ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

ಸುದ್ದಿಗಳು News

Posted by vidyamaana on 2024-06-29 11:21:28 |

Share: | | | | |


ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

ವಾಷಿಂಗ್ಟನ್: ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಬಚ್‌ ವಿಲ್ಮೋರ್ ಅವರು ಇನ್ನು ಕೆಲ ದಿನಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿಯಲಿದ್ದಾರೆ ಎಂದು ನಾಸಾ ತಿಳಿಸಿದೆ.ಜೂನ್ 5ರಂದು ಸುನಿತಾ ಮತ್ತು ವಿಲ್ಮೋರ್‌ ಅವರಿದ್ದ ಸ್ಟಾರ್‌ಲೈನರ್‌ ನೌಕೆಯನ್ನು ಫ್ಲಾರಿಡಾದ ಕೇಪ್‌ ಕ್ಯಾನವೆರಲ್‌ ಸ್ಪೇಸ್‌ ಫೋರ್ಸ್‌ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು.

ಜೂನ್ 6ರ ಮಧ್ಯಾಹ್ನ 1.34ಕ್ಕೆ ಗಗನನೌಕೆಯನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಡಾಕ್‌ (ಕೂಡಿಕೊಳ್ಳುವ ಪ್ರಕ್ರಿಯೆ) ಮಾಡಲಾಗಿತ್ತು. 

ತಾಂತ್ರಿಕ ದೋಷಕ್ಕೆ ಕಾರಣಗಳೇನು ಎಂಬ ಬಗ್ಗೆ ಪರೀಕ್ಷೆಗಳು ನಡೆಯುತ್ತಿದ್ದು, ಗಗನಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ನಾಸಾ ತಿಳಿಸಿದೆ. ಆದರೆ, ಗಗನಯಾತ್ರಿಗಳು ಯಾವಾಗ ಭೂಮಿಗೆ ಹಿಂದಿರುಗಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

ನಾವು ಭೂಮಿಗೆ ಹಿಂದಿರುಗುವ ಕುರಿತಂತೆ ಆತುರಪಡುತ್ತಿಲ್ಲ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮದ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಹೇಳಿದರು.

ಡಾಕಿಂಗ್ ಮಾಡುವ ವೇಳೆ ಥ್ರಸ್ಟರ್‌ನಲ್ಲಿ(ಪ್ಯೊಪಲ್ಷನ್‌ ಮಾಡ್ಯೂಲ್‌ಗೆ ಅಗತ್ಯ ನೂಕುಬಲ ನೀಡಲು ಅಳವಡಿಸಲಾಗಿರುವ ಯಂತ್ರ) ತೊಂದರೆ ಕಾಣಿಸಿಕೊಂಡಿದೆ. ಅಲ್ಲದೇ ಉಡಾವಣೆ ವೇಳೆ ಹೀಲಿಯಂ ಸೋರಿಕೆಯೂ ಆಗಿದೆ. ಇವೆರಡರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಡಾಕಿಂಗ್ ಸಮಯದಲ್ಲಿ ಸಂಭವಿಸಿದ ಪರಿಸ್ಥಿತಿಯ ಬಗ್ಗೆ ತಿಳಿಯಲು ನ್ಯೂ ಮೆಕ್ಸಿಕೋ ಮರುಭೂಮಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಬಚ್‌ ಮತ್ತು ಸುನಿತಾ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿಲ್ಲ ಎಂದು ಸ್ವಿಚ್ ತಿಳಿಸಿದರು.

 Share: | | | | |


ದೀಪಾವಳಿಗೆ ಮೈಸೂರು – ಮಂಗಳೂರು ನಡುವೆ ಓಡಲಿದೆ ವಿಶೇಷ ರೈಲು

Posted by Vidyamaana on 2023-11-10 07:26:53 |

Share: | | | | |


ದೀಪಾವಳಿಗೆ ಮೈಸೂರು – ಮಂಗಳೂರು ನಡುವೆ ಓಡಲಿದೆ ವಿಶೇಷ ರೈಲು

ಮಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದೆ ಊರಿಗೆ ಬರಲು ಬಸ್ಸು, ರೈಲುಗಳಲ್ಲಿ ಟಿಕೆಟು ಸಿಗುತ್ತಿಲ್ಲ ಎಂದು ಟೆನ್ಷನ್ ಮಾಡುತ್ತಿರುವವರಿಗೆ ರೈಲ್ವೇ ಇಲಾಖೆ ಒಂದು ಗುಡ್ ನ್ಯೂಸ್ ನೀಡಿದೆ. ಹಬ್ಬದ ಪ್ರಯುಕ್ತ ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲೊಂದನ್ನು ಇಲಾಖೆ ಬಿಟ್ಟಿದ್ದು ಅದರ ವೇಳಾಪಟ್ಟಿ ಇಂತಿದೆ.


ಬೆಳಕಿನ ಹಬ್ಬದ ಈ ವಿಶೇಷ ರೈಲು ಓಡಾಟದ ವೇಳಾಪಟ್ಟಿ ಇಂತಿದೆ.

ದಿನಾಂಕ 10/11/2023 ಶುಕ್ರವಾರ ರೈಲು ಸಂಖ್ಯೆ 07303 ಮೈಸೂರು ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು ಮೈಸೂರಿನಿಂದ ರಾತ್ರಿ 8:30ಕ್ಕೆ ಹೊರಟು ರಾತ್ರಿ 11:25ಕ್ಕೆ ಬೆಂಗಳೂರು ತಲುಪಲಿದೆ. ಅಲ್ಲಿಂದ ರಾತ್ರಿ 11:30ಕ್ಕೆ ಹೊರಟು ಮರುದಿನ ಅಂದರೆ ದಿನಾಂಕ 11/11/2023 ಶನಿವಾರದಂದು ಬೆಳಗ್ಗೆ 9:40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.


ದಿನಾಂಕ 14/11/2023 ಬುಧವಾರ ರೈಲು ಸಂಖ್ಯೆ 07304 ಮಂಗಳೂರು ಜಂಕ್ಷನ್-ಮೈಸೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು ಮಂಗಳೂರು ಜಂಕ್ಷನ್ನಿಂದ ಸಂಜೆ 5:15ಕ್ಕೆ ಹೊರಟು ಮರುದಿನ ಬೆಳಗ್ಗೆ 3:45ಕ್ಕೆ ಬೆಂಗಳೂರು ತಲುಪಲಿದೆ. ಅಲ್ಲಿಂದ ಬೆಳಗ್ಗೆ 3:50ಕ್ಕೆ ಹೊರಡುವ ರೈಲು ಬೆಳಗ್ಗೆ 7:30ಕ್ಕೆ ಹುಬ್ಬಳ್ಳಿ ತಲುಪಲಿದೆ. 


ಈ ರೈಲಿಗೆ ಬಂಟ್ವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯರೋಡ್, ಸಕಲೇಶಪುರ, ಹಾಸನ ಜಂಕ್ಷನ್, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಕುಣಿಗಲ್, ನೆಲಮಂಗಲ, ಯಶವಂತಪುರ, ಬೆಂಗಳೂರು, ಕೆಂಗೇರಿ, ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.


ಈ ರೈಲಿನಲ್ಲಿ ಜನರಲ್, ಸ್ಲೀಪರ್ ಕ್ಲಾಸ್, 3 ಟೈರ್ ಎಸಿ, 2 ಟೈರ್ ಎಸಿ ಹಾಗೂ ಪ್ರಥಮ ದರ್ಜೆಯ ಕ್ಯಾಬಿನ್ ಕೋಚ್ಗಳು ಇರಲಿದೆ. ತಮ್ಮ ಕುಟುಂಬ ಸದಸ್ಯರೊಂದಿಗೆ ಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳಲು ಬಯಸುವವರು ಈ ವಿಶೇಷ ರೈಲಿನ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿರುತ್ತದೆ.

ಪುತ್ತೂರು ಮೆಸ್ಕಾಂ ತುರ್ತು ಕಾಮಗಾರಿ ಇಂದು (ಆಗಸ್ಟ್ 01) ವಿದ್ಯುತ್ ನಿಲುಗಡೆ

Posted by Vidyamaana on 2023-08-01 03:54:44 |

Share: | | | | |


ಪುತ್ತೂರು  ಮೆಸ್ಕಾಂ ತುರ್ತು  ಕಾಮಗಾರಿ ಇಂದು (ಆಗಸ್ಟ್ 01) ವಿದ್ಯುತ್ ನಿಲುಗಡೆ

ಪುತ್ತೂರು: 33ಕೆಪಿ ಮಾಡಾವು ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33ಕೆ.ವಿ. ಮಾಡಾವು -ಬೆಳ್ಳಾರೆ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.1ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5ಗಂಟೆಯವರೆಗೆ 33ಕೆವಿ ಮಾಡಾವು- ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33ಕೆವಿ ಮಾಡಾವು -ಬೆಳ್ಳಾರೆ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. 33/11 ಕೆವಿ ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್‌ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮುಕ್ವೆ ನಿವಾಸಿ ಎ.ಕೆ.ಮಮ್ಮುಂಞ ನಿಧನ

Posted by Vidyamaana on 2023-10-23 13:14:43 |

Share: | | | | |


ಮುಕ್ವೆ ನಿವಾಸಿ ಎ.ಕೆ.ಮಮ್ಮುಂಞ ನಿಧನ

ಪುತ್ತೂರು: ಮುಕ್ವೆ ನಿವಾಸಿ ಮುಕ್ವೆ ರಹ್ಮಾನಿಯಾ ಜುಮಾ ಮಸೀದಿಯ ಜಮಾಅತ್ ಸದಸ್ಯಎ.ಕೆ.ಮಮ್ಮುಂಞ (70 ವ.) ಅಲ್ಪಕಾಲದ ಅನಾರೋಗ್ಯದಿಂದ ಅ. 23ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಮುಕ್ವೆ ನಿವಾಸಿ ರೋಯಲ್ ಉಮ್ಮರ್ ಹಾಜಿ ಮತ್ತು M A ಅಬೂಬಕ್ಕರ್ ಹಾಜಿ ಪುರುಷರ ಕಟ್ಟೆ  ಅವರ ಸಹೋದರಿಯ ಗಂಡ.

ಮೃತರು ಪತ್ನಿ, ಮಕ್ಕಳಾದ ನಾಸೀರ್, ಸಲೀಮ್, ಮನ್ಸೂರ್ ಮತ್ತು ರಿಯಾಝ್ ಅವರನ್ನು ಅಗಲಿದ್ದಾರೆ.

ಲೈಂಗಿಕ ಕಿರುಕುಳ ಆರೋಪ : ಚರ್ಚ್ ಪಾದ್ರಿ ವಿರುದ್ಧ ಎಫ್‍ಐಆರ್

Posted by Vidyamaana on 2023-08-24 01:44:18 |

Share: | | | | |


ಲೈಂಗಿಕ ಕಿರುಕುಳ ಆರೋಪ : ಚರ್ಚ್ ಪಾದ್ರಿ ವಿರುದ್ಧ ಎಫ್‍ಐಆರ್

ಬೆಂಗಳೂರು: ಚರ್ಚ್ ಪಾದ್ರಿ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.


ಕಮ್ಮನಹಳ್ಳಿಯ ಸೆಂಟ್ ಪಿಯೂಸ್ ಚರ್ಚ್ ಪಾದ್ರಿ ಜಯಕರನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ.


ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆಂದು ಮಹಿಳೆ ದೂರು ದಾಖಲಿಸಿದ್ದಾರೆ. ಪಾದ್ರಿ ಜಯಕರನ್ ಅನುಯಾಯಿಗಳಿಂದಲೂ ತನಗೆ ಬೆದರಿಕೆ ಕರೆಗಳು ಬರುತ್ತಿದೆ ಎಂದು ಸಂತ್ರಸ್ತ ಮಹಿಳೆ ಆರೋಪ ಮಾಡಿದ್ದಾರೆ. ಘಟನೆ ಬಗ್ಗೆ ಚರ್ಚ್‍ನ ಆಂತರಿಕ ಸಮಿತಿಗೂ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಿಲ್ಲ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.


ಮಹಿಳೆ ವಿರುದ್ಧ ಚರ್ಚ್ ಪಾದ್ರಿ ಕೂಡ ಪ್ರತಿ ದೂರು ದಾಖಲಿಸಿದ್ದು, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಚರ್ಚ್ ಹಣಕಾಸಿನ ವಿಚಾರಕ್ಕೆ ಸುಳ್ಳು ಆರೋಪ ಮಾಡಿದ್ದಾರೆಂದು ಮಹಿಳೆ ಸೇರಿದಂತೆ 9 ಮಂದಿ ವಿರುದ್ಧ ಪಾದ್ರಿ ಜಯಕರನ್ ದೂರು ಸಲ್ಲಿಸಿದ್ದಾರೆ. ತಾನು ಚರ್ಚ್ ಪಾದ್ರಿ ಆಗಿ ಅಧಿಕಾರ ವಹಿಸಿಕೊಳ್ಳದಂತೆ ಕಿರುಕುಳ ನೀಡಿದರು. ಆರೋಪಿಗಳು ಚರ್ಚ್ ಹಣ ದುರುಪಯೋಗ ಮಾಡಿಕೊಂಡಿದ್ದಾರೆ.


ಹಣದ ಲೆಕ್ಕ ಕೇಳಿದ್ದಕ್ಕೆ ಈ ರೀತಿ ಸುಳ್ಳು ಆರೋಪ ಮಾಡಿ ನನ್ನ ವಿರುದ್ಧ ದೂರು ನೀಡಿದ್ದಾರೆಂದು ಪಾದ್ರಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜ್ಯ ಸರ್ಕಾರ ರೈತರನ್ನು ಕಡೆಗಸುತ್ತಿದೆ

Posted by Vidyamaana on 2023-10-11 16:09:52 |

Share: | | | | |


ರಾಜ್ಯ ಸರ್ಕಾರ ರೈತರನ್ನು ಕಡೆಗಸುತ್ತಿದೆ

ಪುತ್ತೂರು : ಕರ್ನಾಟಕದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಅಸ್ತಿತ್ವಕ್ಕೆ ಬಂದು 6 ತಿಂಗಳಾಯಿತು ಕರ್ನಾಟಕದ ಜನತೆ ಬಹುಮತದ ಸರಕಾರ ಚುನಾಯಿಸಿ ಕಳುಹಿಸಿ ಜನಹಿತವನ್ನು ಕಾಪಾಡಬಹುದು ಎಂದು ನಂಬಿದ್ದರು. ಆದರೇ ಕಳೆದ 6 ತಿಂಗಳಿನಿಂದ ದೇಶದ ಬೆನ್ನೆಲುಬು ಎನ್ನುವ ರೈತರನ್ನು ಸಂಪೂರ್ಣ ಕಡೆಗಣಿಸುವ ಕೆಲಸ ಆಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.


ರೈತರಿಗೆ ಪ್ರಣಾಳಿಕೆ ಹಾಗೂ ಸರಕಾರದ ಆದೇಶಗಳು ಮರಿಚಿಕೆಗಳಾಗಿದೆ. ರೈತರಿಗೆ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಹಾಗೂ ಶೇ 3 ರ ಬಡ್ಡಿ ದರದಲ್ಲಿ, 10 ರಿಂದ 15 ಲಕ್ಷಕ್ಕೆ ಏರಿಕೆ ಮಾಡಿರುವ ಆದೇಶ ಬಂದು 2 ತಿಂಗಳು ಕಳೆದರೂ ಜಾರಿಯಾಗಿಲ್ಲ, ಹಾಲು ಉತ್ಪಾದಕರಿಗೆ ಪ್ರತೀ ಲೀಟರ್ ಗೆ 5 ರೂಪಾಯಿಂದ 7 ರೂಪಾಯಿಗೆ ಹೆಚ್ಚಳ., ಜಾನುವಾರು ಖರೀದಿಗೆ 3 ಲಕ್ಷದ ಶೂನ್ಯ ಬಡ್ಡಿದರದ ಸಾಲ, ಮೀನುಗಾರ ಮಹಿಳೆಯರಿಗೆ 3 ಲಕ್ಷ ಬಡ್ಡಿ ರಹಿತ ಸಾಲ ಘೋಷಣೆಯಾಗಿಯೇ ಉಳಿದಿದೆ.



ದ.ಕ ಜಿಲ್ಲೆಯಲ್ಲಿ 1,50,000 ರೈತರಿಗೆ ಕೇಂದ್ರ ಸರಕಾರ 6,000 ಕಿಸಾನ್ ಸಮ್ಮಾನ್ ನಿಧಿ ನೀಡುತ್ತಿದ್ದು, ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರಕಾರ 4,000 ನೀಡುತ್ತಿತ್ತು, ಇದನ್ನು ಈಗಿನ ಸರಕಾರ ನಿಲ್ಲಿಸಿರುತ್ತದೆ. ಬಿಜೆಪಿ ಸರಕಾರ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ದ.ಕ ಜಿಲ್ಲೆಯಲ್ಲಿ ಸುಮಾರು 24,000 ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ರೈತ ವಿದ್ಯಾನಿಧಿ 4,000 ದಿಂದ 11,000 ತನಕ ಈ ಶೈಕ್ಷಣಿಕ ವರ್ಷದಲ್ಲಿ ಯಾವೊಬ್ಬ ರೈತರ ಮಕ್ಕಳಿಗೂ ಪಾವತಿಯಾಗಿಲ್ಲ.


ಕಳೆದ ವರ್ಷ ರೈತರ ನೀರಾವರಿ ಪಂಪ್ ಸೆಡ್‌ಗಳಿಗೆ ನಿರಂತರ ವಿದ್ಯುತ್ ನೀಡುತ್ತಿದ್ದರೆ., ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಸರಕಾರ ದಿನದ 7 ಗಂಟೆ ವಿದ್ಯುತ್ ಕೊಡುತ್ತೇನೆ ಎಂದು ಭರವಸೆ ನೀಡಿ ಹಗಲು 3 ಗಂಟೆ ರಾತ್ರಿ 4 ಗಂಟೆ ಭರವಸೆಯೇ ಹೊರತು ರೈತ ಇಂದು ಕತ್ತಲೆಯಲ್ಲಿದ್ದಾನೆ ಎಂದರು.


ಕಾಂಗ್ರೆಸ್ ಸರಕಾರ ರೈತರಿಗೆ ಚಳ್ಳೆ ಹಣ್ಣು ತಿನ್ನಿಸಿ ರೈತರನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ. ಇವತ್ತು ಕರ್ನಾಟಕದಲ್ಲಿ ರೈತ ವಿರೋಧಿ ಸರಕಾರ ಆಡಳಿತ ಮಾಡುತ್ತಿದ್ದು, ಹಣದುಬ್ಬರ, ಬೆಲೆ ಏರಿಕೆ, ಬರ ಇದರಿಂದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ.


ರೈತರಿಗೆ ಘೋಷಣೆ ಮಾಡಿದ ಭರವಸೆಯನ್ನು ಈಡೇರಿಸದೇ ಹೋದರೆ ಮುಂದಿನ ದಿನಗಳಲ್ಲಿ ರೈತರು ಬೀದಿಗಿಳಿದು ಹೋರಾಡುವ ಅನಿವಾರ್ಯತೆ ಬರಬಹುದು ಎಂದು ರಾಜ್ಯಕ್ಕೆ ಎಚ್ಚರಿಕೆಯನ್ನು ನೀಡಿದರು.


ಪತ್ರಿಕಾಗೋಷ್ಠಿಯಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು, ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಪ್ರಸಾದ್ ಕೆ.ವಿ., ಉಪಸ್ಥಿತರಿದ್ದರು.

ವಿಟ್ಲ: ಹಿಂದೂ ಮುಖಂಡ ಅಕ್ಷಯ್ ಗೆ ಗಡಿಪಾರು ಆದೇಶ - ಕೋಮು ಸೌಹಾರ್ದತೆ ಧಕ್ಕೆ ತಂದ ಆರೋಪ

Posted by Vidyamaana on 2023-10-03 21:31:18 |

Share: | | | | |


ವಿಟ್ಲ: ಹಿಂದೂ ಮುಖಂಡ ಅಕ್ಷಯ್ ಗೆ ಗಡಿಪಾರು ಆದೇಶ - ಕೋಮು ಸೌಹಾರ್ದತೆ ಧಕ್ಕೆ ತಂದ ಆರೋಪ

ವಿಟ್ಲ: ಭಾಗಿಯಾಗಿದ್ದ ಅಕ್ಷಯ್ ರಜಪೂತ್ ಗೆ ಗಡಿಪಾರು ನೋಟಿಸ್ ನೀಡಲಾಗಿದೆ.


ಕಲ್ಲಡ್ಕ ಬಾಳ್ತಿಲ ನಿವಾಸಿ ಅಕ್ಷಯ್ ರಜಪೂತ್ ಹಿಂದೂ ಜಾಗರಣಾ ವೇದಿಕೆಯ ಜವಾಬ್ದಾರಿಯನ್ನು ಹೊಂದಿದ್ದು ಇದೀಗ ಗಡಿಪಾರು ನೋಟೀಸ್ ನೀಡಿದ್ದಾರೆ.


ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!

ಗಡಿಪಾರು ನೋಟೀಸ್ ನಲ್ಲಿ ಏನಿದೆ ..?


ವಿಟ್ಲ ಠಾಣಾ ವ್ಯಾಪ್ತಿಯ ಯುವಕರನ್ನು ಸೇರಿಸಿಕೊಂಡು ಗುಂಪುಗಾರಿಕೆ ನಡೆಸುವುದು, ಹಲ್ಲೆ, ದೊಂಬಿ, ಮತೀಯ ಗಲಭೆಗಳನ್ನು ಸೃಷ್ಟಿಸಲು ಜೀವಬೆದರಿಕೆ ಹಾಕುವುದು, ನೈತಿಕ ಪೊಲೀಸ್ ಗಿರಿಯಂತಹ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದ್ದು ವಿಟ್ಲ ಪರಿಸರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹಲವು ಬಾರಿ ಠಾಣೆಗೆ ಕರೆದು ಕಾನೂನು ತಿಳುವಳಿಕೆ ನೀಡಿದರೂ ಸಹ ತನ್ನ ಚಾಳಿ ಬಿಡದಿದ್ದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟಾಗುವ ಸಾಧ್ಯತೆ ಇರುವುದರಿಂದ ಈತನನ್ನು ಗಡಿಪಾರು ಮಾಡಿ ಎಂದು ಬಂಟ್ವಾಳ ಠಾಣೆಯ ಪೊಲೀಸ್ ಉಪ ಅಧೀಕ್ಷರಕರು ಪ್ರಸ್ತಾವನೆ ಸಲ್ಲಿಸಿದರಿಂದ ದಿನಾಂಕ 9.10.2023 ರಂದು ಸಹಾಯಕ ಆಯುಕ್ತರ ನ್ಯಾಯಾಲಯ ಮಂಗಳೂರು ಉಪವಿಭಾಗ ಇಲ್ಲಿಗೆ ಹಾಜರಾಗುವಂತೆ ಅಕ್ಷಯ್ ರಜಪೂತ್‌ಗೆ ನೋಟೀಸ್ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.



Leave a Comment: