ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಬಿಜೆಪಿ ಎರಡನೇ ಪಟ್ಟಿ ಇಂದೇ ಬಿಡುಗಡೆ- ಯಡಿಯೂರಪ್ಪ

Posted by Vidyamaana on 2023-04-12 11:35:12 |

Share: | | | | |


ಬಿಜೆಪಿ ಎರಡನೇ ಪಟ್ಟಿ ಇಂದೇ ಬಿಡುಗಡೆ- ಯಡಿಯೂರಪ್ಪ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್​ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಮಂಗಳವಾರ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಹತ್ತಾರು ಬಾರಿ ಯೋಚನೆ ಮಾಡಿಯೇ ಅಭ್ಯರ್ಥಿಗಳ ಘೋಷಣೆ ಮಾಡಲಾಗಿವುದು.ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವೂ ಕೊಟ್ಟರೂ ಈ ರೀತಿ ತೀರ್ಮಾನ ಮಾಡಿದ್ದಾರೆ. ಒಂದಿಬ್ಬರು ಬೇರೆ ಕಡೆ ಹೋಗಬಹುದು. ಆದರೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಈ ಬಾರಿ 125 – 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಬದಲಾವಣೆ

Posted by Vidyamaana on 2024-05-26 11:01:07 |

Share: | | | | |


ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಬದಲಾವಣೆ

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ಅವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.

ರಾಜೇಶ್ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸಂಸ್ಥೆ ಸಾಮರಸ್ಯದ ಹೊಣೆ ವಹಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಮೂಲದ ರಾಜೇಶ್  ಅವರು ಆರ್.ಎಸ್.ಎಸ್.ಪ್ರಚಾರಕರಾಗಿ ಅನೇಕ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

2022ರ ಜುಲೈನಲ್ಲಿ ಅವರನ್ನು ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಮಹತ್ವದ ಹುದ್ದೆಗೆ ಬಂದವರ ಅವಧಿ ಸಾಮಾನ್ಯವಾಗಿ ಮೂರು ವರ್ಷ ಇರುತ್ತದೆ. ಆದರೆ ಅವಧಿಗೆ ಮೊದಲೇ ಅವರನ್ನು ಬದಲಾವಣೆ ಮಾಡಲಾಗಿದೆ.

ಅರ್ಧ ಗಂಟೆಯ ದೃಶ್ಯಕ್ಕೆ 50 ಕೋಟಿ ರೂಪಾಯಿ ಸುರಿದ ಪುಷ್ಪ 2 ನಿರ್ಮಾಪಕರು

Posted by Vidyamaana on 2024-02-29 16:05:29 |

Share: | | | | |


ಅರ್ಧ ಗಂಟೆಯ ದೃಶ್ಯಕ್ಕೆ 50 ಕೋಟಿ ರೂಪಾಯಿ ಸುರಿದ ಪುಷ್ಪ 2 ನಿರ್ಮಾಪಕರು

       ಕೆಲವು ವರದಿಗಳ ಪ್ರಕಾರ ಪುಷ್ಪ 2 ಚಿತ್ರದಲ್ಲಿ ಇಂಟರ್​ವಲ್​ಗೂ ಮೊದಲು 30 ನಿಮಿಷಗಳ ದೃಶ್ಯವೊಂದು ಬರಲಿದೆ. ಇದಕ್ಕಾಗಿ ಬರೋಬ್ಬರಿ 35 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಈ ದೃಶ್ಯ ಸೆರೆಹಿಡಿಯಲು ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ಪುಷ್ಪ 2 ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾನ ಅಂದುಕೊಂಡ ದಿನಾಂಕದಂದು ರಿಲೀಸ್ ಮಾಡಬೇಕು ಎಂಬ ನಿಟ್ಟಿನಲ್ಲಿ ನಿರ್ದೇಶಕ ಸುಕುಮಾರ್ ಅವರು ಕೆಲಸ ಮಾಡುತ್ತಿದ್ದಾರೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆ ಆಗಲಿದೆ. ಈಗ ಸಿನಿಮಾ ಬಗ್ಗೆ ಭರ್ಜರಿ ಅಪ್​​ಡೇಟ್ ಒಂದು ಸಿಕ್ಕಿದೆ. ಈ ಚಿತ್ರದ ಒಂದು ಪ್ರಮುಖ ದೃಶ್ಯಕ್ಕೆ ತಂಡ ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.


ಪುಷ್ಪ ಸಿನಿಮಾ 2021ರ ಡಿಸೆಂಬರ್ ತಿಂಗಳಲ್ಲಿ ರಿಲೀಸ್ ಆಗಿ ಬರೋಬ್ಬರಿ 300 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಹಿನ್ನೆಲೆಯಲ್ಲಿ ಎರಡನೇ ಪಾರ್ಟ್ ಬಗ್ಗೆ ಪ್ರೇಕ್ಷಕರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಕೂಡ ಒಳ್ಳೆಯ ಬಿಸ್ನೆಸ್ ಮಾಡುವ ಬಗ್ಗೆ ತಂಡಕ್ಕೆ ನಿರೀಕ್ಷೆ ಇದೆ. ಬಜೆಟ್ ವಿಚಾರದಲ್ಲಿ ಮೈತ್ರಿ ಮೂವೀ ಮೇಕರ್ಸ್ ಯಾವುದೇ ರಾಜಿ ಮಾಡಿಕೊಳ್ಳುತ್ತಿಲ್ಲ.ನಿರ್ದೇಶಕರು ಕೇಳಿದಷ್ಟು ಹಣವನ್ನು ಚೆಲ್ಲುತ್ತಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ.


ಕೆಲವು ವರದಿಗಳ ಪ್ರಕಾರ ಪುಷ್ಪ 2 ಸಿನಿಮಾದಲ್ಲಿ ಇಂಟರ್​ವಲ್​ಗೂ ಮೊದಲು 30 ನಿಮಿಷಗಳ ದೃಶ್ಯವೊಂದು ಬರಲಿದೆ. ಇದಕ್ಕಾಗಿ ಬರೋಬ್ಬರಿ 35 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಈ ದೃಶ್ಯ ಸೆರೆಹಿಡಿಯಲು ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ 30 ನಿಮಿಷಗಳು ಕಥೆಗೆ ಪ್ರಮುಖ ಟ್ವಿಸ್ಟ್ ನೀಡಲಿವೆಯಂತೆ.ಪುಷ್ಪ ಕಥೆ ತಿರುಪತಿಯಲ್ಲಿ ಸಾಗಿತ್ತು. ಈ ಕಾಡಿನಲ್ಲಿ ಸಿಗುವ ರಕ್ತಚಂದನದ ಕಳ್ಳ ಸಾಗಣೆ ಬಗ್ಗೆ ಹೇಳಲಾಗಿತ್ತು. ಎರಡನೇ ಭಾಗದಲ್ಲಿ ತಿರುಪತಿಯ ಗಂಗಮ್ಮ ಜಾತ್ರೆಯೂ ಇರಲಿದೆಯಂತೆ. ಮಧ್ಯಂತರಕ್ಕೂ ಮೊದಲ 30 ನಿಮಿಷಗಳ ಕಥೆ ಇದೇ ಜಾತ್ರೆಯಲ್ಲಿ ಸಾಗಲಿದೆ ಎನ್ನಲಾಗಿದೆ. ಇದಕ್ಕಾಗಿ ದೊಡ್ಡ ದೊಡ್ಡ ಸೆಟ್​ಗಳನ್ನು ಹಾಕಲಾಗಿದೆ.

ಏನೆಲ್ಲ ಇರಲಿದೆ?

30 ನಿಮಿಷಗಳಲ್ಲಿ ಒಂದು ಸಾಂಗ್, ಫೈಟ್ ಹಾಗೂ ಭಾವನಾತ್ಮಕ ದೃಶ್ಯಗಳು ಇರಲಿವೆ. ಈ ಚಿತ್ರದ ಬಜೆಟ್ 500 ಕೋಟಿ ರೂಪಾಯಿ ಎನ್ನಲಾಗಿದೆ. ಸದ್ಯದ ಮಟ್ಟಿಗೆ ಇವೆಲ್ಲವೂ ಅಂತೆ-ಕಂತೆ ಹಂತದಲ್ಲಿದೆ. ಸಿನಿಮಾ ನೋಡಿದ ಬಳಿಕವೇ ಇದಕ್ಕೆ ಉತ್ತರ ಸಿಗಲಿದೆ.


ಮೊದಲ ಭಾಗದಲ್ಲಿ


ಸಾಮಾನ್ಯ ಕೂಲಿಯವನಾಗಿದ್ದ ಪುಷ್ಪರಾಜ್ (ಅಲ್ಲು ಅರ್ಜುನ್) ರಕ್ತಚಂದನದ ಕಳ್ಳ ಸಾಗಣೆ ದಂಧೆ ಸೇರಿಕೊಳ್ಳುತ್ತಾನೆ. ಅಲ್ಲಿಂದ ಆತ ಬೆಳೆಯುತ್ತಾ ಹೋಗುತ್ತಾನೆ. ಮೊದಲ ಭಾಗದ ಕೊನೆಯಲ್ಲಿ ಆತ ಡಾನ್ ಆಗಿ ನಿಲ್ಲುತ್ತಾನೆ. ಸಂಪೂರ್ಣ ದಂಧೆಯನ್ನು ತನ್ನ ವಶಕ್ಕೆ ಪಡೆಯುತ್ತಾನೆ. ಎರಡನೇ ಭಾಗದಲ್ಲಿ ಆತ ಏನು ಮಾಡುತ್ತಾನೇ ಅನ್ನೋದೆ ಕಥೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜೊತೆಗೆ ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ.

ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ!

Posted by Vidyamaana on 2023-02-21 04:05:24 |

Share: | | | | |


ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ!

ಪುತ್ತೂರು: ವಿಧಾನಸಭಾ ಚುನಾವಣೆಯ ಗುಂಗು ಹೆಚ್ಚುತ್ತಿದ್ದಂತೆ, ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆಯೂ ಬಹುತೇಕ ಸ್ಪಷ್ಟವಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಮಾರ್ಚ್ 24ರಂದೇ ಚುನಾವಣಾ ದಿನಾಂಕ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಚುನಾವಣೆಗಾಗಿ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಆಕಾಂಕ್ಷಿ ಅಭ್ಯರ್ಥಿಗಳಂತೂ ಭರ್ಜರಿಯಾಗಿಯೇ ತಯಾರಾಗುತ್ತಿದ್ದಾರೆ. ಇದರ ನಡುವೆ ರಾಜಕೀಯ ಊಹಾಪೋಹಗಳು, ಅಭ್ಯರ್ಥಿಗಳ ಕುರಿತಾದ ಅಂತೆ-ಕಂತೆಗಳ ಸುದ್ದಿಗಳು ಎಗ್ಗಿಲ್ಲದೆ ಹರಿದಾಡುತ್ತಿದೆ. ಇದಕ್ಕೆಲ್ಲಾ ಮಾರ್ಚ್ 24ರ ಹೊತ್ತಿಗೆ ತೆರೆ ಬೀಳಲಿದೆ.

ಒಂದು ವೇಳೆ ಮಾರ್ಚ್ 24ರಂದು ಚುನಾವಣಾ ದಿನಾಂಕ ಪ್ರಕಟವಾದರೆ, ಮುಂದೆ ಅಂತಿಮ ಸಿದ್ಧತೆಗಳಿಗಷ್ಟೇ ಸಮಯ ಮೀಸಲು. ಪ್ರಚಾರದ ಅಂತಿಮ ದಿನ, ನಾಮಪತ್ರ ಸಲ್ಲಿಕೆಯಿಂದ ಹಿಡಿದು, ಚುನಾವಣಾ ಫಲಿತಾಂಶದವರೆಗಿನ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟ ಮಾಡಲಿದೆ. ರಾಜಕೀಯ ಕುರಿತಾಗಿ ಈಗ ಮೂಡಿರುವ ಎಲ್ಲಾ ಪ್ರಶ್ನೆಗಳಿಗೆ, ಕುತೂಹಲಗಳಿಗೆ ಮಾರ್ಚ್ 24ರಂದೇ ತೆರೆಬೀಳುವ ಸಾಧ್ಯಾತೆ ದಟ್ಟವಾಗಿದೆ.

ನಿಡ್ಪಳ್ಳಿ: ಕಾಂಗ್ರೆಸ್ ಚುನಾವಣಾ ಪ್ರಚಾರಸಭೆ

Posted by Vidyamaana on 2023-04-28 10:06:32 |

Share: | | | | |


ನಿಡ್ಪಳ್ಳಿ: ಕಾಂಗ್ರೆಸ್ ಚುನಾವಣಾ ಪ್ರಚಾರಸಭೆ

ಪುತ್ತೂರು:ಚುನಾವಣೆಯ ಖರ್ಚಿಗೆಂದು ನಾನು ಯಾವುದೇ ಉದ್ಯಮಿಗಳಿಂದ ಹಣ ಪಡೆದುಕೊಂಡಿಲ್ಲ ಮತ್ತು ಯಾರಿಂದಲೂ ಹಣ ಪಡೆದುಕೊಳ್ಳುವುದೂ ಇಲ್ಲ ,‌ತನ್ನ ದುಡಿಮೆಯ ಹಣದಿಂದಲೇ ನಾನು ಚುನಾವಣೆ ಖರ್ಚು ,ವೆಚ್ಚಗಳನ್ನು ನಿಭಾಯಿಸಲಿದ್ದೇನೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಮತ ಕೇಳಲು ಗ್ರಾಮಗಳಿಗೆ ಭೇಟಿ‌ನೀಡುವ ವೇಳೆ ರಾಜಕೀಯ ಪಕ್ಷದವರು ಚುನಾವಣೆ ಖರ್ಚಿಗೆಂದು ಹಣ ಕೊಡುವಂತೆ ಬಲವಂತ ಮಾಡುತ್ತಿದ್ದಾರೆ ಎಂಬ ವಿಷಯ ತಿಳಿದಿದೆ. ಮತ ಕೇಳಲು ಮನೆಗಳಿಗೆ ತೆರಳಿದಾಗಲೂ ಮನೆಯ ಯಜಮಾನ ಮನೆಯೊಳಗಿದ್ದರೂ ಅವರಿಲ್ಲ ಎಂದು ಹೇಳುವ ಸ್ಥಿತಿ ಯನ್ನು ಕೆಲವರು ನಿರ್ಮಿಸಿದ್ದಾರೆ. ನಾನು ಯಾರಲ್ಲೂ ದುಡ್ಡು ಕೇಳುವುದಿಲ್ಲ ಮತ್ತು ನನ್ನ ಹೆಸರು ಹೇಳಿ ಯಾರಾದರು ಹಣ ಕೇಳಿದರೆ ಅವರಿಗೂ ಕೊಡಬೇಡಿ ಎಂದು‌ ಮನವಿ ಮಾಡಿದರು.  ನಾನು ಚಿನಾವಣೆಗೆ ನಿಂತು ಇನ್ನೊಬ್ಬರಿಗೆ ಯಾಕೆ ತೊಂದರೆ ಕೊಡುವುದು ಸರಿಯಲ್ಲ ಎಂಬಪರಿಜ್ಞಾನ ಪ್ರತೀಯೊಬ್ಬ ಅಭ್ಯರ್ಥಿಯಲ್ಲೂ ಇರಬೇಕಿದಸ. ಸ್ವಂತ ಹಣವನ್ನೇ ಚುನಾವಣೆಗೆ ಖರ್ಚು‌ಮಾಡಬೇಕೇ ವಿನ ಯಾರಿಗೂತೊಂದರೆ ಕೊಡಬಾರದು ಎಂದು ಹೇಳಿದರು.

ನಿಡ್ಪಳ್ಳಿ ಗ್ರಾಮದಲ್ಲಿ‌ನಮ್ಮ‌ಟ್ರಸ್ಟ್ ನ ಅನೇಕ‌ಫಲಾನುಭವಿಗಳಿದ್ದಾರೆ.‌ಈ ಭಾಗದ ಅನೇಕ ಜನರಿಗೆ ತನ್ನಿಂದಾದ ನೆರವು‌ಮಾಡಿದ್ದೇನೆ 

ನನ್ನ ಸೇವೆಯನ್ನು ಜನ‌ಮರೆತಿಲ್ಲ ಎಂಬುದನ್ನು ಸಭೆಯಲ್ಲಿ ಸೇರಿದ ಜನ‌ಸಮೂಹವೇ‌ ಸಕ್ಷಿಯಾಗಿದೆ ಎಂದು‌ಹೇಳಿದರುಪುತ್ತೂರು ಅಭಿವೃದ್ದಿಯಾಗಬೇಕಾದರೆ ಇಲ್ಲಿ ಕಾಂಗ್ರೆಸ್ ಶಾಸಕರಾಗಬೇಕು. ಕಳೆದ ಅನೇಕ ವರ್ಷಗಳಿಂದ ಇಲ್ಲಿ ನಮ್ಮ ಶಾಸಕರಿಲ್ಲದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನ ಸಾಮಾನ್ಯರಿಗೆ ತೀವ್ರ ತೊಂದರೆಯಾಗಿದ್ದು ಈ ಬಾರು ಕಾಂಗ್ರೆಸ್ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರ.‌ಭೃಷ್ಟಾಚಾರವಿಲ್ಲದ, ಬಡವರ ಸ್ನೇಹಿ ಆಡಳಿತ ನಡೆಸಲು ಪ್ರತೀಯೊಬ್ಬರೂ‌ಆಶೀರ್ವದ ಮಾಡಬೇಕು‌ಎಂದು ಹೇಳಿದರು.ಸರಕಾರಿ ಶಾಲೆಗಳಲ್ಲಿ ನಮ್ಮ‌ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತಾಗಬೇಕು.‌ ಸರಕಾರಿ‌ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಮೊದಲು ಪರಿಹರಿಸಬೇಕಿದೆ.‌ಶಾಸಕರಾಗಿ ಆಯ್ಕೆಯಾದಲ್ಲಿ ಎಲ್ಲಾ ಸರಕಾರಿ‌ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮವಹಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ‌ಸಂಯೋಜಕ ಕಾವು ಹೇಮನಾಥ‌ಶೆಟ್ಟಿ, ಶಿವಪ್ಪ ಪೂಜಾರಿ‌ನಿಡ್ಪಳ್ಳಿ, ಎಂ‌ಎಸ್‌ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

ಕೋರ್ಟಿಗೆ ಹೋಗುವ ವೇಳೆ ಪೊಲೀಸ್‌ ವಾಹನದ ಇಂಧನ ಖಾಲಿ: ಗಾಡಿ ತಳ್ಳಿಕೊಂಡು ಸಾಗಿದ ಆರೋಪಿಗಳು.ವಿಡಿಯೋ ವೈರಲ್

Posted by Vidyamaana on 2024-02-04 13:30:41 |

Share: | | | | |


ಕೋರ್ಟಿಗೆ ಹೋಗುವ ವೇಳೆ ಪೊಲೀಸ್‌ ವಾಹನದ ಇಂಧನ ಖಾಲಿ: ಗಾಡಿ ತಳ್ಳಿಕೊಂಡು ಸಾಗಿದ ಆರೋಪಿಗಳು.ವಿಡಿಯೋ ವೈರಲ್

ಪಾಟ್ನಾ: ಆರೋಪಿಗಳನ್ನು ಕೋರ್ಟಿಗೆ ಹಾಜರಿ ಪಡಿಸುವ ಪೊಲೀಸ್‌ ವಾಹನದ ಡಿಸೇಲ್‌ ಖಾಲಿಯಾದರೆ ಮುಂದೇನಾಗಬಹುದು..?ಇಂಥದ್ದೇ ಒಂದು ಘಟನೆ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ನಡೆದಿದೆ. ಮದ್ಯ ಸೇವಿಸಿದ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ವೈರಲ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


ಬಂಧಿತ ಆರೋಪಿಗಳನ್ನು ಕೋರ್ಟಿಗೆ ಹಾಜರಿಪಡಿಸುವ ನಿಟ್ಟಿನಲ್ಲಿ ಪೊಲೀಸರ ಮಹೀಂದ್ರಾ ಸ್ಕಾರ್ಪಿಯೋ ವಾಹನದಲ್ಲಿ ಕರೆದುಕೊಂಡು ಹೋಗಲಾಗಿತ್ತು.ಕಾರಿನಲ್ಲಿ ಹೋಗುವ ವೇಳೆ ನಡುರಸ್ತೆಯಲ್ಲೇ ವಾಹನ ನಿಂತಿದೆ. ವಾಹನದ ಡಿಸೇಲ್‌ ಖಾಲಿಯಾಗಿದ್ದು, ಈ ವೇಳೆ ಓರ್ವ ಪೊಲೀಸ್ ಅಧಿಕಾರಿ ಸ್ಟೀರಿಂಗ್‌ನಲ್ಲಿದ್ದರು ಮತ್ತು ಇತರ ಅಧಿಕಾರಿ ಆರೋಪಿಯನ್ನು ನೋಡಿಕೊಳ್ಳುತ್ತಿದ್ದರು. ಸ್ವಲ್ಪ ಸಮಯದ ನಂತರ ಪೊಲೀಸ್ ಅಧಿಕಾರಿ ಆರೋಪಿಗಳನ್ನು ಕಾರಿನಿಂದ ಕೆಳಗಿಳಿಸಿ ಕಾರನ್ನು ತಳ್ಳಲು ಹೇಳಿದ್ದಾರೆ. ನಾಲ್ವರು ಆರೋಪಿಗಳನ್ನು ಪರಸ್ಪರ ಹಗ್ಗದಿಂದ ಕಟ್ಟಿ ವಾಹನವನ್ನು ತಳ್ಳಿಸಿದ್ದಾರೆ. ಈ ದೃಶ್ಯವನ್ನು ನೋಡುಗರು ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದಾರೆ. ಆರೋಪಿಗಳು ವಾಹನವನ್ನು 500 ಮೀಟರ್‌ಗೂ ಹೆಚ್ಚು ದೂರ ತಳ್ಳಿದ್ದಾರೆ ಎನ್ನಲಾಗಿದೆ.ಭಾರೀ ಪ್ರಮಾದಕ್ಕೆ ಕಾರಣರಾದ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.



Leave a Comment: