ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


ಕಾನೂನಿನ ಕಣ್ಣಿಗೆ ಮಣ್ಣೆರಚಿ ರಿಕ್ಷಾ ಗಾಜಿಗೆ ಟಿಂಟ್

Posted by Vidyamaana on 2023-07-27 03:25:10 |

Share: | | | | |


ಕಾನೂನಿನ ಕಣ್ಣಿಗೆ ಮಣ್ಣೆರಚಿ ರಿಕ್ಷಾ ಗಾಜಿಗೆ ಟಿಂಟ್

ಪುತ್ತೂರು: ರಿಕ್ಷಾ ಗಾಜಿಗೆ ಟಿಂಟ್ ಹಾಕಿ ಓಡಾಡುತ್ತಿರುವ ರಿಕ್ಷಾಗಳನ್ನು ನಿಲ್ಲಿಸಿ, ಅವುಗಳ ಟಿಂಟ್ ತೆಗೆಸುವ ಕಾರ್ಯಾಚರಣೆಗೆ ಪುತ್ತೂರು ಆರ್.ಟಿ.ಓ. ಅಧಿಕಾರಿಗಳು ಮುಂದಾಗುತ್ತಿದ್ದಾರೆ.

ರಿಕ್ಷಾದ ಮುಂಭಾಗದ ಗಾಜಿಗೆ ಟಿಂಟ್ ಹಾಕುವಂತಿಲ್ಲ ಎನ್ನುತ್ತದೆ ಕಾನೂನು. ಕಂಪೆನಿ ನಿರ್ಮಿಸಿಕೊಡುವ ರಿಕ್ಷಾವನ್ನು ಯಥಾವತ್ತಾಗಿ ಬಳಸಬೇಕು. ಗಾಜಿಗೆ ಟಿಂಟ್ ಹಾಕುವುದಕ್ಕಾಗಲಿ ಅಥವಾ ಗಾಜು ಮುಚ್ಚಿ ಹೋಗುವಂತೆ ಅಕ್ಷರಗಳನ್ನು ಬರೆಯುವುದಾಗಲಿ ಮಾಡುವಂತಿಲ್ಲ. ಹೀಗೆ ಮಾಡುವುದರಿಂದ ರಿಕ್ಷಾ ಚಾಲಕರಿಗೆ ಅಡ್ಡಿಯಾಗಿ, ಅಪಘಾತಕ್ಕೆ ಕಾರಣವಾಗುವ ಸಂದರ್ಭಗಳು ಇವೆ. ಇದಕ್ಕೆ ಹಲವು ನಿದರ್ಶನಗಳು ಇವೆ.

ಪುತ್ತೂರಿನಲ್ಲಿ ಓಡಾಡುವ ರಿಕ್ಷಾಗಳಲ್ಲಿ ಮುಂಭಾಗದ ಗಾಜಿನಲ್ಲಿ ಸ್ವಲ್ಪ ಭಾಗವನ್ನು ಮಾತ್ರ ಬಿಟ್ಟು, ಉಳಿದ ಭಾಗಗಳಿಗೆ ಪೂರ್ತಿಯಾಗಿ ಟಿಂಟ್ ಹಾಕಿರುವುದು ಇದೆ. ರಿಕ್ಷಾದ ಒಳಗಡೆ ತಂಪಿನ ವಾತಾವರಣ ಇರಲಿ ಎಂಬ ಕಾರಣಕ್ಕೆ, ಟಿಂಟ್ ಹಾಕಲಾಗುತ್ತದೆ. ಆದರೆ ಇದುವೇ ಅಪಘಾತಕ್ಕೆ ಕಾರಣವಾಗುವ ಸಂದರ್ಭ ಹೆಚ್ಚು. ಆದ್ದರಿಂದ ಆರ್.ಟಿ.ಓ. ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಈಗಾಗಲೇ ಹಲವು ರಿಕ್ಷಾಗಳ ಟಿಂಟ್ ಗಳನ್ನು ತೆಗೆಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಿಕ್ಷಾಗಳು ಸ್ವಯಂಪ್ರೇರಿತರಾಗಿ ಇಂತಹ ಟಿಂಟ್ ಅಥವಾ ಬರಹಗಳನ್ನು ತೆಗೆಯಬೇಕು ಎನ್ನುವುದು ಕಾರ್ಯಾಚರಣೆಯ ಉದ್ದೇಶ.


ಸುರಕ್ಷಿತ ಚಾಲನೆ ನಿಮ್ಮದಾಗಲಿ:

ರಿಕ್ಷಾದ ಗಾಜಿಗೆ ಟಿಂಟ್ ಹಾಕುವುದು ಅಪಾಯಕಾರಿ. ಟಿಂಟ್ ಹಾಕುವುದು ತಪ್ಪು ಕೂಡ. ಆದ್ದರಿಂದ ದೃಷ್ಟಿಗೆ ಅಡ್ಡವಾಗುವಷ್ಟು ಗಾಜಿಗೆ ಟಿಂಟ್ ಹಾಕಿರುವ ರಿಕ್ಷಾಗಳಿಗೆ ದಂಡ ವಿಧಿಸಲು ಅವಕಾಶವಿದೆ. ಆದ್ದರಿಂದ ರಿಕ್ಷಾ ಚಾಲಕರು ಸ್ವಯಂಪ್ರೇರಿತರಾಗಿ ಇಂತಹ ಟಿಂಟ್ ಗಳನ್ನು ತೆಗೆದು, ಸುರಕ್ಷಿತ ಚಾಲನೆ ನಡೆಸಬೇಕು.

ವಿಶ್ವನಾಥ ಅಜಿಲ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪುತ್ತೂರು

ಹುಬ್ಬಳ್ಳಿಯಲ್ಲಿ ಅಯೋಧ್ಯಾ ಕರಸೇವಕರ ವಿರುದ್ಧ ಪ್ರಕರಣ: ಕಾಂಗ್ರೆಸ್ ಸರಕಾರದ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಸಂಘ ಪರಿವಾರದಿಂದ ಪ್ರತಿಭಟನೆ

Posted by Vidyamaana on 2024-01-03 21:52:57 |

Share: | | | | |


ಹುಬ್ಬಳ್ಳಿಯಲ್ಲಿ ಅಯೋಧ್ಯಾ ಕರಸೇವಕರ ವಿರುದ್ಧ ಪ್ರಕರಣ: ಕಾಂಗ್ರೆಸ್ ಸರಕಾರದ ವಿರುದ್ಧ ಹಿಂದೂ ಜಾಗರಣಾ ವೇದಿಕೆ  ಸಂಘ ಪರಿವಾರದಿಂದ  ಪ್ರತಿಭಟನೆ

ಪುತ್ತೂರು: ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೊಲೀಸ್‌ ಇಲಾಖೆಯ ವಿರುದ್ಧ ಹಾಗೂ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ಬುಧವಾರ ಇಲ್ಲಿನ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ಜ.3ರಂದು  ಬೃಹತ್ ಪ್ರತಿಭಟನೆ ನಡೆಯಿತು.

ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ರಾಮನ ಕೆಲಸ ಮಾಡುವವರನ್ನು ಹತ್ತಿಕ್ಕುವ


ಪ್ರಯತ್ನ ಸಿದ್ಧರಾಮಯ್ಯ ಸರಕಾರ ಮಾಡಿದರೆ ಲಂಕೆಯ ಉದಾಹರಣೆಯ ಮೂಲಕ ಸರಕಾರಕ್ಕೆ ಪ್ರತಿ ಉತ್ತರ ನೀಡಬೇಕಾಗಬಹುದು ಎಂದು  ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಏಜೆಂಟರ ಮೂಲಕ ಅಧಿಕಾರಿಗಳನ್ನು ನೇಮಿಸುವ ಕಾರ್ಯ ಒಂದೆಡೆಯಾದರೆ, ಇನ್ನೊಂದೆಡೆ ಅಲ್ಪಸಂಖ್ಯಾತರ ಓಟಿಗೋಸ್ಕರ ಹಿಂದೂಗಳನ್ನು, ರಾಮಭಕ್ತರನ್ನು ಧಮನಿಸುವ ಕಾರ್ಯ ನಡೆಸುತ್ತಿದೆ. ದೇಶದಲ್ಲಿ ರಾಮನ ನಾಡು ನಿರ್ಮಾಣವಾಗುತ್ತಿದೆಯೇ ಹೊರತು ರಾವಣನ ನಾಡು ನಿರ್ಮಾಣ ಆಗುತ್ತಿಲ್ಲ ಎಂಬುದನ್ನು ಸಿದ್ಧರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು. ರಾಷ್ಟ್ರ ಮಂದಿರ ನಿರ್ಮಾಣವಾಗುತ್ತಿರುವ ಈ ಕಾಲಘಟ್ಟದಲ್ಲಿ ಸಂಭ್ರಮದಿಂದ ಇರಬೇಕಾದ ಅಸಂಖ್ಯಾತ ಹಿಂದೂಗಳ ಮಾನಸಿಕ ಸ್ಥೆರ್ಯವನ್ನು ಕುಗ್ಗಿಸುವ ಕೆಲಸ ನಡೆಯುತ್ತಿದೆ. ಸಿದ್ಧರಾಮಯ್ಯನವರಿಗೆ ತಾಕತ್ತಿದ್ದರೆ ರಾಮರಾಜ್ಯ ನಿರ್ಮಾಣದ ಕನಸು ತಡೆಯಲಿ ಎಂದು ಸವಾಲು ಎಸೆದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕನಸು ನನಸಾಗುತ್ತಿರುವ ಸಂದರ್ಭದಲ್ಲಿ 32 ವರ್ಷಗಳ ಹಿಂದೆ ರಾಮ ಮಂದಿರಕ್ಕಾಗಿ ಹೋರಾಟ ಮಾಡಿದವರನ್ನು ಬಂಧಿಸುವ ಕೆಲಸ ಸಿದ್ದರಾಮಯ್ಯ ಸರಕಾರದಿಂದ ಆಗುತ್ತಿದೆ. ಈ ಮೂಲಕ ಹಿಂದೂಗಳ ಮಾನಸಿಕ ಧೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿರುವುದನ್ನು ನಾವು ಖಂಡಿಸುತ್ತೇವೆ. ಸೀತೆ ರಾಮನ ಜತೆಗೂಡಿ ರಾವಣನನ್ನು ಹೇಗೆ ಧ್ವಂಸ ಮಾಡಿದ್ದಾರೆ ಅದೇ ರೀತಿಯ ಉತ್ತರ ನೀಡಲು ಮಾತೆಯರು ಸೀತೆಯರಾಗಿ ಸರಕಾರವನ್ನು ಧ್ವಂಸ ಮಾಡಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.


ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಚಂದ್ರಶೇಖರ ರಾವ್‌ ಬಪ್ಪಳಿಗೆ ಮಾತನಾಡಿ, 30 ವರ್ಷಗಳ ಹಿಂದೆ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಹೋರಾಟವನ್ನು ನಡೆಸಿದ ರಾಮಭಕ್ತರ ಮೇಲೆ ಸಿದ್ದರಾಮಯ್ಯ ಸರಕಾರ ಪುನಃ ಕೇಸು ಹಾಕಿ ಬಂಧಿಸಲು ಮುಂದಾಗುತ್ತಿದ್ದು, ಇನ್ನಷ್ಟು ರಾಮಭಕ್ತರನ್ನು ಬಂಧನ ಮಾಡಲಿ. ಪರಿಣಾಮ ಹಿಂದೂ ಸಮಾಜಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂಬುದನ್ನು ಸಿದ್ಧರಾಮಯ್ಯ ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದ ಅವರು, 30 ವರ್ಷ ಅಯೋಧ್ಯೆಯ ಕರಸೇವೆಯಲ್ಲಿ ಪಾಲ್ಗೊಂಡ ವಿಚಾರವನ್ನು ಎಳೆ ಎಳೆಯಾಗಿ ತೆರೆದಿಟ್ಟರು.


ಪ್ರತಿಭಟನೆಯನ್ನುದ್ದೇಶಿಸಿ ಡಾ.ಸುರೇಶ್ ಪುತ್ತೂರಾಯ ಮಾತನಾಡಿದರು. ವಿಶ್ವ ಹಿಂದೂ ಪರಿಷತ್ ಮುಖಂಡ ಮೋಹನದಾಸ್‌ ಕಾಣಿಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರತಿಭಟನಾ ಸಭೆಯಲ್ಲಿ ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧ‌ರ್ ಜೈನ್, ಬಿಜೆಪಿ ಹಿರಿಯ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ರಾಜೇಶ್‌ ಬನ್ನೂರು, ರಾಧಾಕೃಷ್ಣ ಬೋರ್ಕರ್, ನಗರಸಭೆ ಸದಸ್ಯ ಜಗನ್ನಿವಾಸ ರಾವ್, ಆರ್.ಸಿ ನಾರಾಯಣ, ಶಶಿಕುಮಾ‌ರ್ ಬಾಲ್ಯೂಟ್ಟು, ಸತೀಶ್ ನಾಯ್ಕ, ವಿಹಿಂಪದ ಡಾ. ಪ್ರಸನ್ನ ಭಟ್, ಶ್ರೀಧರ್ ತೆಂಕಿಲ, ಸೀತಾರಾಮ ರೈ ಕೆದಂಬಾಡಿಗುತ್ತು,, ಮಹಿಳಾ ಬಿಜೆಪಿಯ ಗೌರಿ ಬನ್ನೂರು, ಜಯಶ್ರೀ ಶೆಟ್ಟಿ, ನಿಶಾಂತ್, ಮೀನಾಕ್ಷಿ ಶಾಂತಿಗೋಡು, ದೀಕ್ಷಾ ಪೈ, ಹರಿಣಿ ಪುತ್ತೂರಾಯ, ಸತೀಶ್ ಮತ್ತಿತರರು ಉಪಸ್ಥಿತರಿದ್ದರು. ಅಜಿತ್ ರೈ ಹೊಸಮನೆ ಸ್ವಾಗತಿಸಿದರು. ದಿನೇಶ್ ಪಂಜಿಗ ಕಾರ್ಯಕ್ರಮ ನಿರೂಪಿಸಿದರು.

NDA ಜೊತೆ JDS ಮೈತ್ರಿ : ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಣೆ

Posted by Vidyamaana on 2023-09-22 17:12:53 |

Share: | | | | |


NDA ಜೊತೆ JDS ಮೈತ್ರಿ : ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಣೆ

ನವದೆಹಲಿ : ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ (ಸೆಪ್ಟೆಂಬರ್ 22) ಗೃಹ ಸಚಿವ ಅಮಿತ್ ಶಾ ಅವರನ್ನ ಅವರ ನಿವಾಸದಲ್ಲಿ ಭೇಟಿಯಾದರು, ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಉಪಸ್ಥಿತರಿದ್ದರು. ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಸೀಟು ಹಂಚಿಕೆಯ ಬಗ್ಗೆ ಮೂವರು ನಾಯಕರು ಚರ್ಚಿಸಿದರು.ಸಭೆಯ ನಂತರ ಮಾತನಾಡಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, "ಜೆಡಿಎಸ್ ಎನ್ಡಿಎಗೆ ಸೇರ್ಪಡೆಯಾಗಿದೆ. ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನ ಭೇಟಿಯಾದೆ. ನಾವು ಅವರನ್ನ ಎನ್ಡಿಎಗೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ" ಎಂದರು.


ಇನ್ನು "ಇದು ಎನ್ಡಿಎ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತ, ಬಲವಾದ ಭಾರತದ ದೃಷ್ಟಿಕೋನವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದಿರುವ ನಡ್ಡಾ, ಅವರು ಸಭೆಯ ಫೋಟೋವನ್ನ ಸಹ ಹಂಚಿಕೊಂಡಿದ್ದಾರೆ.


ಮೈತ್ರಿ ಏಕೆ ಮುಖ್ಯ.?


ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಈ ವರ್ಷದ ಮೇ ತಿಂಗಳಲ್ಲಿ ನಡೆದ ವಿಧಾನಸಭಾಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿತ್ತು. ಅದೇ ಸಮಯದಲ್ಲಿ, ಬಿಜೆಪಿ ಅಧಿಕಾರವನ್ನ ಕಳೆದುಕೊಳ್ಳಬೇಕಾಯಿತು. ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿತ್ತು.


ಅಂತಹ ಪರಿಸ್ಥಿತಿಯಲ್ಲಿ, ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ಮೈತ್ರಿಯನ್ನು ಮುಖ್ಯವೆಂದು ಪರಿಗಣಿಸಲಾಗಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನವನ್ನು ಗೆದ್ದಿದ್ದವು.

ಚೈತ್ರಾ ಹಣ ಆಸ್ತಿ ಮುಟ್ಟುಗೋಲು: ಕೋಟ್ಯಂತರ ರೂ. ಸ್ವತ್ತು ಜಪ್ತಿ; ಮೂರು ಸ್ಥಳಗಳಲ್ಲಿ ಸಿಸಿಬಿ ಮಹಜರು

Posted by Vidyamaana on 2023-09-17 09:00:51 |

Share: | | | | |


ಚೈತ್ರಾ ಹಣ ಆಸ್ತಿ ಮುಟ್ಟುಗೋಲು: ಕೋಟ್ಯಂತರ ರೂ. ಸ್ವತ್ತು ಜಪ್ತಿ; ಮೂರು ಸ್ಥಳಗಳಲ್ಲಿ ಸಿಸಿಬಿ ಮಹಜರು

ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತೆ ಚೈತ್ರಾ ಕುಂದಾಪುರಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದೇ ವೇಳೆ ಮತ್ತೊಬ್ಬ ಆರೋಪಿ ಉಡುಪಿ ಜಿಲ್ಲೆಯ ಪ್ರಸಾದ್ ಬೈಂದೂರುನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸರ್ಚ್ ವಾರೆಂಟ್ ಪಡೆದು ಶೋಧನೆ ನಡೆಸಿದ ಸಿಸಿಬಿ ಪೊಲೀಸರು ಉಡುಪಿಯ ಉಪ್ಪೂರು ಶ್ರೀರಾಮ ಸೊಸೈಟಿಯ ಬ್ಯಾಂಕ್ ಲಾಕರ್​ನಲ್ಲಿ ಇಟ್ಟಿದ್ದ ಆಸ್ತಿ ಪತ್ರ, ಬಂಗಾರವನ್ನು ಪತ್ತೆ ಮಾಡಿದ್ದಾರೆ. 1.8 ಕೋಟಿ ರೂ. ಮೌಲ್ಯದ ಆಸ್ತಿ ಪತ್ರ, 40 ಲಕ್ಷ ನಗದು, 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಚೈತ್ರಾ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದಳು. ಅಲ್ಲದೆ ಶ್ರೀಕಾಂತ್ ಹೆಸರಲ್ಲಿ ಉಡುಪಿಯ ಹಿರಿಯಡ್ಕದಲ್ಲಿ ಎರಡು ಹಂತಸ್ತಿನ ಮನೆ ಕಟ್ಟಿಸುತ್ತಿದ್ದಳು. ಪ್ರಸಾದ್ ಬೈಂದೂರನ್ನು ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಸಿಸಿಬಿ ಪೊಲೀಸರು, ಆತನನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಮತ್ತೊಂದೆಡೆ ಚೈತ್ರಾ ಕುಂದಾಪುರ ಮತ್ತು ಪ್ರಸಾದ್ ಬೈಂದೂರು ಹಣದ ಡೀಲ್ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಮಾಜಿ ಸಚಿವರೊಬ್ಬರ ಹೆಸರು ಪ್ರಸ್ತಾಪವಾಗಿದೆ.


ಮೂರು ಕಡೆ ಸ್ಥಳ ಮಹಜರು: ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ ಕಚೇರಿ, ಗೋವಿಂದರಾಜನಗರದಲ್ಲಿರುವ ಸ್ವಾಮೀಜಿ ನಿವಾಸ, ಕೆ.ಕೆ.ಗೆಸ್ಟ್ ಹೌಸ್​ನ ಎರಡನೇ ಮಹಡಿಯಲ್ಲಿರುವ 207 ಸಂಖ್ಯೆ ರೂಮ್ ಅನ್ನು ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಗೋವಿಂದ ಬಾಬು ಪೂಜಾರಿ ಕಚೇರಿಯಲ್ಲಿ ಟಿಕೆಟ್ ಕೊಡಿಸುವ ಸಂಬಂಧ ಮೀಟಿಂಗ್ ನಡೆದಿದ್ದು, ಅಲ್ಲದೇ ಆರೋಪಿ ಗಗನ್ ಅಲ್ಲಿಂದಲೇ ಹಣ ತೆಗೆದುಕೊಂಡು ಹೋಗಿದ್ದ. ಹೀಗಾಗಿ ಅಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಗೋವಿಂದರಾಜನಗರ ನಿವಾಸದಲ್ಲಿ ಸ್ವಾಮೀಜಿ ಒಂದೂವರೆ ಕೋಟಿ ರೂ. ಪಡೆದಿದ್ದರು ಎನ್ನಲಾಗಿದೆ. ಜತೆಗೆ ಕೆ.ಕೆ.ಗೆಸ್ಟ್ ಹೌಸ್​ನಲ್ಲಿ ಹಲವು ಬಾರಿ ಮೀಟಿಂಗ್ ನಡೆದಿತ್ತು. ಇನ್ನು ಮತ್ತೊಬ್ಬ ಆರೋಪಿ ಚೆನ್ನಾನಾಯ್್ಕ ಚುನಾವಣಾ ಸಮಿತಿ ಸದಸ್ಯ ಎಂದು ಭೇಟಿಯಾಗಿದ್ದು, ಇಲ್ಲಿಯೇ. ಹೀಗಾಗಿ ಮೂರು ಕಡೆಗಳಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸ್ವಾಮೀಜಿ ನಿವಾಸ ಮತ್ತು ಮಠ ಸೇರಿ ಹಲವು ಕಡೆ ಮಹಜರು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ಮಠ ಸೇರಿ ಹಲವು ಕಡೆ ಮಹಜರು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ಉಡುಪಿಯಲ್ಲಿ ಎರಡು ಅಂತಸ್ತಿನ ಮನೆ: ಚೈತ್ರಾ ಕುಂದಾಪುರ ಹಿರಿಯಡ್ಕದಲ್ಲಿ 20 ಸೆಂಟ್ಸ್ ಜಾಗ ಖರೀದಿಸಿ ಮನೆ ಕಟ್ಟಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಗೆಳೆಯ ಶ್ರೀಕಾಂತ್ ನಾಯಕ್ ಹೆಸರಿನಲ್ಲಿ ಸೆಂಟ್ಸ್​ಗೆ 50 ಸಾವಿರ ರೂ. ನೀಡಿ ಜಾಗ ಖರೀದಿಸಲಾಗಿದ್ದು, ಎರಡು ಅಂತಸ್ತಿನ ಮನೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದನೇ ಅಂತಸ್ತಿನ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.


ಆಸ್ಪತ್ರೆಯಿಂದ ಡಿಸ್ಚಾರ್ಜ್: ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆರೋಗ್ಯ ಸುಸ್ಥಿತಿಯಲ್ಲಿದೆ. ಎಂಆರ್​ಐ ಮತ್ತು ಇಸಿಜಿ ವರದಿ ನಾರ್ಮಲ್ ಆಗಿದ್ದು, ಆಸ್ಪತ್ರೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ಬಿಎಂಆರ್​ಸಿಎಲ್​ನ ಡೀನ್ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ತಿಳಿಸಿದ್ದಾರೆ. ಸಿಸಿಬಿ ಪೊಲಿಸರ ವಶದಲ್ಲಿದ್ದ ಚೈತ್ರಾ ಕುಂದಾಪುರ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆದಾಖಲಿಸಲಾಗಿತ್ತು.

ಉದ್ಯಮಿ ವಿರುದ್ಧವೇ ದೂರು: ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಸ್ವಾಮೀಜಿ ದೂರು ನೀಡಿದ್ದಾರೆ. ಗೋವಿಂದಬಾಬು, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್, ಉಡುಪಿ ಜಿಲ್ಲೆ ಬೈಂದೂರಿನ ದಿನೇಶ್ ನಾಯ್್ಕೊಳೆ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ.11ರಂದು ದೂರು ನೀಡಿದ್ದರು. ಸ್ವಾಮೀಜಿ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದಾರೆ. ಈ ಮಧ್ಯೆ ಸ್ವಾಮೀಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಸ್ವಾಮೀಜಿ ಸುಳಿವು ಪತ್ತೆಯಾಗುವ ಸಾಧ್ಯತೆಯಿದೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ:

ಪ್ರಕರಣದ ಎ3 ಆರೋಪಿ ಸ್ವಾಮೀಜಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಲಾಗಿದೆ. ಸ್ವಾಮೀಜಿ ಪರ ವಕೀಲ ಅರುಣ್ ಶ್ಯಾಮ್ ವಂಚನೆ ಪ್ರಕರಣದಲ್ಲಿ ಸ್ವಾಮೀಜಿ ವಿರುದ್ಧ ಯಾವುದೇ ಆರೋಪವಿಲ್ಲ. ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಸ್ವಾಮೀಜಿಗೆ ಜಾಮೀನು ನೀಡದಂತೆ ಗೋವಿಂದಬಾಬು ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.


ವಿಶೇಷ ತಂಡದಿಂದ ತನಿಖೆ: ಚೈತ್ರಾ ಕುಂದಾಪುರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಇಂದಿರಾ ಕ್ಯಾಂಟಿನ್ ಬಾಕಿ ಬಿಲ್ ಬಗ್ಗೆ ಸಿಸಿಬಿ ವಿಶೇಷ ತಂಡ ತನಿಖೆ ಕೈಗೊಂಡಿದೆ. ಸಿಸಿಬಿ ಕಚೇರಿಗೆ ವಿಚಾರಣೆಗೆ ಆಗಮಿಸಿದ ಸಂದರ್ಭದಲ್ಲಿ ಇಂದಿರಾ ಕ್ಯಾಂಟಿನ್ ಬಾಕಿ ಬಿಲ್ ಬಗ್ಗೆ ಚೈತ್ರಾ ಆರೋಪ ಮಾಡಿದ್ದರು. ಬಾಕಿ ಬಿಲ್ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಶೇಷ ತಂಡ ರಚಿಸಿದ್ದು, ಮಾಹಿತಿ ಕಲೆ ಹಾಕಲು ಮುಂದಾದ ತಂಡ ಪಾಲಿಕೆಯ ಹಿರಿಯ ಅಧಿಕಾರಿಗಳ ಬಳಿ ಮಾಹಿತಿ ಸಂಗ್ರಹಿಸಿದೆ. ಜತೆಗೆ ಇಂದಿರಾ ಕ್ಯಾಂಟಿನ್ ಬಿಲ್ ಬಿಡುಗಡೆ ಮಾಡುವ ಅಧಿಕಾರಿಗಳ ಕಾಲ್ ಡೀಟೈಲ್ಸ್ ಕೂಡ ಕಲೆ ಹಾಕಿದ್ದಾರೆ. ಗೋವಿಂದಬಾಬು ಪೂಜಾರಿಗೆ ಸೇರಿದ ಕ್ಯಾಂಟಿನ್ ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಗೋವಿಂದಬಾಬು ಎಷ್ಟು ವರ್ಷಗಳಿಂದ ಕ್ಯಾಂಟಿನ್​ಗಳಿಗೆ ಊಟ ಸರಬರಾಜು ಮಾಡುತ್ತಿದ್ದಾರೆ. ಇದುವರೆಗೂ ಇವರಿಗೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ? ಕಳೆದ ಎರಡು ವರ್ಷಗಳಿಂದ ಎಷ್ಟು ಹಣ ಬಾಕಿ ನೀಡಬೇಕಿತ್ತು.ಮೂರು ತಿಂಗಳಲ್ಲಿ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ? ಎಂಬುದು ಸೇರಿ ಕ್ಯಾಂಟಿನ್​ಗೆ ಸಂಬಂಧಿಸಿದಂತೆ ಹಲವಾರು ವಿಷಯಗಳ ಬಗ್ಗೆ ಸಿಸಿಬಿ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಬಿಂದು ಫ್ಯಾಕ್ಟರಿಗೆ ಭೇಟಿ

Posted by Vidyamaana on 2023-04-25 16:26:51 |

Share: | | | | |


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಬಿಂದು ಫ್ಯಾಕ್ಟರಿಗೆ ಭೇಟಿ

ಪುತ್ತೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಪ್ರತಿಷ್ಠಿತ ನರಿಮೊಗರಿನಲ್ಲಿರುವ ಬಿಂದು ಫ್ಯಾಕ್ಟರಿಗೆ ಮಂಗಳವಾರ ಭೇಟಿ ನೀಡಿದರು.

ಬಿಂದು ಫ್ಯಾಕ್ಟರಿಯ ಪ್ರಮುಖರು ಹಾಗೂ ಸಿಬ್ಬಂದಿಗಳೊಂದಿಗೆ ಮಾತನಾಡಿ ಫ್ಯಾಕ್ಟರಿಯ ಕಾರ್ಯಚಟುವಟಿಕೆ ಕುರಿತು ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು

ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ ಸ್ವಗ್ರಾಮದ ಬೂತಲ್ಲಿ ಶಾಸಕರಿಂದ ಭರ್ಜರಿ ಪ್ರಚಾರ

Posted by Vidyamaana on 2024-04-24 14:13:44 |

Share: | | | | |


ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ ಸ್ವಗ್ರಾಮದ ಬೂತಲ್ಲಿ ಶಾಸಕರಿಂದ ಭರ್ಜರಿ ಪ್ರಚಾರ

ಪುತ್ತೂರು: ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನದಂತೆ ಶಾಸಕರಾದ ಅಶೋಕ್ ರೈ ಅವರು ತನ್ನ ಸ್ವ ಗ್ರಾಮದ ಬೂತ್ ನಂ: 53 ರಲ್ಲಿ ಭರ್ಜರಿ ಚುನಾವಣಾ ಪ್ರಚಾರ ಕಾರ್ಯ ನಡೆಸಿದರು.



Leave a Comment: