ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

ಸುದ್ದಿಗಳು News

Posted by vidyamaana on 2024-06-26 20:07:03 |

Share: | | | | |


ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

ದೆಹಲಿ ಜೂನ್ 26: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಮಾಡಿದ ಹೇಳಿಕೆ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು. ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಓವೈಸಿ ಅವರು ಪ್ಯಾಲೆಸ್ತೀನ್‌ನ ಯುದ್ಧ ಪೀಡಿತ ಪ್ರದೇಶಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಇದನ್ನು ಆಡಳಿತಾರೂಢ ಪಕ್ಷದ ಸಂಸದರು ಖಂಡಿಸಿದ್ದಾರೆ.

ಐದು ಬಾರಿ ಹೈದರಾಬಾದ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಓವೈಸಿ ಜೈ ತೆಲಂಗಾಣ ಮತ್ತು ಜೈ ಪ್ಯಾಲೆಸ್ತೀನ್ ಘೋಷಣೆಗಳನ್ನು ಕೂಗಿದ್ದರು. ಈ ಘೋಷಣೆಗೆ ಆಕ್ರೋಶ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ, ಓವೈಸಿ ಇಂಥಾ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನನಗೂ ಸಂವಿಧಾನದ ಬಗ್ಗೆ ಸ್ವಲ್ಪ ತಿಳಿದಿದೆ, ಈ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.

ಅಸಾದುದ್ದೀನ್ ಓವೈಸಿ ಟ್ವೀಟ್

ಇದಕ್ಕೂ ಮೊದಲು, ಓವೈಸಿ ಅವರು ಸಂಸತ್ತಿನಲ್ಲಿ ಜೈ ಪ್ಯಾಲೆಸ್ತೀನ್  ಘೋಷಣೆಯನ್ನು ಸಮರ್ಥಿಸಿಕೊಂಡಿದ್ದು, ತನ್ನ ಹೇಳಿಕೆಗಳು ಖಂಡನೀಯ ಎಂದು ಸಂವಿಧಾನದಲ್ಲಿ ಹೇಳಿಲ್ಲ ಎಂದು ಹೇಳಿದರು. ಇಂಥಾ ಹೇಳಿಕೆಗಳಿಗಾಗಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಬೇಕು ಎಂದು ಹಲವಾರು ರಾಜಕೀಯ ನಾಯಕರು ಒತ್ತಾಯಿಸಿದ್ದಕ್ಕೆ ಓವೈಸಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಎಎನ್‌ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ಎಲ್ಲರೂ ತುಂಬಾನೇ ಹೇಳುತ್ತಿದ್ದಾರೆ. ನಾನು ಕೇವಲ ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಹೇಳಿದ್ದೇನೆ.. ಅದು ಹೇಗೆ ತಪ್ಪು? ಸಂವಿಧಾನದಲ್ಲಿ ಅದು ತಪ್ಪು ಅಂತ ಹೇಳಿರುವುದನ್ನು ತೋರಿಸಿ ಎಂದಿದ್ದಾರೆ.

ಜೈ ಪ್ಯಾಲೆಸ್ತೀನ್ ಎಂದು ಯಾಕೆ ಹೇಳಿದ್ದೀರಿ ಎಂದು ಕಾರಣವನ್ನು ಕೇಳಿದಾಗ, ಓವೈಸಿ, ವಹಾ ಕಿ ಆವಾಮ್ ಮಹ್ರೂಮ್ ಹೈ (ಅಲ್ಲಿನ ಜನರು ನಿರ್ಗತಿಕರಾಗಿದ್ದಾರೆ) ಮಹಾತ್ಮ ಗಾಂಧಿಯವರು ಪ್ಯಾಲೆಸ್ತೀನ್ ಬಗ್ಗೆ ಹಲವಾರು ವಿಷಯಗಳನ್ನು ಹೇಳಿದ್ದಾರೆ. ಅದರ ಬಗ್ಗೆ ಓದಿ ನೋಡಿ ಎಂದು ಹೇಳಿದ್ದಾರೆ.

ನಮಗೆ ಪ್ಯಾಲೆಸ್ತೀನ್ ಅಥವಾ ಬೇರೆ ಯಾವುದೇ ದೇಶದೊಂದಿಗೆ ಯಾವುದೇ ದ್ವೇಷವಿಲ್ಲ, ಸಮಸ್ಯೆ ಏನೆಂದರೆ, ಪ್ರಮಾಣ ವಚನ ಸ್ವೀಕರಿಸುವಾಗ, ಯಾವುದೇ ಸದಸ್ಯರು ಬೇರೆ ದೇಶವನ್ನು ಹೊಗಳಿ ಘೋಷಣೆ ಕೂಗುವುದು ಸರಿಯೇ?. ನಮಗೆ ಬೇರೆ ಯಾವುದೇ ದೇಶದೊಂದಿಗೆ ಯಾವುದೇ ಸಮಸ್ಯೆ ಇಲ್ಲ ಆದರೆ ಅದು ಸೂಕ್ತವಾಗಿದ್ದರೆ ನಾವು ನಿಯಮಗಳನ್ನು ಪರಿಶೀಲಿಸಬೇಕಾಗುತ್ತದೆ. ಕೆಲವು ಸದಸ್ಯರು ನನ್ನ ಬಳಿಗೆ ಬಂದು ಪ್ರಮಾಣವಚನದ ಕೊನೆಯಲ್ಲಿ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದರ ಬಗ್ಗೆ ದೂರು ನೀಡಿದ್ದಾರೆ ಎಂದು ರಿಜಿಜು ಹೇಳಿದ್ದಾರೆ.

 Share: | | | | |


ಬಿಜೆಪಿಗೆ ಪುತ್ತಿಲ ಪರಿವಾರದ ಬಲ - ಸಕ್ಸಸ್ ಆಯ್ತು ಸಂಧಾನ ಸೂತ್ರ

Posted by Vidyamaana on 2024-02-08 20:03:34 |

Share: | | | | |


ಬಿಜೆಪಿಗೆ ಪುತ್ತಿಲ ಪರಿವಾರದ ಬಲ - ಸಕ್ಸಸ್ ಆಯ್ತು ಸಂಧಾನ ಸೂತ್ರ

ಪುತ್ತೂರು : ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ ಸುಖ್ಯಾಂತಗೊಳ್ಳುವತ್ತ ಸಾಗಿದೆ . ರಾಜ್ಯ ಹೈಕಮಾಂಡ್ ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ನಿರ್ಧರಿಸಿದೆ ಹಾಗೂ ಈ ಕುರಿತ ಮಾಹಿತಿಯನ್ನು ಅರುಣ್ ಪುತ್ತಿಲರವರಿಗೆ ರವಾನಿಸಿದೆ ಎಂಬ ಸ್ಪೋಟಕ ಮಾಹಿತಿ ಲಭಿಸಿದೆ.


ರಾಜ್ಯ ಬಿಜೆಪಿಯ ವರಿಷ್ಠರಾದ ಬಿ ಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ , ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಈ ಕುರಿತು ಅರುಣ್ ಪುತ್ತಿಲ ಜತೆ ಮಾತನಾಡಿದ್ದು ಪಕ್ಷದಲ್ಲಿ ಗೌರವಯುತ ಸ್ಥಾನ ನೀಡುವುದಾಗಿ ತಿಳಿಸಿದ್ದಾರೆ. ಪಕ್ಷದ ಹಿರಿಯರ ಮಾತಿಗೆ ಅರುಣ್ ಪುತ್ತಿಲ ಸಮ್ಮತಿ ಸೂಚಿಸಿರುವುದಾಗಿ ಪುತ್ತಿಲ ಪರಿವಾರದ ಉನ್ನತ ಮೂಲಗಳು ಖಚಿತ ಪಡಿಸಿವೆ.


ಈ ಕುರಿತು ದೂರವಾಣಿ ಮೂಲಕ ವರದಿಗಾರರ ಜತೆ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತರವರು “ ಪುತ್ತಿಲ ಪರಿವಾರ ಹಾಗೂ ಬಿಜೆಪಿಗೆ ಸೇರಿದ ಎಲ್ಲರಿಗೂ ಇಂದಿನ ಬೆಳವಣಿಗೆ ಖುಷಿ ಸಂದಿದೆ. ನಾವು ಹಿಂದೆಯೂ ಬಿಜೆಪಿಯೇ ಆಗಿ ಇದ್ದೇವು . ಮುಂದಿನ ಕೆಲ ದಿನಗಳಲ್ಲಿ ನಾವು ಇನ್ನಷ್ಟು ಸಕ್ರಿಯವಾಗಿ ಬಿಜೆಪಿ ಜತೆ ಗುರುತಿಸಿಕೊಂಡು ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುವ ವಾತವಾರಣ ನಿರ್ಮಾಣವಾಗಲಿದೆ. . ಸದ್ಯದಲ್ಲೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಅರುಣ್ ಪುತ್ತಿಲ ಬೇಟಿಯಾಗಲಿದ್ದಾರೆ.


ಪಕ್ಷ ಸೇರ್ಪಡೆ ಯಾವಗ ಎಂಬ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು “ ನಾವು ಬಿಜೆಪಿಯೇ … ಹಾಗಾಗಿ ನಾವು ಮತ್ತೆ ಸೇರ್ಪಡೆಯಾಗುವ ಅಗತ್ಯವಿಲ್ಲ . ಪುತ್ತಿಲ ಪರಿವಾರವನ್ನು ವಿಲೀನಗೊಳಿಸುವುದಷ್ಟೆ ಬಾಕಿ ಇರುವುದು” ಎಂದರು. ಮುಂದುವರಿದು “ ಇಂತಹದೊಂದು ಸುಸಂದರ್ಭ ಕೂಡಿ ಬರಲು ಕಾರಣರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ , ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ


ಈ ಕುರಿತ ಮಾಹಿತಿಯನ್ನು ಜಿಲ್ಲಾಧ್ಯಕ್ಷರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕಲ್ಲೇಗ: ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ - ಸನ್ಮಾನ

Posted by Vidyamaana on 2023-09-17 09:38:31 |

Share: | | | | |


ಕಲ್ಲೇಗ: ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ   ವತಿಯಿಂದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ - ಸನ್ಮಾನ

ಕಲ್ಲೇಗ: ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ   ವತಿಯಿಂದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ವು ಸೆ 09 ರಂದು  ಮಾಡತ್ತಾರು ಶ್ರೀ ಪುಣ್ಯಕುಮಾರ ದೈವಸ್ಥಾನದ ವಠಾರದಲ್ಲಿ ನಡೆಯಿತು. ಶ್ರೀ ತಿಮ್ಮಪ್ಪ ಗೌಡ ಪೋಳ್ಯ ಇವರು ದೀಪ ಬೇಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಪುಟಾಣಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜೀವಂಧರ್ ಜೈನ್ ಕಲ್ಲೇಗ, ರಘುರಾಜ ಉಬರಡ್ಕ, ಹೇಮಚಂದ್ರ ಮುರ, ಉಮೇಶ್ ಆಚಾರ್ಯ ಕಲ್ಲೇಗ, ಎಲ್ ಅನಂತಪ್ರಸಾದ್ ಮಾಡತ್ತಾರು, ಅಣ್ಣು ಪಲ್ಲತ್ತಾರು, ನಾರಾಯಣ ಗೌಡ ಕಲ್ಲೇಗ, ಜಿನ್ನಪ್ಪ ಪೂಜಾರಿ ಮುರ, ಜಿನ್ನಪ್ಪ ಗೌಡ ಕಲ್ಲೇಗ, ದಿನೇಶ್ ಮುರ, ಸುಧೀರ್ ನಾಕ್ ಆನಾಜೆ, ವಸಂತಿ ಗಣೇಶ್ ನಂದನ, ಧರ್ಮಪಾಲ ಗೌಡ,  ರವೀಂದ್ರ ಪದ್ನಡ್ಕ, ಪುರುಷೋತ್ತಮ ಗೌಡ ಪೋಳ್ಯ ಸಹಿತ ಹಲವಾರು ಗಣ್ಯರು ಉಪಸ್ಥಿತರಿದ್ದರು. ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಎಲ್ಲಾ ಸದಸ್ಯರು ವಿವಿಧ ಆಟೋಟ ಸ್ಪರ್ಧೆಗಳಿಗೆ ಸಹಕರಿಸಿದರು ಜೀವನ್ ಗೌಡ ಶೇವಿರೆ ವಂದಿಸಿದರು. ರೂಪೇಶ್ ಶೇವಿರೆ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ:-

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸ್ಥಳೀಯ ಪ್ರತಿಭೆಗಳಾದ ಶಶಾಂಕ್ ಎನ್ ಶೇವಿರೆ ಹಾಗೂ ಮನ್ವಿತ್ ಬಿ ಗೌಡ ಶೇವಿರೆ ಇವರನ್ನು ಶ್ರೀ ಪುಣ್ಯ ಕುಮಾರ ಯುವಕ ವೃಂದ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಾಡತ್ತಾರು ವತಿಯಿಂದ ಸನ್ಮಾನಿಸಲಾಯಿತು.

ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

Posted by Vidyamaana on 2023-09-12 04:47:25 |

Share: | | | | |


ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

ಪುತ್ತೂರು: 110/33/11ಕೆವಿ ಮಾಡಾವು ವಿದ್ಯುತ್‌ ಉಪಕೇಂದ್ರದಲ್ಲಿ 110ಕೆ.ವಿ ಮತ್ತು 33 ಕೆ.ವಿ ಲೈನ್ ಬೇ ಯ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.12ರಂದು ಮಂಗಳವಾರ ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 336.0 ಮಾಡಾವು–ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ ಗುತ್ತಿಗಾರು, 33ಕೆವಿ ಮಾಡಾವು-ಕಾವು-ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಮಾಡಾವು ಹಾಗೂ 33/11ಕಪ್ ಸುಳ್ಯ, ಕಾವು, ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್‌ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಟ್ಯಾರ್ SDPI ಬೂತ್ ಸಮಿತಿ ವತಿಯಿಂದ - ಪಕ್ಷದ ಸಂಸ್ಥಾಪನಾ ದಿನಾಚರಣೆ

Posted by Vidyamaana on 2024-06-21 16:09:00 |

Share: | | | | |


ಸಂಟ್ಯಾರ್ SDPI ಬೂತ್ ಸಮಿತಿ ವತಿಯಿಂದ - ಪಕ್ಷದ ಸಂಸ್ಥಾಪನಾ ದಿನಾಚರಣೆ

ಪುತ್ತೂರು: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂನ್ 21 2024 ರಂದು ಧ್ವಜಾರೋಹಣ ಕಾರ್ಯಕ್ರಮವು SDPI ಸಂಟ್ಯಾರ್ ಬೂತ್ ಸಮಿತಿ ವತಿಯಿಂದ ಸಂಟ್ಯಾರಿನಲ್ಲಿ ನಡೆಯಿತು.

ಧ್ವಜಾರೋಹಣ ವನ್ನು SDPI ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಕೆ ಎ ರವರು ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಸಂಟ್ಯಾರ್ ಬೂತ್ ಸಮಿತಿ ಅಧ್ಯಕ್ಷರಾದ ಮಸೂದ್ ಸಂಟ್ಯಾರ್ ವಹಿಸಿದರು.

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜ‌ರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ

Posted by Vidyamaana on 2024-06-15 08:51:29 |

Share: | | | | |


BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜ‌ರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣಾ ನೀತಿ ಸಂಹಿತೆ ತೆರವಿನ ಕೆಲ ದಿನಗಳ ನಂತ್ರ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿ ಹಾಗೂ ಓರ್ವ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.


ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ.ಕೆ., ಐಎಎಸ್ (ಕೆಎನ್: 1995) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದೆ.

ಇನ್ನೂ ಹರ್ಷ ಗುಪ್ತಾ, ಐಎಎಸ್ (ಕೆಎನ್: 1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಗದಗ: ನಗರ ಸಭಾ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Posted by Vidyamaana on 2024-04-19 11:36:09 |

Share: | | | | |


ಗದಗ: ನಗರ ಸಭಾ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಗದಗ: ಬೆಳ್ಳಂಬೆಳಿಗೆ ಬೆಚ್ಚಿಬೀಳಿಸುವ ಸುದ್ದಿ ಹೊರಬಿದ್ದಿದ್ದು, ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಲಗಿದಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಆಘಾತಕಾರಿ ಘಟನೆ ಗದಗದ ನಗರದ ದಾಸರ ಓಣಿಯಲ್ಲಿ ನಡೆದಿದೆ.

ನಗರ ಸಭೆಯ ಉಪಾಧ್ಯಕ್ಷೆ ಸುನಂದಾ ಬಾಕಳೆಯವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪರಶುರಾಮ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು.

Recent News


Leave a Comment: