ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

ಸುದ್ದಿಗಳು News

Posted by vidyamaana on 2024-07-03 20:52:26 |

Share: | | | | |


ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಗರದ ಬಲ್ಮಠ ಬಳಿ ಬುಧವಾರ ಸಂಭವಿಸಿದೆ.ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ತಿಳಿದು ಬಂದಿದೆ.ಮಧ್ಯಾಹ್ನ ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದರು.

ಘಟನೆ ನಡೆದ ವಿಚಾರ ತಿಳುಯುತ್ತಲೇ ಸ್ಥಳಕ್ಕೆ ಅಗ್ನಿಶಾಮಕ ದಳ , ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದಾರೆ ಇದಾದ ಕೆಲವು ಗಂಟೆಗಳ ಬಳಿಕ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ನಡುವೆ ಮಣ್ಣಿನಡಿ ಸಿಲುಕಿದ್ದ ಚಂದನ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿತ್ತು.

ರಿಟೇನಿಂಗ್ ವಾಲ್ ಮತ್ತು ಶೀಟ್ ಗಳ ಮಧ್ಯೆ ಸಿಲುಕಿದ್ದ ಕಾರ್ಮಿಕನ ರಕ್ಷಣೆಗಾಗಿ ರಾತ್ರಿಯ ವರೆಗೂ ಕಾರ್ಯಾಚರಣೆ ನಡೆಸಿದರೂ ಕಾರ್ಮಿಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಸುಮಾರು ಏಳು ಗಂಟೆಯ ವೇಳೆಗೆ ಮೃತದೇಹವನ್ನು ಎನ್ ಡಿ ಆರ್ ಎಫ್ ತಂಡ ಹೊರತೆಗೆದಿದೆ.

 Share: | | | | |


ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

Posted by Vidyamaana on 2023-12-24 12:17:35 |

Share: | | | | |


ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಕಲ್ಪಿಸಿದಂತೆ ಉನ್ನತ ಶಿಕ್ಷಣದೊಂದಿಗೆ ತಡೆರಹಿತ ಏಕೀಕರಣವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತನ್ನ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ(1 nation, 1 student ID) ಉಪಕ್ರಮವನ್ನು ಶೀಘ್ರದಲ್ಲೇ ಶಾಲೆಗಳಿಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಉಪಕ್ರಮದ ಅಡಿಯಲ್ಲಿ, 12-ಅಂಕಿಯ ವಿಶಿಷ್ಟ ID ಯೊಂದಿಗೆ ಸ್ವಯಂಚಾಲಿತ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ (APAAR) ಕಾರ್ಡ್ ಅನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ಕೇಂದ್ರವು ಉನ್ನತ ಶಿಕ್ಷಣದಲ್ಲಿ ಈ ಉಪಕ್ರಮವನ್ನು ಪ್ರಾರಂಭಿಸಿದೆ ಮತ್ತು ಇದೀಗ 22 ಮಿಲಿಯನ್ ವಿದ್ಯಾರ್ಥಿಗಳಿಗೆ APAAR ID ಗಳನ್ನು ನೀಡಲಾಗುತ್ತಿದೆ.


APAAR, ಆಧಾರ್-ದೃಢೀಕರಿಸಿದ ಐಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬ್ಯಾಂಕ್ ಆಫ್ ಕ್ರೆಡಿಟ್ (ABC) ಗೆ ಗೇಟ್‌ವೇ ಆಗಿದೆ. ಇದು ಕ್ರೆಡಿಟ್‌ಗಳ ಡಿಜಿಟಲ್ ರೆಪೊಸಿಟರಿಯಾಗಿದೆ. ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಬಹುದಾದ ಡಿಜಿಟಲ್ ಲಾಕರ್ ಡಿಜಿಲಾಕರ್ ಅನ್ನು ಪ್ರವೇಶಿಸಲು ಸಹ ಇದನ್ನು ಬಳಸಲಾಗುತ್ತದೆ. APAAR ಅಂತಿಮವಾಗಿ ಪೂರ್ವ ಪ್ರಾಥಮಿಕದಿಂದ PhD ವರೆಗಿನ ವಿದ್ಯಾರ್ಥಿಗಳಿಗೆ ಜೀವಮಾನದ ID ಆಗಿರುತ್ತದೆ.ಶಿಕ್ಷಣವು ರಾಜ್ಯದ ವಿಷಯವಾಗಿರುವುದರಿಂದ, NEP 2020 ರ ಅಡಿಯಲ್ಲಿ ರಾಜ್ಯಗಳು ಯಾವುದೇ ಉಪಕ್ರಮವನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ.


ಶಾಲೆಗಳಲ್ಲಿ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ಉಪಕ್ರಮದ ಅನುಷ್ಠಾನದ ಕುರಿತು ವಿವಿಧ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಶಿಕ್ಷಣ ಸಚಿವಾಲಯದ ಅಡಿಯಲ್ಲಿರುವ ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆಯ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹೇಳಿದರು.


"ಇದು ವಿದ್ಯಾರ್ಥಿಗಳು, ಶಾಲೆಗಳು ಮತ್ತು ಸಂಪೂರ್ಣ ಶಿಕ್ಷಣ ವ್ಯವಸ್ಥೆಗೆ ವಿಷಯಗಳನ್ನು ಸುಲಭಗೊಳಿಸುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪತ್ತೆಹಚ್ಚಲು ಇದು ಅವರಿಗೆ ಸಹಾಯ ಮಾಡುತ್ತದೆ. ಪೋಷಕರು ವರ್ಗಾವಣೆ ಮಾಡಬಹುದಾದ ಉದ್ಯೋಗದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಸಹಾಯ ಮಾಡುತ್ತದೆ. ಅವರು ತಮ್ಮ ಶಾಲೆಗಳನ್ನು ಅಧಿವೇಶನದ ಮಧ್ಯದಲ್ಲಿ ಬದಲಾಯಿಸಿದರೆ, ಇತರ ಶಾಲೆಗಳು ತಮ್ಮ ABC ಖಾತೆಗೆ ಅನನ್ಯ ID ಯನ್ನು ಬಳಸಿಕೊಂಡು ಲಾಗ್ ಇನ್ ಮಾಡುವ ಮೂಲಕ ತಮ್ಮ ಪ್ರಗತಿಯನ್ನು ಪ್ರವೇಶಿಸಬಹುದು ಎಂದು ಹೇಳಿದರು.


ಈ ವರ್ಷ ಕೇಂದ್ರ ಸರ್ಕಾರವು ರಾಷ್ಟ್ರೀಯ ಸಾಲ ಚೌಕಟ್ಟನ್ನು (NCrF) ಪರಿಚಯಿಸಿದೆ. ಅದರಲ್ಲಿ ಶಾಲೆ ಮತ್ತು ವೃತ್ತಿಪರ ಶಿಕ್ಷಣವನ್ನು ಸೇರಿಸಲಾಗಿದೆ. NCrF ಅಡಿಯಲ್ಲಿ, ವಿದ್ಯಾರ್ಥಿಗಳು ಶಾಲೆಯಿಂದಲೇ ಕ್ರೆಡಿಟ್‌ಗಳನ್ನು ಗಳಿಸುತ್ತಾರೆ. ಅದನ್ನು ಅವರ ABC ಖಾತೆಗಳಲ್ಲಿ ಸಂಗ್ರಹಿಸಲಾಗುತ್ತದೆ.

ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ

Posted by Vidyamaana on 2024-05-29 05:52:26 |

Share: | | | | |


ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ

ಉಡುಪಿ, ಮೇ 28: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಪಟ್ಟು ಸಡಿಲಿಸದೇ ಸುಪ್ರೀಂ ಕೋರ್ಟ್ ವರೆಗೂ ಹೋಗಿದ್ದ ಉಡುಪಿಯ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ, ಟ್ವಿಟರ್ ನಲ್ಲಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪ್ರಶ್ನೆ ಮಾಡಿ ಅಣಕಿಸಿದ್ದಾರೆ.‌ 

ಟ್ವಿಟ್ಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಆಲಿಯಾ ಅಸ್ಸಾದಿ, ಅಂದು ಹಿಜಾಬ್‌ ಕಾರಣಕ್ಕಾಗಿ ನನ್ನನ್ನು ಕಾಲೇಜಿನಿಂದ ಹೊರದಬ್ಬಿದ್ರಿ. ಆ ಕಾರಣಕ್ಕಾಗಿ ನೀವು ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದ್ದೀರಿ. ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವುದನ್ನು ನೋಡುತ್ತಿದ್ದೇನೆ. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ ಎಂದು ಮಾಜಿ ಶಾಸಕ ರಘುಪತಿ ಭಟ್ ಅವರ ಕಾಲೆಳೆಯುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

10ನೇ ಬಾರಿ ಫೈನಲ್ ಗೆ ಎಂಟ್ರಿ ಕೊಟ್ಟ ಚೆನ್ನೈ ಸೂಪರ್ ಕಿಂಗ್ಸ್

Posted by Vidyamaana on 2023-05-24 00:57:21 |

Share: | | | | |


10ನೇ ಬಾರಿ ಫೈನಲ್ ಗೆ ಎಂಟ್ರಿ ಕೊಟ್ಟ ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ : ಎಂಎಸ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಫೈನಲ್ ತಲುಪುವ ಮೂಲಕ ಇತಿಹಾಸ ನಿರ್ಮಿಸಿದೆ. ಚೆಪಾಕ್‌ನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ (ಮೇ 23) ನಡೆದ ಹೈ ವೋಲ್ವೇಜ್ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆಲ್‌ರೌಂಡ್ ಪ್ರದರ್ಶನ ನೀಡಿದ ಅಂಕಪಟ್ಟಿಯ ಅಗ್ರಸ್ಥಾನಿ ಗುಜರಾತ್ ಟೈಟನ್ಸ್ ತಂಡವನ್ನು 15 ರನ್‌ಗಳ ಅಂತರದಲ್ಲಿ ಬಗ್ಗುಬಡಿಯಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ದಾಖಲೆಯ 10ನೇ ಬಾರಿ ಪ್ರಶಸ್ತಿ ಸುತ್ತಿಗೆ ಕಾಲಿಟ್ಟ ಸಾಧನೆ ಮೆರೆದಿದೆ.

ಸಿಎಸ್‌ಕೆ ಭರ್ಜರಿ ಬ್ಯಾಟಿಂಗ್

ಕ್ವಾಲಿಫೈಯರ್ 1 ಹಣಾಹಣಿಯಲ್ಲಿ ಟಾಸ್ ಸೋತ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬ್ಯಾಟ್ ಮಾಡುವಂತ್ತಾಯಿತು. ಬೌಲಿಂಗ್ ಸ್ನೇಹಿ ಪಿಚ್‌ನಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ ಸಿಎಸ್‌ಕೆ ಮೊತ್ತ ದಾಖಲಿಸಿತು. ಓಪನರ್‌ಗಳಾದ ಋತುರಾಜ್ ಗಾಯಕ್ವಾಡ್ (60) ಮತ್ತು ಡೆವೋನ್ ಕಾನ್ವೇ (40) ಮೊದಲ ವಿಕೆಟ್‌ಗೆ 87 ರನ್‌ಗಳನ್ನು ಒಗ್ಗೂಡಿಸಿ ತಂಡದ ದೊಡ್ಡ ಮೊತ್ತಕ್ಕೆ ಭದ್ರ ಅಡಿಪಾಯ ಹಾಕಿತು. ಟೈಟನ್ಸ್ ತಂಡದ ವೇಗಿಗಳ ಮೊಹಮ್ಮದ್ ಶಮಿ ಮತ್ತು ಮೋಹಿತ್ ಶರ್ಮಾ ತಲಾ ವಿಕೆಟ್ ಕಿತ್ತು, ಸಿಎಸ್‌ಕೆ ಬ್ಯಾಟರ್‌ಗಳ ಅಬ್ಬರಕ್ಕೆ ಕೊಂಚ ಬ್ರೇಕ್ ಹಾಕಿದರು. ಆದರೂ, ಸ್ಲಾಗ್ ಓವರ್‌ಗಳಲ್ಲಿ ರವೀಂದ್ರ ಜಡೇಜಾ (22) ಅವರ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಸಿಎಸ್‌ಕೆ 170ರ ಗಡಿ ದಾಟಿತು. 20 ಓವರ್‌ಗಳಲ್ಲಿ 172/7 ರನ್ ಕಲೆಹಾಕಿತು.

ಚೇಸಿಂಗ್‌ನಲ್ಲಿ ಸೋತ ಪಾಂಡ್ಯ ಪಡೆ

ಟೂರ್ನಿಯುದ್ದಕ್ಕೂ ರನ್ ಚೇಸಿಂಗ್‌ನಲ್ಲಿ ಎತ್ತಿದ ಕೈ ಎನಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಸಾರಥ್ಯದ ಗುಜರಾತ್ ಟೈಟನ್ಸ್, ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುರಿ ಬೆನ್ನತ್ತಿ ಮುಗ್ಗರಿಸಿತು. ಸಿಎಸ್‌ ಕ್ಯಾಪ್ಟನ್ ಎಂಎಸ್ ಧೋನಿ ರಚಿಸಿದ್ದ ಫೀಲ್ಡಿಂಗ್ ವ್ಯೂಹ ಮತ್ತು ಬೌಲರ್‌ಗಳಿಂದ ಮೂಡಿಬಂದ ಕಟ್ಟುನಿಟ್ಟಿನ ದಾಳಿ ಎದುರು ಟೈಟನ್ಸ್ ರನ್ ಹೆಕ್ಕಲು ತಡಬಡಾಯಿಸಿತು. ಇನ್ ಫಾರ್ಮ್ ಓಪನರ್ ಶುಭಮನ್ ಗಿಲ್ (42) ಮತಯ್ತು ಇನಿಂಗ್ಸ್ ಅಂತ್ಯದಲ್ಲಿ ರಶೀದ್ ಖಾನ್ (30) ಹೋರಾಡಿದರೂ, ಟೈಟನ್ಸ್ 157 ರನ್‌ಗಳಿಗೆ ಆಲ್‌ಔಟ್ ಆಯಿತು. ಸಿಎಸ್‌ಕೆ ಪರ ದೀಪಕ್ ಚಹ‌, ಮತೀಶ ಪತಿರಣ, ಮಹೇಶ್ ತೀಕ್ಷಣ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಉರುಳಿಸಿ ಚೆನ್ನೈಗೆ ಜಯದ ಮಾಲೆ ತೊಡಿಸಿದರು.ಫೈನಲ್ ತಲುಪಲು ಟೈಟನ್ಸ್‌ಗೆ ಮತ್ತೊಂದು ಅವಕಾಶ ಅಂಕಪಟ್ಟಿಯ ಅಗ್ರಸ್ಥಾನಿ ಗುಜರಾತ್ ಟೈಟನ್ಸ್ ತಂಡ ಕ್ವಾಲಿಫೈಯರ್ 1 ಪಂದ್ಯದಲ್ಲಿ ಸಿಎಸ್‌ಕೆ ಎದುರು ಮುಗ್ಗರಿಸಿದರೂ, ಫೈನಲ್‌ಗೆ ಅರ್ಹತೆ ಪಡೆಯಲು ಮತ್ತೊಂದು ಅವಕಾಶ ಹೊಂದಿದೆ. ಮೇ 26ರಂದು ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಎಲಿಮಿನೇಟರ್ ಪಂದ್ಯದ ವಿನ್ನರ್ ಎದುರು ಫೈನಲ್ ಅರ್ಹತೆಗಾಗಿ ಪೈಪೋಟಿ ನಡೆಸಲಿದೆ. ಮೇ 24ರಂ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಮತ್ತು ಲಖನೌ ಸೂಪರ್ ಜಯಂಟ್ಸ್ ತಂಡಗಳು ಪೈಪೋಟಿ ನಡೆಸಲಿವೆ. ಇಲ್ಲಿ ಗೆದ್ದ ತಂಡಕ್ಕೆ ಗುಜರಾತ್ ಟೈಟನ್ಸ್ ಸವಾಲು ಎದುರಾಗಲಿದೆ. ಫೈನಲ್ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 28ರಂದು ನಡೆಯಲಿದೆ.

HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Posted by Vidyamaana on 2024-02-12 06:39:50 |

Share: | | | | |


HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (High Security number plate-HSRP) ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ.ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಾರಿಗೆ ಇಲಾಖೆ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನೇಕ ಇಲಾಖೆಗಳನ್ನ ಸಿಎಂ ಸಭೆ ಕರೆದಿದ್ದರು. ಅದೇ ರೀತಿ ಸಾರಿಗೆ ಇಲಾಖೆಯವರು ಕೂಡ ಭಾಗಿಯಾಗಿದ್ದರು. ಆಟೋ ಟ್ಯಾಕ್ಸಿ, ಲಾರಿ ಅಸೋಷಿಯಷನ್ ಅವರು ಎಲ್ಲಾ ಬಂದಿದ್ದರು. ಅವರ ಬೇಡಿಕೆಗಳನ್ನ ಕೂಡ ಇಟ್ಟಿದ್ದಾರೆ. ಜೊತೆಗೆ, ನಮ್ಮ ಸರ್ಕಾರ ಬಂದಮೇಲೆ ಸಾಕಷ್ಟು ಬೇಡಿಕೆ ಈಡೇರಿಸಿದ್ದೇವೆ ಎಂದರು. ಇಂದು ಹೊಸ ಬೇಡಿಕೆಗಳನ್ನೂ ಸಹ ಇಟ್ಟಿದ್ದಾರೆ. ಮುಂದಿನದ್ದು ಬಜೆಟ್ ದಿನ ನೋಡೋಣ ಎಂದು ಹೇಳಿದ್ದೇವೆ ಎಂದು ಹೇಳಿದರು.


ಇನ್ನು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆ.17ನೇ ತಾರೀಕು ಲಾಸ್ಟ ಡೇಟ್ ಇದೆ. ಹಿಂದೆ ಒಂದು ಸರಿ ಮುಂದಕ್ಕೆ ಹಾಕಿದ್ದೆವು. ಈಗ ಮತ್ತೆ ಮುಂದಕ್ಕೆ ಹಾಕಿ ಅಂತಾ ಹೇಳ್ತ ಇದಾರೆ. ಇನ್ನು ಒಂದುವಾರ ಸಮಯ ಇದೆ. ಎಲ್ಲಾ ಕೊನೇನಲ್ಲಿ ಅರ್ಜಿ ಹಾಕೋಕೆ ಬರ್ತಾರೆ. ಒತ್ತಡ ಜಾಸ್ತಿ ಆಗಿ ಅಪ್ಲೋಡ್ ಆಗೋಲ್ಲ ಅದೊಂದು ಸಮಸ್ಯೆ ಇದೆ. ಇನ್ನು ಟೈಮ್ ಇದೆ ನೋಡೋಣ ಎಂದುಸಾರಿಗೆ ಸಚೊವ ರಾಮಲಿಂಗಾರೆಡ್ಡಿ ಅವರು ಬಿಗ್ ಅಪ್ಡೇಟ್ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ (ಎ 27)ಪ್ರಚಾರ ಸಭೆಗಳು

Posted by Vidyamaana on 2023-04-27 02:00:20 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ   ಇಂದಿನ (ಎ 27)ಪ್ರಚಾರ ಸಭೆಗಳು

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಗ್ರಾಮಾಂತರ ಭಾಗಗಳಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಲಾಗುತ್ತಿದೆ.


ಅಶೋಕ್ ಕುಮಾರ್ ರೈ ಅವರ ಇಂದಿನ ಪ್ರಚಾರ ಸಭೆಗಳು ಹೀಗಿವೆ -

 ಬೆಳಿಗ್ಗೆ  9 : 30 ರಿಂದ 11 ಗಂಟೆ ಗೆ  ಇಡ್ಕಿದು ಸೇವಾ ಸಹಕಾರ ಸಂಘ ಪ್ರದಾನ ಕಚೇರಿ ಯ ಮುಂಬಾಗದ ಉರಿಮಜಲಿನಲ್ಲಿ   ಮತ್ತು   ಕಬಕ ವಲಯದ ಕಲ್ಲಂದಡ್ಕ ಎಂಬಲ್ಲಿ ಬೆಳಿಗ್ಗೆ 10.30 ರಿಂದ 12.30 ರ ತನಕ  ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ..

ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

Posted by Vidyamaana on 2024-06-13 08:11:33 |

Share: | | | | |


ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2024-25 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ ಘಟಕದ ವ್ಯಕ್ತಿಗತ ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಂಘ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಸ್ವ-ಸಹಾಯ ಗುಂಪಿನಲ್ಲಿ ಸದಸ್ಯರಿರುವ ಕುಟುಂಬದ ಅರ್ಹ ಫಲಾನುಭವಿಗಳಿಂದ ಗುಂಪು ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಚಟುವಟಿಕೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳು ಅಥವಾ ಗುಂಪುಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.



Leave a Comment: