ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಸುದ್ದಿಗಳು News

Posted by vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಸೋಮವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ. ತಕ್ಷಣವೇ ಸಮೀಪದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 Share: | | | | |


ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ

Posted by Vidyamaana on 2023-11-16 21:14:49 |

Share: | | | | |


ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ.


ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ ವೇಳೆ ಹಾವು ಕಚ್ಚಿದೆ ಎನ್ನಲಾಗಿದೆ.


ತಕ್ಷಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಅವರು ಯಾವುದೇ ತೊಂದರೆಯಿಲ್ಲದೆ., ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

Posted by Vidyamaana on 2023-11-21 21:02:55 |

Share: | | | | |


ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವಂದಿತಾ ಶರ್ಮಾ ಅವರ ಅವಧಿ ನ.30ಕ್ಕೆ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 1986ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದೆ.ದಿನಾಂಕ 30-11-2023ರಂದು ಸಿಎಸ್ ವಂದಿತಾ ಶರ್ಮಾ ಅವರು ನಿವೃತ್ತರಾಗಲಿದ್ದಾರೆ. ಅವರ ಸ್ಥಾನಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಬನ್ನೂರು:ಧರೆಕುಸಿತಕ್ಕೊಳಗಾದ ಪ್ರದೇಶಕ್ಕೆ ಶಾಸಕರ ಭೇಟಿ

Posted by Vidyamaana on 2024-06-29 20:41:23 |

Share: | | | | |


ಬನ್ನೂರು:ಧರೆಕುಸಿತಕ್ಕೊಳಗಾದ ಪ್ರದೇಶಕ್ಕೆ ಶಾಸಕರ ಭೇಟಿ

ಪುತ್ತೂರು;ಧರೆ ಕುಸಿದು ಮನೆಗೆ ಹಾನಿಯದ ಬನ್ನೂರು ಜೈನರ ಗುರಿಗೆ ಶಾಸಕರಾದ ಅಶೋಕ್ ರ‍್ಯಯವರು ಸನಿವಾರ ಭೇಟಿ ನೀಡಿ ಕುಟುಂಬದ ಜೊತೆ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಮನೆ ಮಾಲಿಕ ಅಬ್ದುಲ್ ಮಜೀದ್‌ರವರು ನಡೆದ ಘಟನೆಯ ಬಗ್ಗೆ ಶಾಸಕರಲ್ಲಿ ವಿವರಿಸಿದರು. ಮನೆಯ ಗೋಡೆಗೆ ಧರೆ ಜರಿದು ಬಿದ್ದು ಮಕ್ಕಳು ಮಣ್ಣಿನಡಿಯಲ್ಲಿ ಬಿದ್ದರೂ ಪವಾಡ ಸದೃಶಪಾರಾಗಿದ್ದು ಮನೆ ಗೋಡೆ ಮತ್ತು ಮಾಡು ಸಂಪೂರ್ಣ ಜಖಂಗೊಂಡಿದೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ಶಾಸಕರಲ್ಲಿ ತಿಳಿಸಿದರು.

ಉಡುಪಿ ವಿಶಾಲ ಗಾಣಿಗ ಕೊಲೆ ಕೇಸ್

Posted by Vidyamaana on 2024-02-03 17:52:10 |

Share: | | | | |


ಉಡುಪಿ ವಿಶಾಲ ಗಾಣಿಗ ಕೊಲೆ ಕೇಸ್

ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.


ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.

2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.




ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್ 


ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್‌ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ ಸಂಸದ ಗೌತಮ್ ಗಂಭೀರ್

Posted by Vidyamaana on 2024-03-02 12:19:17 |

Share: | | | | |


ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ ಸಂಸದ ಗೌತಮ್ ಗಂಭೀರ್

ನವದೆಹಲಿ:ಅಚ್ಚರಿಯ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.ಪೂರ್ವ ದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರೊಂದಿಗೆ ಸುದ್ದಿಯನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದಾರೆ.


ಅವರು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಉತ್ಸಾಹದಿಂದ ಆಡಿದ ಕ್ರೀಡೆಯತ್ತ ತಮ್ಮ ಗಮನವನ್ನು ಮರುನಿರ್ದೇಶಿಸುವ ಅಗತ್ಯವನ್ನು ಉಲ್ಲೇಖಿಸಿ ಅವರು ತಮ್ಮ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುವ ಬಯಕೆಯನ್ನು ವ್ಯಕ್ತಪಡಿಸಿದರು.



"ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ, ಇದರಿಂದ ನಾನು ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುತ್ತೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಜೈ. ಹಿಂದ್,"ಎಂದು ಗಂಭೀರ್ ಬರೆದಿದ್ದಾರೆ.


ಗಂಭೀರ್, ಮಾರ್ಚ್ 2019 ರಲ್ಲಿ ಬಿಜೆಪಿಗೆ ಸೇರಿದ್ದರು ಮತ್ತು ಅಂದಿನಿಂದ ದೆಹಲಿಯಲ್ಲಿ ಪಕ್ಷದ ಪ್ರಮುಖರಾಗಿದ್ದಾರೆ. ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಪೂರ್ವ ದೆಹಲಿ ಸ್ಥಾನಕ್ಕೆ ಸ್ಪರ್ಧಿಸಿ 6,95,109 ಮತಗಳ ಗಣನೀಯ ಅಂತರದಿಂದ ಗೆದ್ದರು.


ಮುಂಬರುವ 2024 ರ ಚುನಾವಣೆಗೆ ಗಂಭೀರ್‌ಗೆ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳ ನಡುವೆ ರಾಜಕೀಯ ತ್ಯಜಿಸುವ ನಿರ್ಧಾರ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜನರ ವಿರೋಧ ಇದ್ದರೂ ಎತ್ತಿನಹೊಳೆ ಯೋಜನೆ ನೀಡಿದ್ದೆ

Posted by Vidyamaana on 2023-10-04 11:58:59 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯ ಜನರ ವಿರೋಧ ಇದ್ದರೂ ಎತ್ತಿನಹೊಳೆ ಯೋಜನೆ ನೀಡಿದ್ದೆ

ಕೋಲಾರ:: ನನ್ನ ಜಿಲ್ಲೆಯ ಜನರ ವಿರೋಧ ಇದ್ದರೂ, ಕೋಲಾರ, ಚಿಕ್ಕಬಳ್ಳಾಪುರ ಜನರಿಗೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತಂದಿದ್ದೆ. 800 ಕೋಟಿ ರೂಪಾಯಿ ಮೊತ್ತದಲ್ಲಿ ಡಿಪಿಆರ್ ತಯಾರಿಸಿ ಯೋಜನೆ ಜಾರಿ ಮಾಡಿದ್ದೆ. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಅದು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸಿದ್ದು ಬಿಟ್ಟರೆ ನೀರು ತರಲು ಮುಂದಾಗಿಲ್ಲ. ಯೋಜನೆ ಹೆಸರಲ್ಲಿ ದುಡ್ಡು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.


ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರನ್ನು ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೊರಕ್ಕೆ ತಳ್ಳಿದ ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸದಾನಂದ ಗೌಡ ತನ್ನ ಸಾಧನೆಯನ್ನು ಹೇಳಿಕೊಂಡಿದ್ದಾರೆ.


ಇವತ್ತು ಕೋಲಾರದ ಜನ ಕುಡಿಯಲು ನೀರಿಲ್ಲದಿದ್ದರೂ ಹನಿ ನೀರಾವರಿ ಮೂಲಕ ಕೃಷಿ ಮಾಡಿ, ಬೆಂಗಳೂರಿನ ಜನರಿಗೆ ತರಕಾರಿ ಪೂರೈಸುತ್ತಿದ್ದಾರೆ. ಇಲ್ಲಿನ ಜನರಿಗೆ ನೀರು ಕೊಡಬೇಕೆಂದು ಎತ್ತಿನಹೊಳೆ ಯೋಜನೆಯನ್ನು ತಯಾರಿಸಿದ್ದು ನಾವು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐದು ವರ್ಷ ಆಡಳಿತ ನಡೆಸಿತಲ್ಲಾ.. ಯಾಕೆ ಇವರಿಗೆ ಆ ಯೋಜನೆ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಯೋಜನೆಯನ್ನು ಜಾರಿಗೆ ತರುತ್ತಿದ್ದರೆ ಕೋಲಾರದ ಕೆರೆಗಳು ತುಂಬುತ್ತಿತ್ತಲ್ಲಾ.. ಇವರು ಆ ಯೋಜನೆಯನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನ ಮಾಡಿದರು. ಜೊತೆ ಜೊತೆಗೆ ಯೋಜನೆ ಹೆಸರಲ್ಲಿ ದುಡ್ಡು ಲೂಟಿ ಹೊಡೆದಿದ್ದಾರೆ. ಕಾಂಗ್ರೆಸಿನವರು ಲೂಟಿಕೋರರು ಎಂದು ಆರೋಪಿಸಿದರು.




ಯೋಜನೆ ನಿರ್ಮಾತೃಗಳು ಡೀವಿ, ಮೊಯ್ಲಿ


2011ರಲ್ಲಿ ಕರಾವಳಿ ಜಿಲ್ಲೆಗಳ ವಿರೋಧದ ನಡುವೆಯೂ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿವಿ ಸದಾನಂದ ಗೌಡ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಗೆ ಅನುಮತಿ ನೀಡಿದ್ದರು. ಆನಂತರ, 2012ರಲ್ಲಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿಯೇ ಶಿಲಾನ್ಯಾಸ ಮಾಡಿ, ಮತ್ತೊಂದು ಎಡವಟ್ಟು ಮಾಡಿದ್ದರು. ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಯೋಜನೆಗೆ ಹಣ ಬಿಡುಗಡೆಗೊಳಿಸಿ, ಅನುಷ್ಠಾನಕ್ಕೆ ಯತ್ನಿಸಿದ್ದರು. ಆದರೆ ಬಹುತೇಕ ಜಲತಜ್ಞರು ಎತ್ತಿನಹೊಳೆ ಯೋಜನೆಯಿಂದ ನೀರು ಸಿಗಲ್ಲ ಎಂದು ಹೇಳಿದರೂ ಸರಕಾರ ಕೇಳಿರಲಿಲ್ಲ. ಯೋಜನೆ ಹೆಸರಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಪಕ್ಷ ಭೇದ ಇಲ್ಲದೆ ಹಣ ಕೊಳ್ಳೆ ಹೊಡೆದಿದ್ದು ಬಿಟ್ಟರೆ ನೀರು ಒಯ್ಯುವ ಕೆಲಸ ಮಾಡಿಲ್ಲ. ಈಗ ಅಂದಿನ ಸಿಎಂ ಸದಾನಂದ ಗೌಡ ಯಾವುದೇ ನಾಚಿಕೆ ಇಲ್ಲದೆ, ತಾನು ಜಾರಿಗೊಳಿಸಿದ್ದ ಯೋಜನೆಯ ಹೆಸರಲ್ಲಿ ಕಾಂಗ್ರೆಸಿಗರು ಲೂಟಿ ಹೊಡೆಯುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ಜನರನ್ನು ಪ್ರತಿ ಬಾರಿ ಮೋಸ ಮಾಡುತ್ತಿದ್ದಾರೆ.



Leave a Comment: