ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ದ.ಕ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Posted by Vidyamaana on 2024-04-22 10:48:39 |

Share: | | | | |


ದ.ಕ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ

ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬ ದುರಂತ ಅಂತ್ಯ: 41 ಕೋಟಿ ರೂ.ಬಂಗಲೆಯಲ್ಲಿ ಮೂವರ ಶವ ಪತ್ತೆ!

Posted by Vidyamaana on 2023-12-30 22:25:45 |

Share: | | | | |


ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬ ದುರಂತ ಅಂತ್ಯ: 41 ಕೋಟಿ ರೂ.ಬಂಗಲೆಯಲ್ಲಿ ಮೂವರ ಶವ ಪತ್ತೆ!

ವಾಷಿಂಗ್ಟನ್​: ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ಮ್ಯಾಸಚೂಸೆಟ್ಸ್‌ನ ಡೋವರ್‌ನಲ್ಲಿರುವ ಅವರ ಬಂಗಲೆಯಲ್ಲಿ ದಂಪತಿ ಮತ್ತು 18 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ರಾಕೇಶ್ ಕಮಲ್ (57), ಟೀನಾ (54) ಮತ್ತು ಅವರ ಪುತ್ರಿ ಅರಿಯಾನಾ (18) ಎಂದು ಗುರುತಿಸಲಾಗಿದೆ. ರಾಕೇಶ್ ಮೃತದೇಹದ ಬಳಿ ಬಂದೂಕು ಪತ್ತೆಯಾಗಿದ್ದು, ಅವರ ಸಾವಿನ ಹಿಂದೆ ಹಲವು ಅನುಮಾನಗಳಿವೆ.ರಾಕೇಶ್ ಕಮಲ್ ದಂಪತಿ ಅಮೆರಿಕದಲ್ಲಿ ಶ್ರೀಮಂತ ಕುಟುಂಬ. ಕಮಲ್ ತಮ್ಮ ಶಿಕ್ಷಣವನ್ನು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ, ಬೋಸ್ಟನ್ ವಿಶ್ವವಿದ್ಯಾಲಯ ಮತ್ತು ಎಂಐಟಿ ಸ್ಲೋನ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಪೂರ್ಣಗೊಳಿಸಿದರು. ಟೀನಾ ತನ್ನ ಶಿಕ್ಷಣವನ್ನು ಹಾರ್ವರ್ಡ್ ವಿಶ್ವವಿದ್ಯಾಲಯ ಮತ್ತು ದೆಹಲಿ ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿದರು. ಇಬ್ಬರಿಗೂ ಶಿಕ್ಷಣ ಕ್ಷೇತ್ರದಲ್ಲಿ ಅನುಭವವಿದ್ದ ಕಾರಣ 2016ರಲ್ಲಿ ಎಡುನೋವಾ ಎಂಬ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದರು.


ಆದರೆ ಹಣಕಾಸಿನ ತೊಂದರೆಗಳಿಂದಾಗಿ ಇದು 2021 ರಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿತು. ಕಳೆದ ವರ್ಷ ಸೆಪ್ಟೆಂಬರ್ 22ರಂದು ಶಿಕ್ಷಣ ಸಂಸ್ಥೆಯ ದಿವಾಳಿತನದ ಅರ್ಜಿಯನ್ನೂ ಸಲ್ಲಿಸಲಾಗಿದೆಯಂತೆ. ಇದರ ನಡುವೆ ಕಮಲ್ ದಂಪತಿ 2019 ರಲ್ಲಿ ಪ್ರತಿಷ್ಠಿತರು ವಾಸಿಸುವ ಮ್ಯಾಸಚೂಸೆಟ್ಸ್‌ನಲ್ಲಿ 4 ಮಿಲಿಯನ್ ಡಾಲರ್ ಕೊಟ್ಟು ಬೃಹತ್​ ಬಂಗಲೆ ಖರೀದಿಸಿದ್ದರು. 19 ಸಾವಿರ ಚದರ ಮೀಟರ್ ವಿಸ್ತೀರ್ಣ ಹೊಂದಿರುವ ಈ ಕಟ್ಟಡದಲ್ಲಿ 11 ಮಲಗುವ ಕೋಣೆಗಳಿದ್ದವು. ಈಗ ಆ ಕಟ್ಟಡದ ಮೌಲ್ಯ 5 ಮಿಲಿಯನ್ ಡಾಲರ್ (ರೂ. 41.26 ಕೋಟಿ). ಸದ್ಯ ಈ ಬಂಗಲೆಯಲ್ಲೇ ಕಮಲ್ ದಂಪತಿ ವಾಸವಿದ್ದರು.ಎರಡು ದಿನವಾದರೂ ಕಮಲ್ ದಂಪತಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಅವರ ಸಂಬಂಧಿಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಪೊಲೀಸರು ಕಟ್ಟಡಕ್ಕೆ ತೆರಳಿ ಪರಿಶೀಲಿಸಿದಾಗ ಮೂರು ಶವಗಳು ಪತ್ತೆಯಾಗಿವೆ. ಘಟನೆ ವೇಳೆ ಯಾರೂ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಅವರ ಸಾವಿಗೆ ಕೌಟುಂಬಿಕ ಕಲಹಗಳೇ? ಹಣಕಾಸಿನ ತೊಂದರೆಗಳು ಕಾರಣವೇ? ಅಥವಾ ಹೊರಗಿನವರಿಗೆ ಸಂಬಂಧವಿದೆಯೇ? ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ತನಿಖೆ ನಡೆಸುತ್ತಿದ್ದಾರೆ.

ಕಾಣಿಯೂರಿನ ಎಲುವೆಯಲ್ಲಿ ರಿಕ್ಷಾ ಚಾಲಕ ನೇಣಿಕೆ ಶರಣು

Posted by Vidyamaana on 2023-12-28 14:29:54 |

Share: | | | | |


ಕಾಣಿಯೂರಿನ ಎಲುವೆಯಲ್ಲಿ ರಿಕ್ಷಾ ಚಾಲಕ ನೇಣಿಕೆ ಶರಣು

ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು | ಬೈಕ್ ಅಪಘಾತ: ಸವಾರ ಕೋಟೆಕಾರ್ ನಿವಾಸಿ ಅಝ್ವೀನ್ ಮೃತ್ಯು

Posted by Vidyamaana on 2023-10-11 14:18:27 |

Share: | | | | |


ಮಂಗಳೂರು | ಬೈಕ್ ಅಪಘಾತ: ಸವಾರ ಕೋಟೆಕಾರ್ ನಿವಾಸಿ ಅಝ್ವೀನ್  ಮೃತ್ಯು

ಉಳ್ಳಾಲ: ಮುಂಭಾಗದಲ್ಲಿ ಸಂಚರಿಸುತ್ತಿದ್ದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ನಡೆದಿದೆ.



ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸ್ತುತ ಕೋಟೆಕಾರ್ ನಲ್ಲಿ ನಿವಾಸಿ ಅಝ್ವೀನ್ (21)ಎಂದು ಗುರುತಿಸಲಾಗಿದೆ.


ಮೀನುಗಾರಿಕೆಯ ಕೆಲಸಕ್ಕೆಂದು ತೆರಳುತ್ತಿದ್ದ ಅಝ್ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ

ಬ್ರೈಟ್ ಭಾರತ್ ಸಂಸ್ಥೆ ವತಿಯಿಂದ ಪ್ರಜ್ಞಾ ಆಶ್ರಮಕ್ಕೆ ವೀಲ್ ಚಯರ್ ಹಸ್ತಾಂತರ ಅಕ್ಕಿ ವಿತರಣೆ

Posted by Vidyamaana on 2023-10-29 10:46:39 |

Share: | | | | |


ಬ್ರೈಟ್ ಭಾರತ್ ಸಂಸ್ಥೆ ವತಿಯಿಂದ ಪ್ರಜ್ಞಾ ಆಶ್ರಮಕ್ಕೆ ವೀಲ್ ಚಯರ್ ಹಸ್ತಾಂತರ ಅಕ್ಕಿ ವಿತರಣೆ

ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ವತಿಯಿಂದ, ಪುತ್ತೂರಿನ ಬಿರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮಕ್ಕೆ ವೀಲ್ ಚಯರ್ ಹಸ್ತಾಂತರ ಹಾಗೂ ಆಶ್ರಮದ ಭಿನ್ನ ಸಾಮರ್ಥ್ಯದ ರೋಗಿಗಳಿಗೆ ಸಿಹಿತಿಂಡಿ ಹಾಗೂ ಅಕ್ಕಿ ವಿತರಣಾ ಕಾರ್ಯಕ್ರಮ ಅ. 28ರಂದು ಆಶ್ರಮದ ವಠಾರದಲ್ಲಿ ನಡೆಯಿತು.


  ಆಶ್ರಮಕ್ಕೆ ತೆರಳಿದ ಬ್ರೈಟ್ ಭಾರತ್ ಸಂಸ್ಥೆಯ ಪಾಲುದಾರರು, ಅಲ್ಲಿನ ಭಿನ್ನ ಸಾಮರ್ಥ್ಯದ ರೋಗಿಗಳೊಂದಿಗೆ, ಒಂದಿಷ್ಟು ಸಮಯ ಕಳೆದು, ಆಶ್ರಮಕ್ಕೆ ಬೇಕಾದ ಅಕ್ಕಿ, ವೀಲ್ ಚೆಯರ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಸಮಾಜ ಸೇವಕ ಅಲಿ ಪರ್ಲಡ್ಕ, ಸಂತೋಷ್ ಗೋಳಿಕಟ್ಟೆ, ಮೂರ್ತಿ ಕಲಾವಿದರಾದ ತಾರಾನಾಥ ಆಚಾರ್ಯ, ಆಶ್ರಮದ ಮುಖ್ಯಸ್ಥರಾದ ಅಣ್ಣಪ್ಪ, ಹಾಗೂ ಅವರ ಪತ್ನಿ ಜ್ಯೋತಿ ಮತ್ತು  ಬ್ರೈಟ್ ಭಾರತ್ ಸಂಸ್ಥೆಯ ಪಾಲುದಾರರು ಉಪಸ್ಥಿತರಿದ್ದರು.

ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಗೆ ಗಾಯ

Posted by Vidyamaana on 2024-01-14 18:51:34 |

Share: | | | | |


ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಗೆ ಗಾಯ

ಮಂಗಳೂರು: ಇಲ್ಲಿನ ತೆಂಕ ಯಡಪದವು ಗೋಪಾಲಕೃಷ್ಣ ದೇವಸ್ಥಾನದ ಬಳಿ ರಸ್ತೆ ದಾಟುತ್ತಿದ್ದ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರಿಗೆ ಕಾರು ಢಿಕ್ಕಿ ಹೊಡೆದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.


ಮಧ್ಯಾಹ್ನ 1.30ರ ಸುಮಾರಿಗೆ ರಾಜೇಶ್ ನಾಯ್ಕ್ ಅವರು ತೆಂಕ ಯಡಪದವು ಗೋಪಾಲ ಕೃಷ್ಣ ದೇವಸ್ಥಾನದ ಬಳಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಕಾಲ್ನಡಿಗೆಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಸಕ ರಾಜೇಶ್ ನಾಯ್ಕ್ ಅವರ ಎರಡು ಮೊಣಕಾಲುಗಳಿಗೆ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಶಾಸಕರಿಗೆ ಢಿಕ್ಕಿ ಹೊಡೆದ ಬಳಿಕ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದು, ಕಾರ್ಯಪ್ರವೃತ್ತರಾದ 112 ಹೊಯ್ಸಳ ಪೊಲೀಸ್ ತಂಡ ಗುರುಪುರ ಜಂಕ್ಷನ್‌ನಲ್ಲಿ ಕಾರನ್ನು ತಡೆದು ಠಾಣೆಗೆ ತಂದಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರ ದೂರಿನ ಆಧಾರದ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಕಲಂ 279, 337 ಐಪಿಸಿ, 134(ಎ)(ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.



Leave a Comment: