ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಸುದ್ದಿಗಳು News

Posted by vidyamaana on 2024-06-30 19:31:43 |

Share: | | | | |


ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ

ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

 Share: | | | | |


ಅಶ್ಲೀಲ ವಿಡಿಯೋ ಪ್ರಕರಣ :ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ!!!

Posted by Vidyamaana on 2024-05-05 10:27:50 |

Share: | | | | |


ಅಶ್ಲೀಲ ವಿಡಿಯೋ ಪ್ರಕರಣ :ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ!!!

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ ದುಬೈನ ಅಪಾರ್ಟ್ ಮೆಂಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಸದ್ಯ ದುಬೈನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಪಾರ್ಟ್ಮೆಂಟ್ ಒಂದರಲ್ಲಿ ವಾಸ್ತವ ಹೂಡಿದ್ದಾರೆ.ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿದುಬಂದಿದೆ.ರಾತ್ರಿ ಬೆಂಗಳೂರಿಗೆ ಬಂದು ನಾಳೆ ಎಸ್‌ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

Posted by Vidyamaana on 2023-08-02 23:19:34 |

Share: | | | | |


ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಲ್ಲಿ ಆ.3ರಂದು ಗುರುವಾರ ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಪ್ರೈವೇಟ್ ಬಸ್ ಸ್ಟಾಂಡ್, ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್, ನೆಲ್ಲಿಕಟ್ಟೆ, ಎಳ್ಳುಡಿ ಮತ್ತು ಕಲ್ಲಾರೆ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಉತ್ತಪ್ಪ ಆತ್ಮಹತ್ಯೆ

Posted by Vidyamaana on 2024-01-04 12:08:49 |

Share: | | | | |


ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಉತ್ತಪ್ಪ ಆತ್ಮಹತ್ಯೆ

ಬೆಂಗಳೂರು, ಜ.4: ಎದೆಗೆ ಗುಂಡು ಹಾರಿಸಿಕೊಂಡು ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭವಾನಿ ನಗರದಲ್ಲಿ ನಡೆದಿರುವುದು ವರದಿಯಾಗಿದೆ.

ಕೊಡಗು ಮೂಲದ ತಮ್ಮಯ್ಯ ಎಂಬವರ ಪುತ್ರ ವಿಶು ಉತ್ತಪ್ಪ(19) ಆತ್ಮಹತ್ಯೆ ಮಾಡಿಕೊಂಡ .  ಬಿಇ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದರು.


ಖಾಸಗಿ ಕಂಪೆನಿಯೊಂದರಲ್ಲಿ ಭದ್ರತಾ 3 ಸಿಬ್ಬಂದಿಯಾಗಿರುವ ತಂದೆಯ ಗನ್ನಿಂದ ಎದೆಭಾಗಕ್ಕೆ ಗುಂಡು ಹಾರಿಸಿಕೊಂಡು ವಿಶು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ವಿಶು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.


ತಮ್ಮಯ್ಯರ ಕುಟುಂಬ ಕಳೆದ 15 ವರ್ಷಗಳಿಂದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭವಾನಿ ನಗರದಲ್ಲಿ ವಾಸವಿದೆ.


ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ

Posted by Vidyamaana on 2023-04-26 11:44:07 |

Share: | | | | |


ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ

 ಬೆಳ್ತಂಗಡಿ :ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ಇವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರಆರಿಕೋಡಿಗೆ ಬಂದು ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಗಳ ಆಶೀರ್ವಾದವನ್ನು ಪಡೆದುಕೊಂಡರು.

ಪುತ್ತೂರು, ಅಧಿಕಾರಿಗಳ ಯಡವಟ್ಟಿನಿಂದಾಗಿ ಕೆಲಸದಿಂದಲೇ ವಜಾ ಆದ ಅರಣ್ಯಾಧಿಕಾರಿ

Posted by Vidyamaana on 2023-08-12 01:29:15 |

Share: | | | | |


ಪುತ್ತೂರು, ಅಧಿಕಾರಿಗಳ ಯಡವಟ್ಟಿನಿಂದಾಗಿ ಕೆಲಸದಿಂದಲೇ ವಜಾ ಆದ ಅರಣ್ಯಾಧಿಕಾರಿ

ಪುತ್ತೂರು; ಅಧಿಕಾರಿಗಳ ಯಡವಟ್ಟಿನಿಂದಾಗಿ ಅರಣ್ಯಾಧಿಕಾರಿ ಕೆಲಸದಿಂದಲೇ ವಜಾ ಆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಜಾಗೊಂಡಿರುವವರು.


ಕಳೆದ ಏಳು ತಿಂಗಳ ಹಿಂದೆ ಸಂಜೀವ ಪೂಜಾರಿ ಅವರು ಸಾಮಾಜಿಕ ಜಾಲತಾಣದಲ್ಲಿ ಭಜನೆ ಕುರಿತು ಧರ್ಮ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ ಅವರನ್ನು ಅಮಾನತು ಮಾಡಿ ಅದೇಶ ಹೊರಡಿಸಲಾಗಿತ್ತು. ಈ ಬಗ್ಗೆ ಸಂಜೀವ ಪೂಜಾರಿ ಕೆಎಸ್ಎಟಿನಲ್ಲಿ ಅಮಾನತಿನ ಬಗ್ಗೆ ಪ್ರಶ್ನಿಸಿ ನ್ಯಾಯ ದೊರಕಿಸುವಂತೆ ಅವರು ಮನವಿ ಮಾಡಿದ್ದರು.


ಆಡಳಿತ ನ್ಯಾಯಾಧೀಕರಣ ಮಂಡಳಿಯಲ್ಲಿ ಸಂಜೀವ ಪೂಜಾರಿಗೆ ನ್ಯಾಯ ದೊರಕಿತ್ತು.ಆದರೆ ಮಂಡಳಿಯ ಆದೇಶ ಪ್ರತಿಯನ್ನ ತಪ್ಪಾಗಿ ಅರ್ಥೈಸಿದ ಕಾರಣ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ. ಆದೇಶ ಪ್ರತಿಯಲ್ಲಿ ಸಂಜೀವ ಪೂಜಾರಿಯವರ ಪ್ರಕರಣ ವಜಾಗೊಂಡಿದೆ ಎಂದು ನಮೂದಾಗಿತ್ತು. ಆದರೆ ಅರಣ್ಯಾಧಿಕಾರಿಗಳು ಪ್ರಕರಣವನ್ನು ವಜಾ ಮಾಡುವ ಬದಲು ಸಂಜೀವ ಪೂಜಾರಿ ಅವರನ್ನೇ ಕೆಲಸದಿಂದ ವಜಾ ಮಾಡಿ ಎಂದು ಆದೇಶದಲ್ಲಿ ಬರೆಯಲಾಗಿದೆ ಎಂದು ತಪ್ಪಾಗಿ ಅರ್ಥ ಮಾಡಿಕೊಂಡು ಯಡವಟ್ಟು ಮಾಡಿದ್ದಾರೆ

ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಆರೋಪಿಗೆ ಜಾಮೀನು

Posted by Vidyamaana on 2023-12-06 21:25:29 |

Share: | | | | |


ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಆರೋಪಿಗೆ ಜಾಮೀನು

ಪುತ್ತೂರು: ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು, ಅಪಹರಿಸಿ, ನಂತರ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ ಕಡಬದ  ಯಜ್ಞೇಶ್ ಎಂಬವರಿಗೆ  ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಘಟನೆಯ ಹಿನ್ನಲೆ :

ದಿನಾಂಕ 10/10/2020 ರಂದು ಬೆಳಿಗ್ಗೆ 07:30 ಗಂಟೆಗೆ ಅಪ್ರಾಪ್ತ ಬಾಲಕಿಯು ತನ್ನ ಮನೆಯಿಂದ ಹೊರಡುವಾಗ ತನಗೆ ಇನ್ನು ಮೂರು ದಿನ ವಿಶೇಷ ತರಗತಿಯಿದ್ದು, ಬೊಳುವಾರಿನ  ತನ್ನ ಗೆಳತಿಯ ಮನೆಗೆ ಹೋಗಿ ಶುಕ್ರವಾರದಂದು ಸಂಜೆ ಮನೆಗೆ ಬರುವುದಾಗಿ ತಿಳಿಸಿ ಕಾಲೇಜಿಗೆ ಹೋಗಿರುತ್ತಾಳೆ. ಬಳಿಕ ಅಪ್ರಾಪ್ತ ಬಾಲಕಿಯು ಮನೆಗೆ ಫೋನ್ ಮಾಡದೆ ಇರುವುದರಿಂದ, ಅವಳ ಸ್ನೇಹಿತೆಯಲ್ಲಿ ವಿಚಾರಿಸಿದಾಗ, ಅವಳು ಸ್ನೇಹಿತೆಯ ಮನೆಗೆ ಹೋಗದೆ ಇರುವುದನ್ನು ತಿಳಿದು, ನಂತರ  ಕಾಲೇಜಿನಲ್ಲಿ ವಿಚಾರಿಸಿದಾಗ, ಮಧ್ಯಾಹ್ನದವರೆಗೆ ಕಾಲೇಜಿಗೆ ಬಂದು ನಂತರ ಬಂದಿರುವುದಿಲ್ಲ ಎಂಬುದನ್ನು ತಿಳಿದು, ಅಪ್ರಾಪ್ತ ಬಾಲಕಿಯ ತಂದೆಯು  ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನಂತೆ ಪೊಲೀಸರು  ಭಾರತೀಯ ದಂಡ ಸಂಖ್ಯೆಯ ಕಲಂ 363 ರಂತೆ ಪ್ರಕರಣ ದಾಖಲಿಸಿದ್ದರು. ಈ ನಡುವೆ ಅಪ್ರಾಪ್ತ ಬಾಲಕಿಯು ತನ್ನ ತಂದೆಯೊಂದಿಗೆ ದಿನಾಂಕ 13/10/2023 ರಂದು ಪೊಲೀಸ್ ಠಾಣೆಗೆ ಹಾಜರಾಗಿ ಆರೋಪಿಯನ್ನು ಕಳೆದ ಮೂರು ತಿಂಗಳಿನಿಂದ ಪ್ರೀತಿಸುತ್ತಿದ್ದು, ದಿನಾಂಕ 10 /10 /2023 ರಂದು ಮಡಿಕೇರಿಗೆ ಹೋಗಿ ಅಲ್ಲಿ ಆರೋಪಿಯ  ಅತ್ತೆ ಮನೆಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿರುವುದಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಈ ಆಧಾರದಲ್ಲಿ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ ಕಾಯಿದೆಯ ಕಲಂ 4ರನ್ವಯ ಪ್ರಕರಣ ದಾಖಲಿಸಿ, ತದನಂತರ ತನಿಖೆ ಮುಂದುವರಿಸಿ, ಆರೋಪಿಯನ್ನಲಾಗಿದ್ದ  ಯಜ್ಞೆಶ್ ರವರನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದರು.


    ಆರೋಪಿಯು ತನ್ನ ಪರ ವಕೀಲರಾದ ಕಜೆ ಲಾ ಚೇಂಬರ್ಸ್ ನ  ಶ್ರೀ ಮಹೇಶ್ ಕಜೆ ಅವರ ಮುಖಾಂತರ   ಜಾಮೀನು ಕೋರಿ ಅರ್ಜಿ   ಸಲ್ಲಿಸಿದ್ದರು. ವಾದ -ವಿವಾದವನ್ನು ಆಲಿಸಿದ ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕಾಂತರಾಜು ಎಸ್ ವಿ ರವರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.



Leave a Comment: