಣ್ ಭಂಡಾರಿ, ಮನೀಶ್ ಕುಲಾಲ್, ಶರತ್ ರೈ ಸ್ಥಳಿಯರಾದ ಚಂದ್ರಹಾಸ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜ.22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ: ಸರ್ಕಾರದ ನಡೆ ಸ್ವಾಗತಿಸಿದ ಬಿಜೆಪಿ

Posted by Vidyamaana on 2024-01-08 16:05:43 |

Share: | | | | |


ಜ.22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ: ಸರ್ಕಾರದ ನಡೆ ಸ್ವಾಗತಿಸಿದ ಬಿಜೆಪಿ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ. ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಟಿ ರವಿಯವರು, ಇದು ಉತ್ತಮ ನಿರ್ಧಾರ. ಇದಕ್ಕೆ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳುತ್ತೇವೆ. ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಬುದ್ಧಿ ಬಂದಿದೆ. ರಾಮ ಎಲ್ಲರಿಗೂ ಸೇರಿದವನಾಗಿದ್ದಾನೆ.


ರಾಮನನ್ನು ತೊರೆದಿದ್ದ ಕಾಂಗ್ರೆಸ್ ಇದೀಗ ರಾಮನ ಬಳಿಗೆ ಬರುತ್ತಿದೆ. ಇದು ಒಳ್ಳೆಯದು. ದೇಶಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.ಕೇಂದ್ರ ಸಚಿವರ ಪ್ರಹ್ಲಾದ್ ಜೋಶಿಯವರು ಪ್ರತಿಕ್ರಿಯಿಸಿ, ಕಾಂಗ್ರೆಸ್ಗೆ ಇದೀಗ ಬುದ್ಧಿ ಬಂದಿದೆ ಎಂದು ತಿಳಿಸಿದ್ದಾರೆ.


ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥನಾರಾಯಣ್ ಅವರು ಮಾತನಾಡಿ, ಸರ್ಕಾರ ಉತ್ತಮ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದಾದ್ಯಂತ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ನಾನು ಪ್ರಶಂಸಿಸುತ್ತೇನೆಂದು ಹೇಳಿದ್ದಾರೆ.



Leave a Comment: