ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ: ಐರಾವತ- ರಾಜಹಂಸ ಮುಖಾಮುಖಿ ಡಿಕ್ಕಿ; ಹಳ್ಳಕ್ಕೆ ಬಿದ್ದ ಟೆಂಪೋ

ಸುದ್ದಿಗಳು News

Posted by vidyamaana on 2024-06-29 14:22:27 |

Share: | | | | |


ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ: ಐರಾವತ- ರಾಜಹಂಸ ಮುಖಾಮುಖಿ ಡಿಕ್ಕಿ; ಹಳ್ಳಕ್ಕೆ ಬಿದ್ದ ಟೆಂಪೋ

ಪುತ್ತೂರು: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸನ್ನು ಗೂಡ್ಸ್ ಹೊತ್ತ ಟೆಂಪೋ ಓಬರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ರಾಜಹಂಸಕ್ಕೆ ಡಿಕ್ಕಿ‌ ಹೊಡೆದು, ಹಳ್ಳಕ್ಕೆ ಬಿತ್ತು.

ಇನ್ನೊಂದೆಡೆ ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾದವು.

ಸ್ಥಳದಲ್ಲಿ ಟ್ರಾಫಿಕ್ ದಟ್ಟಣೆಯಾಗಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

 Share: | | | | |


ಹತ್ಯೆಗೀಡಾದ ದೀಪಕ್- ಫಾಝಿಲ್ ಸೇರಿ 6 ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ:ಸಿಎಂ

Posted by Vidyamaana on 2023-06-19 08:46:24 |

Share: | | | | |


ಹತ್ಯೆಗೀಡಾದ ದೀಪಕ್- ಫಾಝಿಲ್ ಸೇರಿ 6 ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ:ಸಿಎಂ

ಬೆಂಗಳೂರು, ಜೂನ್ 19: ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.


ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಹತ್ಯೆಗೀಡಾದ ಮಸೂದ್, ಮಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ ಹಾಗೂ ದೀಪಕ್ ರಾವ್, ಮಂಡ್ಯದ ಇದ್ರೀಸ್ ಪಾಶಾ, ನರಗುಂದದ ಶಮೀರ್ ಕುಟುಂಬದವರಿಗೆ 25 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.


ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್  ಕುಮಾರ್ ರೈ ಸಚಿವರಾದ ಚೆಲುವರಾಯಸ್ವಾಮಿ, ಝಮೀರ್ ಅಹಮದ್ ಖಾನ್, ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

Posted by Vidyamaana on 2023-05-10 06:10:12 |

Share: | | | | |


ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

ಪುತ್ತೂರು : ರಾಜ್ಯಾದ್ಯಂತ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರವರು ಮತ ಚಲಾಯಿಸಿದರು.ಕುಂತೂರಿನಲ್ಲಿರುವ ಮತದಾನ ಕೇಂದ್ರದಲ್ಲಿ ಅವರು ಮತ ಚಲಾಯಿಸಿದರು

ಫೆ. 17 ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ: ಪೂರ್ವಭಾವಿ ಸಭೆ

Posted by Vidyamaana on 2024-02-11 22:27:36 |

Share: | | | | |


ಫೆ. 17 ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ: ಪೂರ್ವಭಾವಿ ಸಭೆ

ಪುತ್ತೂರು:ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನತೆ ನೆಮ್ಮದಿಯಿಂದ ಇದ್ದಾರೆ. ಸರಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತೀ ಮನೆಯನ್ನು ಬೆಳಗಿಸಿದೆ ಮತ್ತು ಪ್ರತೀ ಕುಟುಂಬಕ್ಕೂ ತಲುಪಿದೆ. ಶಕ್ತಿ ಯೋಜನೆಯಿಂದ ಕಾಂಗ್ರೆಸ್ ಎಲ್ಲರಿಗೂ ಶಕ್ತಿ ನೀಡಿದ್ದು ನಾವೆಲ್ಲರೂ ಸೇರಿ ಕಾಂಗ್ರೆಸ್‌ಗೆ ಶಕ್ತಿ ನೀಡುವ ಕೆಲಸವನ್ನು ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರಐ ಮನವಿ ಮಾಡಿದರು.


ಅವರು ಉದಯಗಿರಿ ಭಾಗೀರಥಿ ಸಭಾಭವನದಲ್ಲಿ ಫೆ. ೧೭ ರಂದು ಮಂಗಳೂರಿನ ಸಹ್ಯಾಧ್ರಿ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬೃಹತ್ ಕಾಂಗ್ರೆಸ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದ ಬಳಿಕ ಇಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ನಡೆಯುತ್ತಿದೆ. ಕೆಎಂಎಫ್, ಮೆಡಿಕಲ್ ಕಾಲೇಜು, ಪುತ್ತೂರು ನಗರಕ್ಕೆ ಚರಂಡಿ ಯಓಜನೆ, ಬಹುಗ್ರಾಮಕುಡಿಯುವ ನೀರಿನ ಯೋಜನೆಗೆ ೧೦೧೦ ಕೋಟಿ ರಊ ಮಂಜೂರು, ಬಿರುಮಲೆ ಬೆಟ್ಟದ ಅಭಿವೃದ್ದಿಗೆ ೨ ಕೋಟಿ ಮಂಜೂರಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಉಪ್ಪಿನಂಘಡಿ ಸಹಸ್ರಲಿಂಗೇಶ್ವ ದೇವಸ್ಥಾನದ ಅಭಿವೃದ್ದಿಗೆ ಅನುದಾನ, ಸೇರಿದಂತೆ ಬೃಹತ್ ಅನುದಾನದ ಯೋಜನೆಗಳು ಮಂಜೂರಾಗಿದೆ. ಅಡಿಕೆ ಬೆಳೆಗಾರರಿಗೆ ವಿಮೆ ಮಂಜೂರು ಸೇರಿದಂತೆ ಅನೇಕ ಯೋಜನೆಗಳು ಮುಂದೆ ನಡೆಯಲಿದ್ದು ಪುತ್ತೂರು ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿಯಗಲಿದೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅನುದಾನದ ಹೊಳೇಯೇ ಹರಿದು ಬರುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಎಲ್ಲರ ಖಾತೆಗೂ ಹಣ ಜಮೆಯಾಗುತ್ತಿದೆ ಇದೆಲ್ಲವನ್ನೂ ಕೊಟ್ಟದ್ದು ಕಾಂಗ್ರೆಸ್ ಸರಕಾರವಾಗಿದೆ. ಜನರಿಗೆ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದ್ದು ಫೆ. ೧೭ ರಂದು ನಡೆಯುವ ರಾಜ್ಯಮಟ್ಟದ ಸಮಾವೇಶದಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಶ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಜನತೆ ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕೆಲಸ ಮಡಿದರೆ ಸರಕರ ಕೂಡಾ ಜನತೆಗೆ ಶಕ್ತಿ ನೀಡುವ ಕೆಲಸವನ್ನು ಖಂಡಿತವಾಗಿಯೂ ಮಾಡುತ್ತದೆ ಎಂದು ಹೇಳಿದರು.


 


ವಲಯ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ


ವಲಯ ಮತ್ತು ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಬೇಕಿದೆ. ಪ್ರತೀ ವಲಯ ಅಧ್ಯಕ್ಷರುಗಳಿಗೆ ತಲಾ ೨೦ ಲಕ್ಷ ಅನುದಾನವನ್ನು ನೀಡುವ ಕಾರ್ಯಕ್ಕೆ ಚವಾಲನೆ ನೀಡಲಾಗಿದೆ. ಗ್ರಾಮದಲ್ಲಿ ಅತೀ ಅಗತ್ಯವಿರುವ ಕಾಮಗಾರಿಯನ್ನು ಗುರುತಿಸಿ ಅದನ್ನು ಅಭಿವೃದ್ದಿ ಮಾಡುವ ಜವಾಬ್ದಾರಿಯನ್ನು ವಲಯ ಮತ್ತು ಬೂತ್ ಸಮಿತಿಗಳಿಗೆ ನೀಡಲಾಗಿದೆ. ವಲಯ ಮತ್ತು ಬೂತ್ ಅಧ್ಯಕ್ಷರ ಅನಮೋದನೆಯೊಂದಿಗೆ ಪ್ರತೀಯೊಂದು ಕಾಮಗಾರಿಯೂ ನಡೆಯಲಿದ್ದು ವಲಯ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ನಿರಂತರವಾಗಿ ಡನೆಯಬೇಕು ಎಂದು ಹೇಳಿದರು. ಪುತ್ತೂರಿನಲ್ಲಿ ವಿರೋಧ ಪಕ್ಷದವರಿಗೆ ಮಾತನಡಲು ವಿಷಯವೇ ಇಲ್ಲದಂತಾಗಿದೆ. ಹಿಂದೆಗಿಂತ ಹೆಚ್ಚು ಅಭಿವೃದ್ದಿ ಕೆಲಸಗಳು ನಡೆಯುತ್ತಿರುವುದನ್ನು ಅವರು ಕಾಣುತ್ತಿದ್ದು ಏನೂ ಮಾತನಾಡಲಾಗದ ಸ್ಥಿತಿಯಲ್ಲಿದ್ದಾರೆ ಎಂದು ಶಾಸಕರು ಹೇಳಿದರು.


 


ಕಾರ್ಯಕ್ರಮ ಯಶಶ್ವಿಗೊಳಿಸಿ: ಎಂ ಬಿ ವಿಶ್ವನಾಥ ರೈ


ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ ಫೆ. ೧೭ ರಂದು ನಡೆಯುವ ಕಾಂಗ್ರೆಸ್ ಸಮಾವೇಶವನ್ನು ಯಶಶ್ವಿಗೊಳಿಸುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಇಬ್ಬರು ಶಾಸಕರಿದ್ದರೂ ಹೈಕಮಾಂಡ್  ಮಂಗಳೂರಿನಲ್ಲೇ ಸಮಾವೇಶವನ್ನು ಆಯೋಜನೆ ಮಾಡಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಗತ ವೈಭವವನ್ನು ಮರಳಿತರಲು ಕಾರ್ಯಕತೃ ಶ್ರಮ ಅತೀ ಅಗತ್ಯವಾಗಿದೆ. ಕಾರ್ಯಕ್ರಮಕ್ಕೆ ತೆರಳುವಲ್ಲಿ ಎಲ್ಲಾ ಗ್ರಾಮಗಳಿಂದಲೂ ಬಸ್ ವ್ಯವಸ್ಥೆ ಮಾಡಲಾಗಿದ್ದು ಕಾರ್ಯಕತೃಉ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.


 


ಬಾಕ್ಸ್


೪೦ ಬಸ್ ವ್ಯವಸ್ಥೆ


ಕಾರ್ಯಕ್ರಮಕ್ಕೆ ಒಟ್ಟು ೪೦ ಬಸ್ ವ್ಯವಸ್ಥೆ ಇದ್ದು ಬೈಪಾಸ್ ಬಳಿ ಇರುವ ರೈ ಎಸ್ಟೇಟ್ ಕಚೇರಿಯಿಂದ ಬಸ್ಸು ಹೊರಡಲಿದೆ. ಎಲ್ಲಾ ಗ್ರಾಮಗಳಿಂದ ಬರುವ ಬಸ್ಸುಗಳು ಮತ್ತು ಕಾರ್ಯಕರ್ತರ ಖಾಸಗಿ ವಾಹನಗಳು ಸೇರಿ ಒಟ್ಟಾಗಿ ಪುತ್ತೂರಿನಿಂದ ಹೊರಡಲಿದೆ. ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.


 


ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿಯವರು ಮಾತನಾಡಿ  ರಾಜ್ಯ ಮಟ್ಟದ ಸಮಾವೇಶ ಮಂಗಳೂರಿನಲ್ಲಿನಡೆಯುತ್ತಿರುವುದು ಅಭಿಮಾನದ ವಿಚಾರವಾಗಿದೆ. ಕಾರ್ಯಕ್ರಮಇತಿಹಾಸದಲ್ಲಿ ದಾಖಲೆಯಾಗಬೇಕು. ಪ್ರತೀ ಬೂತ್ ನಿಂದಲೂ ಕಾರ್ಯಕರ್ತರು ತೆರಳಲಿದ್ದು ,ಪುತ್ತೂರಿನಕಾಂಗ್ರೆಸ್ ಶಕ್ತಿ ಯನ್ನು ನಾವು ಪ್ರದರ್ಶಿಸಬೇಕುಎಂದು ಹೇಳಿದರು. ಕಾರ್ಯಕರ್ತರು ಹೆಚ್ಚಿನಸಂಖ್ಯೆಯಲ್ಲಿಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದುಮನವಿ ಮಾಡಿದರು.


 


 


 


ಮನೆ ಮನೆಗೂ ತಿಳಿಸಿ: ಎಂ ಎಸ್ ಮಹಮ್ಮದ್


ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ರವರುಮಾತನಾಡಿ ಮಂಗಳೂರಿನಲ್ಲಿನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಪ್ರತೀ ಮನೆಗೂ ತಿಳಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕು.ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಿ.ಪಕ್ಷದ ಜವಾಬ್ದಾರಿಮತ್ತು ಇತರೆ ಜವಾಬ್ದಾರಿ ಹೊತ್ತುಕೊಂಡ ಕಾರ್ಯಕರ್ತರು ಪಕ್ಷಕ್ಕಾಗಿ ಹೆಚ್ಚು ಕೆಲಸಮಾಡುವ ಮೂಲಕ ಪಕ್ಷದ ಋಣ ತೀರಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.


ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಕಾರ್ಯವೈಖರಿ ಬಗ್ಹೆ ಸಿದ್ದರಾಮಯ್ಯ ಅವರಿಗೂ ತೃಪ್ತಿ ಇದೆ.ದಿನ ೧೮ ಗಂಟೆ ಕಾರ್ಯಕರ್ತರಿಗಾಗಿ ಮೀಸಲಿಡುವ ರಾಜ್ಯದ ಏಕೈಕ ಶಾಸಕರಾಗಿದ್ದಾರೆ. ಕ್ಷೇತ್ರದ ಜನತೆಗಾಗಿ, ಕ್ಷೇತ್ರದ ಅಭಿವೃದ್ದಿಗಾಗಿ ವಾರದಲ್ಲಿ ಎರಡು ದಿನ ಬೆಂಗಳೂರಿನವಿಧಾನಸೌಧದಲ್ಲೇ ಠಿಕಾಣಿ ಹೂಡುತ್ತಿದ್ದು ಇಂಥಹ ಶಾಸಕರುನಮಗೆ ದೊರೆತಿರುವುದು ಸೌಭಾಗ್ಯ ಎಂದು ಹೇಳಿದರು.


 


ಶಾಸಕರಿಗೆ ಶಕ್ತಿನೀಡುವ ಕೆಲಸ ಮಾಡಬೇಕಿದೆ: ಕಾವು ಹೇಮನಾಥ ಶೆಟ್ಟಿ


ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಕಾರ್ಯವೈಖರಿ ಇಂದು ಪ್ರತೀಯೊಬ್ಬ ಕಾರ್ಯಕರ್ತರಿಗೂ ಗೊತ್ತಿದೆ. ವಲಯ ಮತ್ತು ಬೂತ್ ಅಧ್ಯಕ್ಷರ ಗಮನಕ್ಕೆ ಬಾರದೆ ಯಾವುದೇ ಕಾಮಗಾರಿಗೆ ಚಾಲನೆ ನೀಡುವುದಿಲ್ಲ ಪುತ್ತೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಕಾರ್ಯಕರ್ತರಿಗೆ ಈ ಗೌರವ ದೊರಕುತ್ತಿದೆ ಇದು ಉತ್ತಮ ಬೆಳವಣಿಗೆಯಾಗಿದೆ. ಚುನಾವಣೆ ಪೂರ್ವದಲ್ಲೂ ಬಡವರ ಪರವಾಗಿ ಕೆಲಸ ಮಾಡುತ್ತಿದ್ದ ಶಾಸಕರು ಶಾಸಕರಾದ ಬಳಿಕವೂ ಬಡವರ ಸೇವೆಯಲ್ಲಿತಮ್ಮನ್ನುತೊಡಗಿಸಿಕೊಂಡಿದ್ದಾರೆ. ಪ್ರತೀಯೊಂದು ಮನೆಗೂ ರಾಜ್ಯದ ಕಾಂಗ್ರೆಸ್ ಸರಕಾರದ ಯೋಜನೆ ತಲುಪಿಧ.ಎಲ್ಲರ ಖಾತೆಗೂ ಗೃಹಲಕ್ಷ್ಮೀ ಯೋಜನೆ ಬಂದಿದೆ, ಕರೆಂಟ್ ಬಿಲ್ ಫ್ರೀಯಾಗಿದೆ ಈ ಎಲ್ಲಾ ಕಾರಣಕ್ಕೆ ಮನೆಯ ಪ್ರತೀಯೊಬ್ಬ ಸದಸ್ಯನೂ ಸಮಾವೇಶದಲ್ಲಿಭಾಗವಹಿಸುವ ಮೂಲಕ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು ಎಂದುಮನವಿ ಮಾಡಿದರು.


ರಾಜ್ಯ ಸರಕಾರಕ್ಕೆ ಶಕ್ತಿತುಂಬುವ ಕೆಲಸ ಮಾಡಿದರೆ ಗ್ಯಾರಂಟಿ ಯೋಜನೆಗೆ ಬೆಂಬಲ ನೀಡಿದಂತಾಗುತ್ತದೆ.


ಪುತ್ತೂರಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿದೆ. ಕುಡಿಯುವ ನೀರಿಗಾಗಿ ೧೦೧೦ ಕೋಟಿ ಕೆಎಂಎಫ್ , ಮೆಡಿಕಲ್ ಕಾಲೇಜು, ಮಾಣಿ ಸಂಪಾಜೆ ಚತುಷ್ಪಥ ರಸ್ತೆ ಇದೆಲ್ಲವೂ ಪುತ್ತೂರು ಶಾಸಕರ ಸಾಧನೆಯಾಗಿದೆ. ಶಾಸಕರು ಮಾಡುವ ಉತ್ತಮ ಕೆಲಸಕ್ಕೆ ನಾವು ಬೆಂಬಲ ನೀಡುವ ಉದ್ದೇಶದಿಂದ ನಾವೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಗತ್ಯತೆ ಇದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು.


ವೇದಿಕೆಯಲ್ಲಿ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂಡಿಸೋಜಾ, ಕೆಪಿಸಿಸಿ ಸದಸ್ಯರಾದ ಪ್ರಸಾದ್ ಕೌಶಲ್ ಶೆಟ್ಟಿ ಮತ್ತು ಯಂಗ್ ಬ್ರಿಗೇಡ್ ರಾಜ್ಯಾಧ್ಯಕ್ಷ ಜುನೈದ್ ಉಪಸ್ಥಿತರಿದ್ದರು.ಕೆಪಿಸಿಸಿ ವಕ್ತಾರರಾದ ಅಮಲರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.

ಲೋಕಸಭಾ ಚುನಾವಣೆ ಹಿನ್ನಲೆ : ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

Posted by Vidyamaana on 2024-03-23 16:48:08 |

Share: | | | | |


ಲೋಕಸಭಾ ಚುನಾವಣೆ ಹಿನ್ನಲೆ : ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

ಪುತ್ತೂರು :ಲೋಕಸಭಾ ಚುನಾವಣೆ-2024ರ (Lok Sabha Election-2024) ಅಂಗವಾಗಿ ಮತದಾರರಲ್ಲಿ (Voters) ಯಾವುದೇ ಭಯಬೇಡ ನಿಮ್ಮ ಜತೆ ನಾವಿದ್ದೇವೆ, ಮುಕ್ತವಾಗಿ ಪ್ರಜಾಪ್ರಭುತ್ವದ ತಮ್ಮ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಿ ಎನ್ನುವ ಮುಂಜಾಗ್ರತೆಗಾಗಿ ಪುತ್ತೂರು ನಗರ ಹಾಗೂ ಗ್ರಾಮಾಂತರ  ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಪೊಲೀಸ್‌ ಇಲಾಖೆ ವತಿಯಿಂದ ಪಥಸಂಚಲನ  ನಡೆಸಲಾಯಿತು.


ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಅರುಣ್ ನಾಗೇ ಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾ ಪಡೆ ಜತೆ ಪೊಲೀಸ್ ಸಿಬ್ಬಂದಿಗಳು ನಗರ ಸೇರಿದಂತೆ ತಾಲೂಕಿನ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು.ದರ್ಬೆ ವೃತ ದಿಂದ ಪ್ರಾರಂಭವಾದ ಪಥಸಂಚಲನವು ನಗರದ ವಿವಿಧ ಕಡೆ ಸಂಚರಿಸಿ, ಲೋಕಸಭಾ ಚುನಾವಣೆ ಅಂಗವಾಗಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸುವ ಕುರಿತು ಜಾಗೃತಿ ಮೂಡಿಸಲಾಯಿತು,

ಸೆ 17 :ಇಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ

Posted by Vidyamaana on 2023-09-17 04:52:32 |

Share: | | | | |


ಸೆ 17 :ಇಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ.17ರಂದು ಕದಿರು ವಿನಿಯೋಗ (ಹೊಸತನೆ) ವಿತರಣೆ ನಡೆಯಲಿದೆ. ಬೆಳಿಗ್ಗೆ ದೇವಳದ ಪುಷ್ಕರಣಿಯ ಕಟ್ಟೆಯಿಂದ ಹೊಸತೆನೆಗೆ ಪೂಜೆ ಮಾಡುವ ಮೂಲಕ ದೇವಳದ ಒಳಾಂಗಣಕ್ಕೆ ತರಲಾಗುವುದು.ಬಳಿಕ ಸಂಪ್ರದಾಯದಂತೆ ದೇವಳದಲ್ಲಿ ಪೂಜೆ ನಡೆಯಲಿದೆ. ದೇವಳದ ಹೊರಾಂಗಣದಲ್ಲಿ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ.

ಸೌಜನ್ಯ ಸಮಾಧಿಗೆ ನಮಿಸಿ ತಾಯಿಗೆ ಆಮಂತ್ರಣ

Posted by Vidyamaana on 2023-08-11 11:51:00 |

Share: | | | | |


ಸೌಜನ್ಯ ಸಮಾಧಿಗೆ ನಮಿಸಿ ತಾಯಿಗೆ ಆಮಂತ್ರಣ

ಪುತ್ತೂರು: ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರ ಹೆಸರಿನಲ್ಲಿ ಹುಟ್ಟಿಕೊಂಡ ಪುತ್ತಿಲ‌ ಪರಿವಾರ ಇದೀಗ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ದಿಶೆಯಲ್ಲೂ ಹೋರಾಟ ಹಮ್ಮಿಕೊಂಡಿದೆ.

ಹಿಂದೂ ಪರವಾದ ಹಲವು ಹೋರಾಟಗಳನ್ನು ಹಮ್ಮಿಕೊಂಡು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸಿ ಸೈ ಎನಿಸಿಕೊಂಡಿರುವುದು ಪುತ್ತಿಲ ಬಳಗದ ಹೆಚ್ಚುಗಾರಿಕೆ. ಚುನಾವಣೆ ಬಳಿಕ ಪುತ್ತಿಲ ಪರಿವಾರ ಸಂಘಟನೆ‌ ಅಸ್ತಿತ್ವಕ್ಕೆ ಬಂದಿದ್ದು, ಅದರ ಮೂಲಕ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು‌ ಹಮ್ಮಿಕೊಳ್ಳಲಾಗುತ್ತಿದೆ. ಇದೀಗ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಪುತ್ತೂರಿನಲ್ಲಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪಾದಯಾತ್ರೆ ಹಾಗೂ ರಸ್ತೆ ತಡೆ ಆಯೋಜಿಸಲಾಗಿದೆ. ಈ ಹೋರಾಟಕ್ಕೆ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಪುತ್ತಿಲ ಪರಿವಾರದ ವತಿಯಿಂದ ಆಹ್ವಾನಿಸಲಾಗಿದೆ.

ಸೌಜನ್ಯ ಸಮಾಧಿ ಬಳಿ ಪ್ರಾರ್ಥನೆ ಸಲ್ಲಿಸಿ, ತಾಯಿಗೆ ಮೊದಲ ಆಮಂತ್ರಣ ನೀಡಲಾಯಿತು.

ತಾಯಿ ಕುಸುಮಾವತಿ ಅವರ ಬಳಿ ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. 2013ರಲ್ಲೂ ಅರುಣ್ ಕುಮಾರ್ ಪುತ್ತಿಲರು ಹೋರಾಟ ನಡೆಸಿದ್ದಾರೆ. ಈಗ ಮರುತನಿಖೆಗೆ ಆಗ್ರಹಿಸಿ ಪುತ್ತೂರಿನಲ್ಲಿ ಹೋರಾಟ ನಡೆಸಲಿದ್ದೇವೆ. ಈ ಹೋರಾಟದ ಮೊದಲ ಆಮಂತ್ರಣ ನಿಮಗೆ ನೀಡಿ ಆಮಂತ್ರಿಸುತ್ತಿದ್ದೇವೆ ಎಂದರು.

ಈ ಸಂದರ್ಭ ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ಮನೀಶ್, ಶನ್ಮಿತ್ ರೈ, ಶರತ್ ಎನ್.ಎಸ್. ವಿಟ್ಲ ಮೊದಲಾದವರು ಹಾಜರಿದ್ದರು.


ಆ.14ರಂದು ಬೆಳಿಗ್ಗೆ 9.30ರಿಂದ ದರ್ಬೆಯಿಂದ ಬಸ್ ನಿಲ್ದಾಣದವರೆಗೆ ಜಾಥಾ ಹಾಗೂ ರಸ್ತೆ ತಡೆ ನಡೆಯಲಿದೆ.


10 ಗಂಟೆಯಿಂದ 11 ಗಂಟೆಯವರೆಗೆ ಪುತ್ತೂರಿನ ಅಂಗಡಿ ಮಾಲೀಕರು 1 ಗಂಟೆ ಸ್ವಯಂಪ್ರೇರಿತ ಬಂದ್ ನಡೆಸಿ ಸೌಜನ್ಯಾ ಪ್ರಕರಣದ ನ್ಯಾಯಕ್ಕಾಗಿ ನಡೆಯುವ ಹೋರಾಟದಲ್ಲಿ ಭಾಗವಹಿಸುವಂತೆ ಕೇಳಿಕೊಳ್ಳಲಾಗಿದೆ.



Leave a Comment: