ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಸುದ್ದಿಗಳು News

Posted by vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಸೋಮವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ. ತಕ್ಷಣವೇ ಸಮೀಪದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 Share: | | | | |


ಪುತ್ತೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ

Posted by Vidyamaana on 2023-04-27 09:39:41 |

Share: | | | | |


ಪುತ್ತೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ

ಪುತ್ತೂರು : ಪುತ್ತೂರು ನಗರ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ  ರವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಂಬಿ ವಿಶ್ವನಾಥ ರೈ ಯವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ರೈ ಯವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಿದ್ದಾರೆ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 10

Posted by Vidyamaana on 2023-09-10 05:57:57 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 10

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 10 ರಂದು


8.45 ಕ್ಕೆ ಪೆರುವಾಯಿ ಫಾತಿಮಾ ಮಾತೆಯ ದೇವಾಲಯ ಸಭಾಭವನ ಶಿಲ್ಯಾನಾಸ, ಸನ್ಮಾನ



11 ಗಂಟೆ ಮೂಡಬಿದ್ರೆ ದ ಕ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆ


4.30 ಕ್ಕೆ ಮಹಿಷಮರ್ಧಿನಿ ದೇವಸ್ಥಾನ ಕೋಡಿಂಬಾಡಿಯಲ್ಲಿ ಸಭೆ


5.30 ಯುವ ಶಕ್ತಿ ಗೆಳೆಯರ ಬಳಗದ ವತಿಯಿಂದ ಕೋಡಿಂಬಾಡಿ ಶಾಲೆಯಲ್ಲಿ‌ ಅಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಏ. 19ರಂದು (ಇಂದು ) ಜೈಲಿನಿಂದಲೇ SDPI ಅಭ್ಯರ್ಥಿ ಯಾಗಿ ಶಾಫಿ ನಾಮಪತ್ರ ಸಲ್ಲಿಕೆ

Posted by Vidyamaana on 2023-04-18 14:30:38 |

Share: | | | | |


ಏ. 19ರಂದು (ಇಂದು ) ಜೈಲಿನಿಂದಲೇ SDPI ಅಭ್ಯರ್ಥಿ ಯಾಗಿ ಶಾಫಿ ನಾಮಪತ್ರ ಸಲ್ಲಿಕೆ

ಪುತ್ತೂರು: ಎಸ್.ಡಿ.ಪಿ.ಐ. ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಏ. 19ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಯೇ ಇರುವುದಿಲ್ಲ ಎನ್ನುವುದೇ ಇಲ್ಲಿನ‌ ವಿಶೇಷ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಫಿ ಬೆಳ್ಳಾರೆ, ಪುತ್ತೂರು ಎಸ್.ಡಿ.ಪಿ.ಐ. ಅಭ್ಯರ್ಥಿ.   ಶಾಫಿ ಬೆಳ್ಳಾರೆ ಯವರ ಪರವಾಗಿ ಎಲೆಕ್ಷನ್ ಏಜೆಂಟ್ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಲಿದ್ದಾರೆ.

    ಈ ಸಂದರ್ಭದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರುಗಳಾದ  ರಿಯಾಜ್ ಪರಂಗಿಪೇಟೆ, ಅಲ್ಪಾನ್ಸ್ ಫ್ರಾಂಕೋ, ಅಬ್ದುಲ್ ಲತೀಫ್, ಅಬ್ದುಲ್ ಮಜೀದ್, ರಿಯಾಜ್ ಕಡಂಬು, ಅನ್ವರ್ ಸಾದಾತ್, ಇಬ್ರಾಹಿಂ ಸಾಗರ್ ಮೊದಲಾದವರು ಆಗಮಿಸಲಿದ್ದಾರೆ.

    ಎಪಿಎಂಸಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಕಾಲ್ನಡಿಗೆ ಮೆರವಣಿಗೆ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ತಿಳಿದು ಬಂದಿದೆ.

ಜುಲೈ 29 : ಶ್ರೀರಾಮ್ ನಿಂದ ಬೃಹತ್ ಮೇಳ

Posted by Vidyamaana on 2023-07-28 16:19:22 |

Share: | | | | |


ಜುಲೈ 29 : ಶ್ರೀರಾಮ್ ನಿಂದ ಬೃಹತ್ ಮೇಳ

ಪುತ್ತೂರು: ಶ್ರೀರಾಮ್ನಲ್ಲಿ ಜುಲೈ 29ರಂದು ಎಲ್ಲಾ ಮಾದರಿಯ ವಾಹನಗಳ ಖರೀದಿ ಹಾಗೂ ಮಾರಾಟದ ಬೃಹತ್ ಮೇಳ ನಡೆಯಲಿದೆ.

ಪುತ್ತೂರಿನ ನೆಹರುನಗರ ಮಾಸ್ಟರ್ ಪ್ಲಾನರಿ ಬಳಿಯ ಎಸ್.ಆರ್. ರೋಡಿನ ನಂದಾದೀಪ ಶಾರದಾ ಯಾರ್ಡಿನಲ್ಲಿ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳಕ್ಕೆ ಪೂರಕ ಎಂಬಂತೆ ಶ್ರೀರಾಮ್ ಫೈನಾನ್ಸ್ ಸಂಸ್ಥೆ ವತಿಯಿಂದ ಸಾಲ ಸೌಲಭ್ಯದ ವ್ಯವಸ್ಥೆಯೂ ಇದೆ ಎಂದು ಪ್ರಕಟಣೆ ತಿಳಿಸಿದೆ.ಹೆಚ್ಚಿನ ವಿವರಗಳಿಗೆ ಈ ನಂಬರ್ ನ್ನು ಸಂಪರ್ಕಿಸಿ


 Kaushik - 9008920180, Sudhakar -96864 31133 Lakshmikanth-8073143248, Raksha -8448997061

Anil kumar -9845341253

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು; ಮೂರು ತಿಂಗಳಲ್ಲಿ ಮೂರನೇ ಸಾವು

Posted by Vidyamaana on 2023-05-09 13:30:27 |

Share: | | | | |


ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು; ಮೂರು ತಿಂಗಳಲ್ಲಿ ಮೂರನೇ ಸಾವು

ಭೋಪಾಲ್: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಹೆಣ್ಣು ಚೀತಾ ದಕ್ಷ ಉದ್ಯಾನವನದೊಳಗೆ ಇತರ ಚೀತಾಗಳೊಂದಿಗೆ ಕಾದಾಟದಲ್ಲಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.ಮೂಲಗಳ ಪ್ರಕಾರ, ಪುರುಷ ಚೀತಾಗಳೊಂದಿಗಿನ ಗಲಾಟೆಯಲ್ಲಿ ದಕ್ಷ ಚೀತಾ ಸಾವನ್ನಪ್ಪಿದೆ. ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಚೀತಾಗಳನ್ನು ತಂದ ನಂತರ ಕುನೋದಲ್ಲಿ ಸಾವನ್ನಪ್ಪಿದ ಮೂರನೇ ಚೀತಾ ಇದಾಗಿದೆ.ಕಳೆದ ವರ್ಷದಿಂದ ಇಪ್ಪತ್ತು ಚೀತಾಗಳನ್ನು ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗಿದ್ದು, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಎರಡು ಚೀತಾಗಳು ಸಾವನ್ನಪ್ಪಿವೆ.ಸಶಾ ಎಂಬ ಹೆಸರಿನ ಚೀತಾ ಭಾರತಕ್ಕೆ ಕರೆತರುವ ಮೊದಲು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿತ್ತು. ಎಪ್ರಿಲ್‌ನಲ್ಲಿ ಎರಡನೇ ಚೀತಾಉದಯ್ ರಾಷ್ಟ್ರೀಯ ಉದ್ಯಾನವನದಲ್ಲಿ ಅಸ್ವಸ್ಥಗೊಂಡಿದ್ದು ಚಿಕಿತ್ಸೆ ವೇಳೆ ಸಾವನ್ನಪ್ಪಿತ್ತು.ಇಂದು ಮುಂಜಾನೆ, ಕೇಂದ್ರ ಪರಿಸರ ಸಚಿವಾಲಯವು ಜೂನ್‌ ನಲ್ಲಿ ಮಾನ್ಸೂನ್ ಪ್ರಾರಂಭವಾಗುವ ಮೊದಲು ಐದು ಚೀತಾಗಳನ್ನು (ಮೂರು ಹೆಣ್ಣು ಮತ್ತು ಎರಡು ಗಂಡು) ಕ್ವಾರಂಟೈನ್ ನಿಂದ ಶಿಬಿರಗಳಿಂದ ಕುನೋ ರಾಷ್ಟ್ರೀಯ ಉದ್ಯಾನವನದ ಮುಕ್ತ ಪರಿಸ್ಥಿತಿಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ.

ಉಜಿರೆ ಬಸ್ಸಿನಲ್ಲಿ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದಕೆ ಯುವಕನಿಗೆ ಹಲ್ಲೆನಡೆಸಿದ ತಂಡ

Posted by Vidyamaana on 2023-04-04 22:43:37 |

Share: | | | | |


ಉಜಿರೆ ಬಸ್ಸಿನಲ್ಲಿ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದಕೆ ಯುವಕನಿಗೆ ಹಲ್ಲೆನಡೆಸಿದ ತಂಡ

ಬೆಳ್ತಂಗಡಿ: ಯುವತಿಯೊಬ್ಬಳೊಂದಿಗೆ ಬಸ್ಸಿನಲ್ಲಿ ಮಾತನಾಡಿದ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ಎ.4ರಂದು ನಡೆದಿದೆ. ಕಕ್ಕಿಂಜೆ ನಿವಾಸಿ ಸಾಹಿಲ್(22.ವ)ಹಲ್ಲೆಗೊಳಗಾದ ಯುವಕ.ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಸಾಹಿಲ್ ಇಂದು ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಬಸ್ಸಿನಿಂದ ಇಳಿದಿದ್ದಾಳೆ.ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದೀಗ ಹಲ್ಲೆಗೆ ಒಳಗಾಗಿರುವ ಸಾಹಿಲ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದು,

ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.



Leave a Comment: