ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ನಗರಸಭೆಯಲ್ಲಿ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬಕ್ಕೆ ಕ್ರಮ !

Posted by Vidyamaana on 2023-01-12 09:34:36 |

Share: | | | | |


ನಗರಸಭೆಯಲ್ಲಿ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬಕ್ಕೆ ಕ್ರಮ !

ಪುತ್ತೂರು: ನಗರಸಭೆಯಲ್ಲಿ ಅರ್ಜಿಗಳು ಯಾವುದೇ ಪೆಂಡಿಂಗ್ ಇಲ್ಲ. ನಾನು ಪೌರಾಯುಕ್ತರು ಪ್ರತಿ ಸೋಮವಾರ ಅಧಿಕಾರಿ, ಸಿಬ್ಬಂದಿಗಳ ಸಭೆ ನಡೆಸಿ ಯಾವ ಯಾವ ಪೈಲ್ ಪೆಂಡಿಂಗ್ ಇದೆ. ಯಾಕೆ ಪೆಂಡಿಂಗ್ ಇದೆ ಎಂದು ಪರಿಶೀಲನೆ ನಡೆಸುತ್ತೇವೆ. ಒಂದು ವೇಳೆ ಅರ್ಜಿಗಳ ವಿಲೇವಾರಿ ವಿಳಂಬವಾದಲ್ಲಿ ಪೌರಾಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಹೇಳಿದರು.

 

 

ನೇಣು ಬಿಗಿದ ಸ್ಥಿತಿಯಲ್ಲಿ ಆರ್ಶಿಯ ಬಾನು ಮೃತದೇಹ ಪತ್ತೆ; ಪತಿಯ ವಿರುದ್ಧ ದೂರು

Posted by Vidyamaana on 2023-07-12 01:43:28 |

Share: | | | | |


ನೇಣು ಬಿಗಿದ ಸ್ಥಿತಿಯಲ್ಲಿ ಆರ್ಶಿಯ ಬಾನು ಮೃತದೇಹ ಪತ್ತೆ; ಪತಿಯ ವಿರುದ್ಧ ದೂರು

ಹಾಸನ, ಜು.11: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಮೈಸೂರಿನ ಎನ್.ಆರ್.ಮೊಹಲ್ಲಾದ ಮನೆಯೊಂದರಲ್ಲಿ ಪತ್ತೆಯಾಗಿದರುವುದು ವರದಿಯಾಗಿದೆ.


ಮೃತರನ್ನು ಹಾಸನದ ಮೆಹಬೂಬ್ ನಗರ ಇದ್ದಾ ನಿವಾಸಿ ಅರ್ಶಿಯ ಬಾನು (27) ಎಂದು ಗುರುತಿಸಲಾಗಿದೆ. ಇವರನ್ನು ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮದ ನಿವಾಸಿ ತಝ್ ಅಲಿ(35)ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ 1 ವರ್ಷ 6 ತಿಂಗಳಿನ ಒಂದು ಮಗು ಇದೆ ಎಂದು ತಿಳಿದು ಬಂದಿದೆ.

ಅರ್ಶಿಯ ಬಾನುಗೆ ಪತಿ ತಬ್ರೇಝ್ ಅಲಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಈತನಿಗೆ ಮದುವೆಯಲ್ಲಿ ವರದಕ್ಷಿಣೆ ರೂಪದಲ್ಲಿ ಕಾರು, ಹಣ, ಚಿನ್ನವನ್ನು ಎಲ್ಲವನ್ನೂ ಕೊಟ್ಟಿದ್ದರೂ ನನ್ನ ಪುತ್ರಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪೋಷಕರು ಎನ್.ಆರ್.ಮೊಹಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಲ್ನಾಡು :ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ವಂಶಿ ಮೃತ್ಯು

Posted by Vidyamaana on 2023-06-02 23:10:05 |

Share: | | | | |


ಬಲ್ನಾಡು :ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ವಂಶಿ ಮೃತ್ಯು

ಪುತ್ತೂರು:ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ. ಬಲ್ನಾಡು ಬಂಗಾರಡ್ಕ ನಿವಾಸಿ ವಿದ್ಯಾರ್ಥಿನಿಯೊಬ್ಬರು ಜೂ.2ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಬಲ್ನಾಡು ಬ೦ಗಾರಡ್ಕ ದಿ.ಕಮಲಾಕ್ಷ ಅವರ ಪತ್ರಿ ವಂತಿ ಬಿ.ಕೆ (17ವ)ಮೃತಪಟ್ಟವರು.ಅವರು ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು.ಈ ನಡುವೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು.ಈ ನಡುವೆ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತರು ತಾಯಿ ಬಿ.ಎಸ್ ಜಯಲತಾ ಮತ್ತು ಸಹೋದರನನ್ನು ಅಗಲಿದ್ದಾರೆ.

ಉಳ್ಳಾಲ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ

Posted by Vidyamaana on 2023-09-29 20:51:37 |

Share: | | | | |


ಉಳ್ಳಾಲ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ

ಉಳ್ಳಾಲ: ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. 


ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಬಂಧಿತರು. ಇಬ್ಬರು ಆರೋಪಿಗಳು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ತೂಕದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಬಂಧಿತರಿಂದ 14 ಗ್ರಾಂ ಎಂಡಿಎಂಎ ,ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು ಒಂದು ಲಕ್ಷ ಹದಿನೆಂಟುವರೆ ಸಾವಿರ ಮೌಲ್ಯದ ಸೊತ್ತುಗಳನ್ನ ವಶಪಡಿಸಿ ಕೊಳ್ಳಲಾಗಿದೆ. ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ ಐ ಶೀತಲ್ ಹಾಗೂ ಸಿಬ್ಬಂದಿಗಳಾದ ಅಕ್ಬರ್, ಅಶೋಕ್,  ಮಂಜು, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕಳ್ಳತನ ಪ್ರಕರಣ: ಇತ್ತೆ ಬರ್ಪೆ ಅಬೂಬಕ್ಕರ್ ನನ್ನು ಬಂಧಿಸಿದ ಪುತ್ತೂರು ಪೊಲೀಸರು

Posted by Vidyamaana on 2023-12-06 09:20:54 |

Share: | | | | |


ಕಳ್ಳತನ ಪ್ರಕರಣ: ಇತ್ತೆ ಬರ್ಪೆ ಅಬೂಬಕ್ಕರ್ ನನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


“ಇತ್ತೆ ಬರ್ಪೆ” ಅಬೂಬಕ್ಕರನನ್ನು “ಎಕಡ್” ಬಂಧಿ

ಪುತ್ತೂರು : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಉಪ್ಪಳ್ಳಿ ನಿವಾಸಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಬಂಧಿತ ಆರೋಪಿ.


ಪುತ್ತೂರು ನಗರ ಠಾಣಾ ಅ.ಕ್ರ.112/2023 ಕಲಂ 457,380ಐಪಿಸಿ ಹಾಗೂ ಠಾಣಾ ಅ.ಕ್ರ 113/2023 ಕಲಂ 379 ಐಪಿಸಿ ಪ್ರಕರಣದ ಆರೋಪಿಯಾದ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿಲಾಗಿದ್ದು, ನ್ಯಾಯಾಲಯವು ಆರೋಪಿಗೆ ಡಿ.19ರ ವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ.


ಸದ್ರಿ ಆರೋಪಿಯ ಮೇಲೆ ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸುಮಾರು 80ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿರುತ್ತದೆ.

ಆಸ್ಪತ್ರೆಗೆ ತೆರಳಿ ಮನೆಗೆ ಮರಳುತ್ತಿದ್ದ ದಂಪತಿಗೆ ಅಪಘಾತ – ಪತ್ನಿ ದಾರುಣ ಸಾವು

Posted by Vidyamaana on 2024-01-29 18:51:49 |

Share: | | | | |


ಆಸ್ಪತ್ರೆಗೆ ತೆರಳಿ ಮನೆಗೆ ಮರಳುತ್ತಿದ್ದ ದಂಪತಿಗೆ ಅಪಘಾತ – ಪತ್ನಿ ದಾರುಣ ಸಾವು

ಪುತ್ತೂರು:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಬೈಕ್ ಹಾಗೂ ಟಿಪ್ಪರ್ ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್‌ನ ಹಿಂಬದಿ ಸವಾರೆ, ಮಾಣಿ ಖಾಸಗಿ ಶಾಲಾ ಶಿಕ್ಷಕಿ ಮೃತಪಟ್ಟಿರುವ ಘಟನೆ ಜ.29ರಂದು ಮಧ್ಯಾಹ್ನ ನಡೆದಿದೆ.ಬಂಟ್ವಾಳ ತಾಲೂಕು ಇಡಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಪತ್ನಿ ಅನಿತಾ(35ವ.) ಮೃತಪಟ್ಟವರು. ಮಾಣಿ ಸಮೀದ ಗಡಿಯಾರ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಜ.29ರಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ ಪೋಳ್ಯ ಎಂಬಲ್ಲಿ ಮಣ್ಣು ರಸ್ತೆಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಲಾರಿ ಏಕಾಏಕಿ ಡಂಬಾರು ರಸ್ತೆ ಗೆ ಬಂದಾಗ ಬೈಕ್ ಸಾವರನಿಗೆ ನಿಯಂತ್ರಣ ತಪ್ಪಿ  ಟಿಪ್ಪರ್ ಲಾರಿಗೆ  ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಸಣ್ಣ ಪುಟ್ಟ ಗಾಯವಾಗಿದ್ದು, ಸುರೇಶ್ ಕುಲಾಲ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.ಮೃತರ ಪತಿ ಸುರೇಶ್ ಕುಲಾಲ್ ನೀಡಿದ ದೂರಿನಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತಿ ಸುರೇಶ್ ಕುಲಾಲ್, ಪುತ್ರಿ ಋತ್ವಿಯವರನ್ನು ಅಗಲಿದ್ದಾರೆ.



Leave a Comment: